ದೆಹಲಿ ಮುಂಗೇಶಪುರದಲ್ಲಿ ದಾಖಲೆ ಮಟ್ಟದ 52.9 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲು ; ಇದು ಸೆನ್ಸರ್‌ ದೋಷದಿಂದ ಆಗಿದೆ ಎಂದ ಐಎಂಡಿ

ನವದೆಹಲಿ: ದೆಹಲಿಯು ತೀವ್ರತರವಾದ ಶಾಖದ ಅಲೆಯಲ್ಲಿ ತತ್ತರಿಸುತ್ತಿರುವಾಗ, ಬುಧವಾರ ಮಾಧ್ಯಮ ವರದಿಗಳು ಮುಂಗೇಶಪುರದಲ್ಲಿ ಗರಿಷ್ಠ 52.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ವರದಿ ಮಾಡಿವೆ. ಇದು ನಗರದಲ್ಲಿ ದಾಖಲಾದ ಅತ್ಯಧಿಕ ತಾಪಮಾನವಾಗಿದೆ. ಆದಾಗ್ಯೂ, ಭಾರತೀಯ ಹವಾಮಾನ ಇಲಾಖೆ (IMD), ಸೆನ್ಸರ್‌ನಲ್ಲಿನ ದೋಷ ಅಥವಾ ಸ್ಥಳೀಯ ಅಂಶದಲ್ಲಿನ ದೋಷ” ಎಂದು ನಂತರ ಸ್ಪಷ್ಟಪಡಿಸಿದೆ. ಹಾಗೂ ಡೇಟಾ ಮತ್ತು … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಿಸುವ ಯಾವುದೇ ಆದೇಶ ಹೊರಡಿಸಿಲ್ಲ : ಸಚಿವ ಮಹಾದೇವಪ್ಪ ಸ್ಪಷ್ಟನೆ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂಬ ಘೋಷವಾಕ್ಯ ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಘೋಷವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ ಸರ್ಕಾರ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ … Continued

ಅಯೋಧ್ಯೆ ರಾಮಮಂದಿರದ ವಿಚಾರದಲ್ಲಿ ಶೃಂಗೇರಿ ಮಠದ ವಿರುದ್ಧ ಅಪಪ್ರಚಾರ : ಸ್ಪಷ್ಟನೆ ನೀಡಿದ ಮಠ

ಚಿಕ್ಕಮಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ವಿರೋಧಿಸುವಂತೆ ಶೃಂಗೇರಿ ಶ್ರೀಗಳು ಹೇಳಿದ್ದಾರೆ ಎಂದು ಅಪಪ್ರಚಾರ ನಡೆದ ಹಿನ್ನೆಲೆಯಲ್ಲಿ ಈ ಬಗ್ಗೆ ಶೃಂಗೇರಿ … Continued

ಶಕ್ತಿ ಯೋಜನೆ ಸ್ಥಗಿತದ ಊಹಾಪೋಹ: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ರದ್ದತಿ ಬಗ್ಗೆ ನಕಲಿ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಬುಧವಾರ ಮಂಡ್ಯದಲ್ಲಿ ನಡೆದ … Continued

ಬಿಜೆಪಿ ಬಿಡುವ ವದಂತಿ: ತೇಜಸ್ವಿನಿ ಅನಂತಕುಮಾರ ಹೇಳಿದ್ದೇನು ?

ಬೆಂಗಳೂರು : ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಮ್ಮ ಬಗ್ಗೆ ಎದ್ದಿರುವ ಊಹಾಪೋಹಾಗಳಿಗೆ ಈಗ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಸ್ವತಃ ತೆರೆ ಎಳೆದಿದ್ದಾರೆ. ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ … Continued

ಪೊಲೀಸರು ಹಣೆಗೆ ಕುಂಕುಮ, ತಿಲಕ ಇಡಬಾರದೆಂದು ಹೇಳಿಲ್ಲ: ಗೃಹ ಸಚಿವ ಡಾ. ಪರಮೇಶ್ವರ ಸ್ಪಷ್ಟನೆ

ಬೆಂಗಳೂರು : ಪೊಲೀಸರು ಕುಂಕುಮ, ತಿಲಕ ಇಡಬಾರದು ಎಂದು ನಾನು ಯಾವ ಸಭೆಯಲ್ಲೂ ಸೂಚನೆ ಕೊಟ್ಟಿಲ್ಲ. ಆದರೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಸೂಚಿಸಿದ್ದೇನೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸುಳ್ಳು ವದಂತಿ ಹರಡುವುದು ಸರಿಯಲ್ಲ, ಕುಂಕುಮ ಬೊಟ್ಟು, ವಿಭೂತಿ, ತಿಲಕ ಏನು ಬೇಕಾದರೂ ಇಟ್ಟುಕೊಳ್ಳಬಹುದು. … Continued

ಹಿಜಾಬ್ ಕುರಿತು ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ: ಜಮೀರ್ ಅಹಮದ್ ಸ್ಪಷ್ಟನೆ

ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್‍ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ಅತ್ಯಾಚಾರ ಆಗುತ್ತದೆಯೆಂದು ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಹೇಳಿಕೆ ತಪ್ಪಾಗಿ ಅರ್ಥಯಸಿ ಗೊಂದಲ … Continued

ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಮಾಜಿ ಸಚಿವ ಡಿ. ಸುಧಾಕರ

ಚಿತ್ರದುರ್ಗ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಹಗರಣದಲ್ಲಿ ನನ್ನ ಹೆಸರು ತಳಕು ಹಾಕಿಕೊಂಡಿದ್ದು, ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ಡಿ.ಸುಧಾಕರ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿರುವ ಮಹಿಳೆಗೆ ಹಣ ವರ್ಗಾವಣೆ ಮಾಡಿದ್ದೇನೆ ಎಂಬ ಅರೋಪ ಸತ್ಯಕ್ಕೆ ದೂರವಾಗಿದೆ. ನಾನು ಯಾರಿಗೂ ಹಣ ನೀಡಿಲ್ಲ. ಎಸ್‌ಐಟಿ ತನಿಖೆಗೆ ಕರೆದರೆ ಸಹಕರಿಸುತ್ತೇನೆ ಎಂದರು. … Continued