ದೆಹಲಿಯಿಂದ ಸೂಚನೆ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ಹೋದ ನಂತರ ತಿಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಹಾಗಾಗಿ ಹೈಕಮಾಂಡ್ ಸಂದೇಶ ಬಂದ ನಂತರವೇ ಮಂತ್ರಿ ಮಂಡಳದ ವಿಸ್ತರಣೆ ಕುರಿತು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ.ನಗರದಲ್ಲಿರುವ ತಮ್ಮ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ … Continued

ಸಭಾಪತಿ ಬಸವರಾಜ ಹೊರಟ್ಟಿ ಪತ್ರಕ್ಕೆ ಸ್ಪಂದಿಸಿದ ಸಿಎಂ: ಅನುದಾನಿತ ಶಾಲಾ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು

ಹುಬ್ಬಳ್ಳಿ: ರಾಜ್ಯ ಸರಕಾರಿ ಮಹಿಳಾ ನೌಕರರಿಗೆ ನೀಡುವ ಶಿಶುಪಾಲನಾ ರಜೆಯ ಅನುಕೂಲತೆಗಳನ್ನು ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೂ ವಿಸ್ತರಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಅನುದಾನಿತ ಮಹಿಳಾ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೂ 180 ದಿನಗಳ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸುವಂತೆ ಆದೇಶ … Continued

ಅಮಿತ್ ಶಾ ಕರ್ನಾಟಕ ಭೇಟಿ ಸಮಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ದೆಹಲಿಗೆ ತರಳುತ್ತಿದ್ದು, ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರು ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 3ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆಗ ಸಂಪುಟ ರಚನೆ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ … Continued

ಕೊರೊನಾ ಸೋಂಕು ತಡೆ: ಸದ್ಯಕ್ಕಂತೂ ಕಠಿಣ ನಿರ್ಬಂಧ ಜಾರಿಯಿಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಡೆಗೆ ಸದ್ಯಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡುವ ಅಗತ್ಯವಿಲ್ಲ. ಮೂರು ಟಿ ಸೂತ್ರವನ್ನು ಅಳವಡಿಸಿಕೊಂಡು ಸೋಂಕು ನಿಯಂತ್ರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೋವಿಡ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಶ್ಯಕತೆ ಬಂದಾಗ … Continued

ಮೈ ಸವರಲು ಹೋದಾಗ ಮುನ್ನುಗ್ಗಿದ ಎತ್ತು: ಸಂಭವನೀಯ ಅಪಾಯದಿಂದ ಸಿಎಂ ಬೊಮ್ಮಾಯಿ ಪಾರು…ದೃಶ್ಯ ಸೆರೆ

ವಿಜಯಪುರ : ಜಿಲ್ಲೆಯ ಬೂದಿಹಾಳ ಪೀರಾಪುರ ಏತ ನೀರಾವರಿ ಯೋಜನೆ ಮೊದಲ ಹಂತ ಉದ್ಘಾಟನೆ ಹಾಗೂ ಎರಡನೇ ಹಂತದ ಯೋಜನೆ ಕಾಮಗಾರಿಗೆ ಚಾಲನೆಗೆ ಮುನ್ನ ಎತ್ತು, ಗೋವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದ್ದರು. ಎತ್ತುಗಳಿಗೆ ಪೂಜೆ ಸಲ್ಲಿಸುವ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ಮುಗಿದ ನಂತರ ಎತ್ತಿನ ಮೈ ಸವರಲು ಮುಂದಾಗಿದ್ದಾರೆ. … Continued

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟದಿಂದ ಒಪ್ಪಿಗೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಈ ನಿರ್ಧಾರವನ್ನು ಅನುಮೋದನೆಗಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ಸಂಜೆ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ … Continued

50 ಕೋಟಿ ರೂ.ಗಳಿಗಿಂತ ಮೇಲ್ಪಟ್ಟ ಕಾಮಗಾರಿಗಳ ಅನುಮೋದನೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಶಿವಮೊಗ್ಗ: ರಾಜ್ಯದ ಎಲ್ಲ ಇಲಾಖೆಯ 50 ಕೋಟಿ ರೂ.ಗಳ ಮೇಲ್ಪಟ್ಡ ಕಾಮಗಾರಿಗಳಿಗೆ ಅನುಮೋದನೆ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಗಾರಿಗಳ ಅಂದಾಜು ವೆಚ್ಚ ಮಾಡುವಾಗಿನಿಂದಲೇ ಎಲ್ಲವೂ ಪ್ರಾರಂಭವಾಗುತ್ತದೆ ಎಂಬ ದೂರಿನ ಹಿನ್ನೆಲೆಯಲ್ಲಿ ಹಾಗೂ ತಮಗೆ ಬೇಕಾದಂತವರಿಗೆ ಟೆಂಡರ್ … Continued

ಪರ್ಸಂಟೇಜ್‌ ಬಗ್ಗೆ ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ನೀಡಿದರೆ ಸಂಪೂರ್ಣ ತನಿಖೆ: ಸಿಎಂ ಬೊಮ್ಮಾಯಿ

ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ನೀಡಲಿ, ಆ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಜ್ಞಾನಿ … Continued

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವದೆಹಲಿಯಲ್ಲಿ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ವಿಶೇಷ ಸಭೆ‌ … Continued

ಪ್ರಾಥಮಿಕ ತನಿಖೆ ಮುಗಿಯುವವರೆಗೆ ಸಚಿವ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮವಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಾಥಮಿಕ ತನಿಖೆ ಮುಗಿಯುವ ವರೆಗೆ ಸಚಿವ ಈಶ್ವರಪ್ಪ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಂತೋಷ್ ಸಾವಿನ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು, ಸತ್ಯಾಂಶ ಹೊರಬರಲಿ, ಆಧಾರ ರಹಿತ ಆರೋಪಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ, ಅವರ ಬಳಿ ಏನಾದರೂ ಪುರಾವೆ ಇದ್ದರೆ ಸರ್ಕಾರದೊಂದಿಗೆ ಹಂಚಿಕೊಳ್ಳಲಿ, ನಾವು ತನಿಖೆ ನಡೆಸುತ್ತೇವೆ … Continued