ʼಪುಷ್ಪಕ ವಿಮಾನʼ ಖ್ಯಾತಿಯ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ

ಚೆನ್ನೈ: ಭಾರತೀಯ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತು, ಹೊಸ ಪ್ರಯೋಗಗಳು ಹಾಗೂ ವಿಶಿಷ್ಟ ನಿರೂಪಣಾ ಶೈಲಿಯ ಮೂಲಕ ತನ್ನದೇ ಛಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಶನಿವಾರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ‘ಪುಷ್ಪಕ ವಿಮಾನ’ ಮತ್ತು ಕಾಲಪ್ರಯಾಣದ ಕಥಾಹಂದರ ಹೊಂದಿರುವ ‘ಆದಿತ್ಯ 369’ ಸೇರಿದಂತೆ … Continued

ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ : ಬೆಳ್ಳಿತೆರೆಯಲ್ಲೂ ಅವರು ‘ಮುಖ್ಯಮಂತ್ರಿ’

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಾಯಕರಲ್ಲಿ ಒಬ್ಬರಾಗಿರುವ ಅವರು, ಈ ಚಿತ್ರದಲ್ಲಿಯೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳಲಿದ್ದಾರಂತೆ. ಪೂರ್ಣ ಪ್ರಮಾಣದ ಕಮರ್ಷಿಯಲ್‌ ಸಿನಿಮಾವೊಂದರಲ್ಲಿ ಅವರು ನಟಿಸುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ನಟ ಹಾಗೂ ನಿರ್ಮಾಪಕ ರಾಜೇಶ … Continued

ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲ್ಲ ಅಂದಿದ್ಯಾಕೆ ನಟ ಅನಂತ ನಾಗ್ ?

ಬೆಂಗಳೂರು: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ನಟ ಅನಂತ ನಾಗ್ (Anant Nag) ಅವರು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಬಂದ ಹಿನ್ನೆಲೆಯಲ್ಲಿ ಎನ್‌ಡಿಟಿವಿಯ ದೀಪಕ ಬೋಪಣ್ಣ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ 78 ವರ್ಷದ ಅನಂತ ನಾಗ್, … Continued

ವೀಡಿಯೊಗಳು | ಚೀನಾದ ‘Seedance 2’ ಎಐ ವೀಡಿಯೊ ನೋಡಿದ್ರೆ ಬೆಚ್ಚಿ ಬೀಳ್ತಿರಾ ; ಶೂಟಿಂಗ್ ಇಲ್ಲದೆ ತಯಾರಾಗುತ್ತೆ ಸಿನಿಮಾ : ಹಾಲಿವುಡ್‌ಗೆ ನಡುಕ…!

ಬೀಜಿಂಗ್/ಕ್ಯಾಲಿಫೋರ್ನಿಯಾ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಅಮೆರಿಕ ಮತ್ತು ಚೀನಾ ನಡುವಿನ ಪೈಪೋಟಿ ಈಗ ಹೊಸ ಹಂತಕ್ಕೆ ತಲುಪಿದೆ. ಟಿಕ್‌ಟಾಕ್‌ನ ಮಾತೃ ಸಂಸ್ಥೆ ‘ಬೈಟ್‌ಡ್ಯಾನ್ಸ್’ (ByteDance) ಬಿಡುಗಡೆ ಮಾಡಿರುವ ನೂತನ ಎಐ ವಿಡಿಯೋ ಮಾಡೆಲ್ ‘Seedance 2.0’, ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ಇದರ ಅದ್ಭುತ ಕಾರ್ಯಕ್ಷಮತೆಯನ್ನು ಕಂಡ ಸಾಮಾಜಿಕ ಜಾಲತಾಣ ಬಳಕೆದಾರರು “ಇನ್ನು ಮುಂದೆ … Continued

