ನೇಕಾರರು ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಸಿಎಂ

ಉಡುಪಿ: ಈ ವರ್ಷದಿಂದ ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಸೋಮವಾರ ಉಡುಪಿ ಜಿಲ್ಲೆ ಉಚ್ಚಿಲ ಕ್ಷೇತ್ರದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೀನುಗಾರಿಕೆ ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು … Continued

ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ: ಸಿಎಂ ಬೊಮ್ಮಾಯಿ

ನವದೆಹಲಿ: ಈ ಸಲದ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಕೇಂದ್ರದ ಜಲಶಕ್ತಿ, ಇಂಧನ, ಪರಿಸರ, ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇನೆ, ಎಲ್ಲರಿಂದಲೂ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಗುರುವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 16 ಮತ್ತು 17 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರ ರಾಜ್ಯ ಸರ್ಕಾರದ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್‌ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 … Continued

ಆಜಾನ್ ಕುರಿತು ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ, ಗೊಂದಲ ಸೃಷ್ಟಿಸಬೇಡಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಆಜಾನ್ ಕುರಿತು ಸರ್ಕಾರ ಹೊಸ ಕಾನೂನು ತಂದಿಲ್ಲ, ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಒಂದೇ ಎಂದರು. ಇವೆಲ್ಲಾ ಹೊಸ ವಿಚಾರಗಳೇನೂ ಅಲ್ಲ, ಹಲವಾರು ವರ್ಷಗಳಿಂದ ಇವೆ. ಕೆಲವು ಆದೇಶಗಳು 2001, 2002, … Continued

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಇಂದು, ಬುಧವಾರ ಕಾಂಗ್ರೆಸ್ ಶಾಸಕರಾದ ಪ್ರಿಯಾಂಕ್ ಖರ್ಗೆ, ಭೀಮಾ ನಾಯಕ್, ಅಜಯ್ ಧರ್ಮಸಿಂಗ್ ಮತ್ತಿತರರು ಧರಣಿ ನಡೆಸಿ ಪರಿಶಿಷ್ಟ ಪಂಗಡಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಎಂದು … Continued

ಅಂತಾರಾಜ್ಯ ಜಲವಿವಾದ: ಏಪ್ರಿಲ್ ನಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದ್ದು, ಈ ಬಗ್ಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದೇನೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಭಾನುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂತಾರಾಜ್ಯ ಜಲವಿವಾದಗಳನ್ನು ಆದಷ್ಟು ಬೇಗ ಬಗೆಹರಿಸಲು … Continued

ಚಿತ್ರಕಲಾ ಪರಿಷತ್‍ಗೆ ಸ್ವಾಯತ್ತ ವಿವಿ ಸ್ಥಾನಮಾನ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸಾವಿರಾರು ಕಲಾವಿದರನ್ನು ಸೃಷ್ಟಿಸುವ ಚಿತ್ರಕಲಾ ಪರಿಷತ್‍ಗೆ ಡೀಮ್ಡ್ (ಸ್ವಾಯತ್ತ) ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಕುಮಾರಕೃಪ ರಸ್ತೆಯಲ್ಲಿ ಇಂದು, ಭಾನುವಾರ ಚಿತ್ರಕಲಾ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚಿತ್ರಸಂತೆ ಉದ್ಘಾಟಿಸಿ ಮಾತನಾಡಿದ ಅವರು, ಚಿತ್ರಕಲಾ ಪರಿಷತ್ ಸಾವಿರಾರು ಕಲಾವಿದರಿಗೆ ಆಶ್ರಯ ನೀಡಿದೆ. ಅನೇಕ ಪ್ರತಿಭಾವಂತರನ್ನು ಬೆಳಕಿಗೆ ತಂದಿದೆ. ಹೀಗಾಗಿ … Continued

ಏಪ್ರಿಲ್‌ 5ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಸಾಧ್ಯತೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸರ್ಕಾರದ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ 5ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‍ ಸಮಾವೇಶ ಆಯೋಜನೆಗೆ ಪ್ಲಾನ್‍ ರೂಪಿಸಲಾಗಿದೆ.ಇದಲ್ಲದೆ ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು … Continued

ಬಜೆಟ್ ಘೋಷಣೆಗಳ ಪರಿಣಾಂಕಾರಿ ಅನುಷ್ಠಾನಕ್ಕೆ ಇದೇ ಮೊದಲ ಬಾರಿಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬಜೆಟ್ ಘೋಷಣೆಗಳ ಶೀಘ್ರ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನಲ್ಲಿನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶ ನೀಡುವುದು … Continued

ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ವಿರುದ್ಧದ ನಿರ್ಣಯ ಕಾನೂನುಬಾಹಿರ: ಸಿಎಂ ಬೊಮ್ಮಾಯಿ

ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿರುದ್ಧ ನಿರ್ಣಯ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಕಸಿದುಕೊಳ್ಳುವ ಇದು ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ. ಈ ನಿರ್ಣಯ ಕಾನೂನು ಬಾಹಿರವಾಗಿದೆ ಎಂದು ಹೇಳಿದ್ದಾರೆ. ತಮಿಳುನಾಡು … Continued