ಆಗಸ್ಟ್‌ 15ರ ಬಳಿಕ ವಿಪಕ್ಷ ನಾಯಕನ ಆಯ್ಕೆ : ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕನ ಸ್ಥಾನದ ಕುರಿತು ಆಗಸ್ಟ್ 15ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ಭರವಸೆ ನೀಡಿದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಗುರುವಾರ ಮಾದ್ಯಮದವರ ಜೊತೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಆ ವೇಳೆ ಕೇಂದ್ರ ಗೃಹ ಸಚಿವ … Continued

ಬಿಜೆಪಿ ಬಹುಮತ ಪಡೆಯಲಿದೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಗಳು ಹೇಳಿಕೊಳ್ಳಲಿ. ಆದರೆ ನಾವೇ ಸ್ಪಷ್ಟ ಬಹುಮತ ಪಡೆಯುತ್ತೇವೆ. ಈ ಮಾತಿಗೆ ನಾನು ಈಗಲೂ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಗುರುವಾರ, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ. ನಾವು ಬಹುಮತ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. … Continued

ನಮ್ಮ ‘ಕಂಪ್ಲೀಟ್ ಗ್ರೌಂಡ್ ರಿಪೋರ್ಟ್’ ಪ್ರಕಾರ ಬಿಜೆಪಿಗೆ ಸಂಪೂರ್ಣ ಬಹುಮತ : ಸಿಎಂ ಬೊಮ್ಮಾಯಿ‌

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನಿಕಟ ಪೈಪೋಟಿ ಇದೆ ಎಂದು ಎಕ್ಸಿಟ್ ಪೋಲ್ ಭವಿಷ್ಯವನ್ನು ಮುಖ್ಯಮಂತ್ರಿ ಬೊಮ್ಮಾಯಿ ತಳ್ಳಿಹಾಕಿದ್ದಾರೆ. ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ತಳಮಟ್ಟದ ವರದಿ (ಗ್ರೌಂಡ್‌ ರಿಪೋರ್ಟ್‌) ಮಾಹಿತಿಯು ತುಂಬಾ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಂಸದ ಸಚಿವ ಸಿ.ಸಿ ಪಾಟೀಲ, ಶಿವಕುಮಾರ ಉದಾಸಿ ಮೊದಲಾದವರು ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ ಸಿದ್ಧಾರೂಢ … Continued

ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಕೆಲಕಾಲ ಆತಂಕ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್‌ ಹಾರಾಟ ನಡೆಸುವ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕ ಸೃಷ್ಟಿ ಮಾಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ. ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೋಗುವ ಸಲುವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಜಿಲ್ಲೆಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ಗೆ ಬಂದಿದ್ದರು. ಅಲ್ಲಿಂದ ಕೊಲ್ಲೂರಿಗೆ ಹೋಗಲು ಅಲ್ಲಿಂದ ನಿರ್ಗಮಿಸಿದ ಬಳಿಕ ಹೆಲಿಪ್ಯಾಡ್‌ … Continued

ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ನವದೆಹಲಿ: ದೆಹಲಿಯಲ್ಲಿ ಮಹತ್ವದ ಸಭೆಗಳ ನಡುವೆ ಸೋಮವಾರ (ಏಪ್ರಿಲ್ 10) ರಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದೆ. ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶನಿವಾರ ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು … Continued

ಏಪ್ರಿಲ್‌ 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ : ಸಿಎಂ ಬೊಮ್ಮಾಯಿ

ಬೆಂಗಳೂರು : ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾತನಾಡಿದ ಅವರು, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿ ಬಿಡುಗಡೆಯ ಮೊದಲು ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ … Continued

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

ಚಿಕ್ಕಬಳ್ಳಾಪುರ : ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು, ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟದ … Continued

ಬಿಜೆಪಿ ಶಾಸಕರ ಪುತ್ರನ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ : ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. 40 ಲಕ್ಷ ರೂ.ಗಳನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಶಾಂತ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ … Continued

ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ: ಸಿಎಂ ಬೊಮ್ಮಾಯಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ, ಮಾರ್ಚ್‌ ೧ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಏತನ್ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗ ಜಾರಿ ಸಂಬಂಧ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಈ ವರದಿ ಕೈಸೇರಿದ ಬಳಿಕ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ … Continued