ಖ್ಯಾತ ನಟ ಮೋಹನಲಾಲಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ನವದೆಹಲಿ: ಖ್ಯಾತ ಮಲಯಾಳಂ ನಟ ಮೋಹನಲಾಲ ಅವರಿಗೆ 2023 ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ತಿಳಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧಿಕೃತ ಟ್ವೀಟ್‌ನಲ್ಲಿ, “ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಮೋಹನಲಾಲ ಅವರಿಗೆ 2023 ರ ಪ್ರತಿಷ್ಠಿತ ದಾದಾಸಾಹೇಬ ಫಾಲ್ಕೆ … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಖ್ಯಾತ ಸಿನೆಮಾ ನಿರ್ದೇಶಕ ಶ್ಯಾಮ್ ಬೆನಗಲ್ ಇನ್ನಿಲ್ಲ

ಮುಂಬೈ: ಖ್ಯಾತ ನಿರ್ದೇಶಕ ಹಾಗೂ 1970 ಮತ್ತು 1980ರ ದಶಕದಲ್ಲಿ ಭಾರತೀಯ ಸಮಾನಾಂತರ ಸಿನಿಮಾಕ್ಕೆ ನಾಂದಿ ಹಾಡಿದ್ದ ಶ್ಯಾಂ ಬೆನಗಲ್ 90 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಪತ್ನಿ ನೀರಾ ಬೆನಗಲ್ ಮತ್ತು ಪುತ್ರಿ ಪಿಯಾ ಬೆನಗಲ್ ಅವರನ್ನು ಅಗಲಿದ್ದಾರೆ. ಡಿಸೆಂಬರ್ 14 ರಂದು 90 ವರ್ಷಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಅವರನ್ನು ಮುಂಬೈನ ವೊಕಾರ್ಡ್ … Continued

ಯಶ್‌ ನಟನೆಯ ‘ಟಾಕ್ಸಿಕ್‌ʼ ಸಿನೆಮಾ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್‌ನಿಂದ ಸದ್ಯಕ್ಕೆ ರಿಲೀಫ್‌

ಬೆಂಗಳೂರು : ನಟ ಯಶ ಪ್ರಧಾನ ಭೂಮಿಕೆಯಲ್ಲಿರುವ ʼಟಾಕ್ಸಿಕ್‌ʼ ಸಿನಿಮಾದ ಶೂಟಿಂಗ್‌ಗಾಗಿ ಬೆಂಗಳೂರಿನ ಜಾಲಹಳ್ಳಿಯ ಎಚ್‌ಎಂಟಿ ಮೀಸಲು ಅರಣ್ಯದಲ್ಲಿ ಮರಗಳ ಹನನ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರ ನಿರ್ಮಾಣ ಸಂಸ್ಥೆ ಕೆವಿಎನ್‌ ಮಾನ್‌ಸ್ಟರ್‌ ಮೈಂಡ್‌ ಕ್ರಿಯೇಷನ್ಸ್‌ ಎಲ್‌ಎಲ್‌ಪಿ ವಿರುದ್ಧದ ತನಿಖೆಗೆ ಮತ್ತು ವಿಚಾರಣಾಧೀನ ನ್ಯಾಯಾಲಯದಲ್ಲಿನ ನ್ಯಾಯಾಂಗ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು … Continued

ಖ್ಯಾತ ಹಿನ್ನೆಲೆ ಗಾಯಕಿ ಪಿ.ಸುಶೀಲಾ ಆಸ್ಪತ್ರೆಗೆ ದಾಖಲು

ಚೆನ್ನೈ: ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಖ್ಯಾತ ಹಿನ್ನೆಲೆ ಗಾಯಕಿ ಪಿ. ಸುಶೀಲಾ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 86 ವರ್ಷದ ಗಾಯಕಿಯನ್ನು ತೀವ್ರ ಹೊಟ್ಟೆ ನೋವಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪಿ. ಸುಶೀಲಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಆ ಭಾರತೀಯ ಚಿತ್ರರಂಗದ ಎವರ್‌ಗ್ರೀನ್ ನೈಟಿಂಗೇಲ್ ಪಿ. … Continued

ಕಾಪಿರೈಟ್ ಉಲ್ಲಂಘನೆ; ನಟ ರಕ್ಷಿತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿರುವ ನವೀನಕುಮಾರ ಎಂಬವರು ’ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿನ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು … Continued