ಹುಬ್ಬಳ್ಳಿ-ಧಾರವಾಡ ಉತ್ತುಂಗಕ್ಕೆ ಒಯ್ಯುವೆ ಎಂದು ಭರವಸೆ, ಶೆಟ್ಟರ ಜೊತೆ ಮಾತನಾಡುವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಸ್ಥಳ. ನನ್ನ ಎಲ್ಲ ಶಿಕ್ಷಣ ಮುಗಿದಿದ್ದು ಇಲ್ಲಿಯೇ. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ ಎಂದು ಕರ್ನಾಟಕದ ನೂತನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹುಬ್ಬಳ್ಳಿಯನ್ನು ಹೀಗೆ ನೆನಪಿಸಿಕೊಂಡರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾದ ನಂತರ ಹುಬ್ಬಳ್ಳಿಗೆ ಪ್ರಪ್ರಥಮವಾಗಿ ಆಗಮಿಸಿದ ನಂತರ ಅವರು ಗುರುವಾರ ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued

ಯಡಿಯೂರಪ್ಪ ಬೆಂಬಲಕ್ಕೆ ನಿಂತ ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

ಚಿತ್ರದುರ್ಗ: ಸರ್ಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ನಡೆಸಲು ಸಾಧ್ಯ ಎಂದು ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂಥ ಮುಖ್ಯಮಂತ್ರಿ ಇದ್ದರೂ ಪರಿಪೂರ್ಣ ಆಡಳಿತ ಅಸಾಧ್ಯ ಎಂದು ಹೇಳಿದ್ದಾರೆ. ಉತ್ತಮ … Continued

ನಾಯಕತ್ವ ಬದಲಾವಣೆ: ಊಹಾಪೋಹಕ್ಕೆ ತೆರೆ ಎಳೆದ ಡಿಸಿಎಂ

ನವ ದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡರು ನನ್ನ ಮೇಲಿನ ಪ್ರೀತಿಯಿಂದಾಗಿ, ನಾನು ಮುಖ್ಯಮಂತ್ರಿಯಾಗಲಿ ಎಂದು ಹೇಳಿರಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸದಾನಂದಗೌಡರು ಉದ್ದೇಶಪೂರ್ವಕವಾಗಿ ಹೇಳಿದ್ದಲ್ಲ, ಆಕಸ್ಮಿಕವಾಗಿ ಆ ಮಾತನ್ನು ಹೇಳಿದ್ದಾರೆ. … Continued

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ವಿಚಾರಣೆಗೆ ಸಿಎಂ ಲಗಾಮು

ಬೆಂಗಳೂರು:ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳ ತನಿಖೆಗೆ ಏಕಾಏಕಿ ಒಳಪಡಿಸಬಾರದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ದೂರು ಹೆಚ್ಚಾಗುತ್ತಿರುವುದು ನೌಕರರ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಾಗಿದೆ, ಹೀಗಾಗಿ ಏಕಾಏಕೀ ತನಿಖೆಗೆ … Continued

ಸಿಎಂ ಹಣದ ಅವ್ಯವಹಾರ: ಉನ್ನತ ಮಟ್ಟದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮಾರಿಷಿಸ್‌ಗೆ ತೆರಳಿ ಅಕ್ರಮ ಹಣ ಇರಿಸಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪದ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬುಜೆಪಿ ಶಾಸಕ ಮಾಡಿದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಪ ಕುರಿತು ಸರ್ವೋಚ್ಚ ನ್ಯಾಯಾಲಯದ … Continued

ಮೀಸಲಾತಿ ಬೇಡಿಕೆ: ಕಾನೂನು ಚೌಕಟ್ಟಿನೊಳಗೆ ನ್ಯಾಯ ಒದಗಿಸುವ ಭರವಸೆ

ಮೈಸೂರು:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಹೋರಾಟ ಆರಂಭಿಸಿವೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮೀಸಲಾತಿ ಹೋರಾಟ ಸಂಬಂಧ ತಜ್ಞರ ಜೊತೆ ಚರ್ಚೆಗಳು ನಡೆದಿವೆ. ಎಲ್ಲ ಸಮುದಾಯಗಳಿಗೆ ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಸಾಧ್ಯವೂ ಅದನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.. ಮೀಸಲಾತಿಗಾಗಿ ನಾಯಕ, ಕುರುಬ, ವೀರಶೈವ ಪಂಚಮ‌ಸಾಲಿ ಸೇರಿದಂತೆ … Continued

ಸಾಲ ವಿತರಣೆ ವಿಳಂಬ: ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು:  ಪ್ರಧಾನಮಂತ್ರಿಗಳ ಸ್ವನಿಧಿ ಯೋಜನೆಯಡಿ ಸಾರ್ವಜನಿಕರಿಗೆ ಸರಿಯಾಗಿ ಸಾಲ ಸೌಲಭ್ಯ ನೀಡದೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಳಿ ಬಿಡಿಸಿದರು. ವಿಧಾನಸೌಧದಲ್ಲಿ ಸ್ವನಿಧಿ ಮತ್ತು ಪ್ರಧಾನ ಮಂತ್ರಿಗಳ ಆವಾಸ್ ಯೋಜನೆ, ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಾರ್ವಜನಿಕರಿಗೆ ಸಾಲ ವಿತರಣೆ ಮಾಡಲು ವಿಳಂಬ ಧೋರಣೆ … Continued