ಸರ್ಕಾರದ ನಿಯಂತ್ರಣದಿಂದ ದೇವಾಲಯಗಳಿಗೆ ಮುಕ್ತಿ, ಸ್ವಾಯತ್ತತೆ: ಬಜೆಟ್‌ನಲ್ಲಿ ಬೊಮ್ಮಾಯಿ ಪ್ರಸ್ತಾಪ

ಬೆಂಗಳೂರು: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ ಅಭಿವೃದ್ಧಿ ಕಾಮಗಾರಿಗಳ ವಿವೇಚನೆಯನ್ನ ದೇವಾಲಯಗಳಿಗೆ ಪ್ರತ್ಯಾ ಯೋಜಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಶುಕ್ರವಾರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ … Continued

2.65 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ 72 ಸಾವಿರ ಕೋಟಿ ರೂ. ಸಾಲದ ಪ್ರಸ್ತಾಪ…!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ ಮಂಡಿಸಿದ್ದಾರೆ. ಒಟ್ಟು 2,65,721 ಕೋಟಿ ರೂ. ಮೊತ್ತದ ಕೊರತೆ ಬಜೆಟ್‌ ಮಂಡಿಸಿದ್ದು, ಆದಾಯಕ್ಕಿಂತಲೂ 5 ಸಾವಿರ ಕೋಟಿ ರೂ. ಹೆಚ್ಚಿನ ಬಜೆಟ್‌ ಮಂಡನೆಯಾಗಿದ್ದು, ರಾಜ್ಯದ ಮೇಲೆ ಒಟ್ಟು 72 ಸಾವಿರ ಕೋಟಿ ರೂ. ಸಾಲ ಇದೆ ಎಂದು ಬೊಮ್ಮಾಯಿ ತಮ್ಮ ಆಯವ್ಯಯದಲ್ಲಿ ತಿಳಿಸಿದ್ದಾರೆ. ಯಾವುದೇ … Continued

ಕರ್ನಾಟಕ ಬಜೆಟ್‌ 2022-23 : 15 ಸಾವಿರ ಶಿಕ್ಷಕರು, 27 ಸಾವಿರ ಅತಿಥಿ ಶಿಕ್ಷಕರ ನೇಮಕ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯ್ತಿ ಬಸ್‌ ಪಾಸ್‌ ಘೋಷಣೆ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಓತ್ತು ನೀಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕ ಆಗುವ ವರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು … Continued

ಕರ್ನಾಟಕ ಬಜೆಟ್‌ 2022-23: ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಏನೇನು ಘೋಷಣೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಲವು ಘೋಷಣೆ ಮಾಡಿದ್ದಾರೆ. ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ … Continued

ಕರ್ನಾಟಕ ಬಜೆಟ್‌-2022-23: ಬಿಬಿಎಂಪಿ ಚುನಾವಣೆಯತ್ತ ದೃಷ್ಟಿ: ಬೆಂಗಳೂರಿಗೆ ಭರಪೂರ ಕೊಡುಗೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ ರೂ. ಮೀಸಲಿಡಲಾಗಿದ್ದು, ನಮ್ಮ ಮೆಟ್ರೋ, ಸಬ್‌ ಅರ್ಬನ್‌ ರೈಲು, ಪೆರಿಫೆರಲ್‌ ರಿಂಗ್‌ ರೋಡ್‌ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಅಲ್ಲದೆ … Continued

ಕರ್ನಾಟಕ ಬಜೆಟ್‌-2022-23: ಕೃಷಿ ವಲಯಕ್ಕೆ 33,700 ಕೋಟಿ ರೂ. ಅನುದಾನ, ರಿಯಾಯ್ತಿ ಬಡ್ಡಿಯಲ್ಲಿ 33 ಲಕ್ಷ ರೈತರಿಗೆ ಸಾಲ ಸೌಲಭ್ಯ

ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು. 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ ವಿಸ್ತರಣೆ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಪ್ರಸ್ತಾಪ, … Continued

ಕರ್ನಾಟಕ ಬಜೆಟ್‌-2022-23: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ.ಗಳ ಸಹಾಯಧನ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಹೋಗುವವರಿಗೆ ಬಂಪರ್​ ಕೊಡುಗೆ ನೀಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಅವರು ಪ್ರಕಟಿಸಿದ್ದಾರೆ. ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಕ್ಷೇತ್ರಗಳಿಗೆ ಪ್ಯಾಕೇಜ್ ಟೂರ್‌ ಘೋಷಣೆ ಮಾಡಿದ್ದಾರೆ. 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ … Continued

ಕರ್ನಾಟಕ ಬಜೆಟ್‌-2022- ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರ ಗೌರವ ಧನ ಹೆಚ್ಚಳ, ಹಾಲು ಉತ್ಪಾದಕರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಹಿ ಸುದ್ದಿ ನೀಡಿದ್ದು, ಅವರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರಿಗೆ ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000-1500 ರೂ.ಗಳ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, … Continued

ನಾಳೆ ರಾಜ್ಯ ಬಜೆಟ್ ಮಂಡನೆ, ಭರಪೂರ ನಿರೀಕ್ಷೆ, ಬೀಳಲಿದೆಯೇ ಅನಗತ್ಯ ವೆಚ್ಚಕ್ಕೆ ಕಡಿವಾಣ..?

ಬೆಂಗಳೂರು :ಕರ್ನಾಟಕದ ಬಜೆಟ್ ಅಧಿವೇಶನ ನಾಳೆ, ಮಾರ್ಚ್‌ ೪ರಿಂದ ಆರಂಭವಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ೪ರಂದು ಮಧ್ಯಾಹ್ನ ೧೨: ೩೦ಕ್ಕೆ ತಮ್ಮ ಚೊಚ್ಚಲ ಬಜೆಟ್‌ ಮಂಡಿಸಲಿದ್ದಾರೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವ ಜನಪರ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡುವ ಬಜೆಟ್ ಇದಾಗಲಿದೆ ಎಂಬ ನಿರೀಕ್ಷೆಯಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿ ಇರುವಾಗ … Continued

ಮಾರ್ಚ್ 4ರಂದು ತಮ್ಮ ಮೊದಲ ಬಜೆಟ್ ಮಂಡಿಸಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಮುಂಗಡ ಅಧಿವೇಶನ ಮಾರ್ಚ್ 4 ರಿಂದ 30 ರ ವರೆಗೆ ನಡೆಯಲಿದ್ದು, ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4 ರಂದು ಮಧ್ಯಾಹ್ನ 12.30 ಕ್ಕೆ 2022-23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಒಟ್ಟು 17 ದಿನಗಳ ಸದನದ ಕಾಲ ಕಲಾಪ ನಡೆಯಲಿದ್ದು ಬಜೆಟ್ ಮೇಲಿನ ಚರ್ಚೆ, ವಿಧೇಯಕಗಳ … Continued