ಹರ್ಷ ಕೊಲೆ ಪ್ರಕರಣದ ತನಿಖೆ ನೋಡಿಕೊಂಡು ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. … Continued

೪೫ ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಪ್ರಕ್ರಿಯೆ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ೪೫ ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾಪರಿಷತ್‌ನಲ್ಲಿ ಇಂದು, ಗುರುವಾರ ಹೇಳಿದರು. ೧೫ ಸಾವಿರ ಶಿಕ್ಷಕರ ನೇಮಕಾತಿ, ೧೬ ಸಾವಿರ ಪೊಲೀಸರ ನೇಮಕಾತಿ ಹಾಗೂ ಹೈದರಾಬಾದ್-ಕರ್ನಾಟಕದ ವಿವಿಧ ಇಲಾಖೆಗಳ ಸರಿಸುಮಾರು ೧೪ ಸಾವಿರ ಹುದ್ದೆಗಳು ಸೇರಿದಂತೆ ೪೫ ಸಾವಿರ ಹುದ್ದೆಗಳ ಭರ್ತಿಗೆ … Continued

ಸೋಮವಾರದಿಂದ ರಾಜ್ಯಾದ್ಯಂತ ಹೈಸ್ಕೂಲ್ ಪುನರಾರಂಭ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ತ್ರಿ ಸದಸ್ಯ ಪೀಠ ಶೀಘ್ರವೇ ಕಾಲಾ-ಕಾಲೇಜು ಆರಂಭಿಸಿ ಎಂದು ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿ ತೀರ್ಮಾನಿಸಿದ್ದು, ಸೋಮವಾರ ಫೆ. 14 ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ. ಮಹತ್ವದ … Continued

ಕೆಪಿಎಸ್‌ಸಿ 2011ರ ಅಭ್ಯರ್ಥಿಗಳ ಸಕ್ರಮಕ್ಕೆ ಕಾನೂನು ತರಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು: 2011 ರ ಕೆಪಿಎಸ್‌ಸಿ 362 ಪ್ರೊಬೆಷನರಿ ಅಭ್ಯರ್ಥಿಗಳ ಆಯ್ಕೆಯನ್ನು ಸಕ್ರಮಗೊಳಿಸಲು ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಅಸಿಂಧುಗೊಂಡಿರುವ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲು ಕರ್ನಾಟಕ ನಾಗರೀಕ ಸೇವೆಗಳು (2011ರ ಗೆಜೆಟ್‌ ಪ್ರೊಬೆಷನರಿ ನೇಮಕಾತಿ … Continued

ತಮಿಳುನಾಡು ನದಿ ಜೋಡಣೆ ಯೋಜನೆಗಳಿಗೆ ಆಕ್ಷೇಪ ಸಲ್ಲಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ನವದೆಹಲಿ: ತಮಿಳುನಾಡು ಸರ್ಕಾರ ಕೈಗೊಂಡಿರುವ ಹೊಗೆನಕಲ್ ಜಲವಿದ್ಯುತ್ ಯೋಜನೆ ಮತ್ತು ಕಾವೇರಿ, ಗುಂಡಾರ್ ಹಾಗೂ ವೈಗೈ ನದಿಜೋಡಣೆ ಯೋಜನೆಗಳನ್ನು ನ್ಯಾಯಾಲಯದ ಮೂಲಕ ವಿರೋಧಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಮಂಗಳವಾರ ಅಂತಾರಾಜ್ಯ ಜಲವಿವಾದಗಳ ಬಗ್ಗೆ ಅವರು ಸಚಿವರು, ಹಿರಿಯ ನ್ಯಾಯವಾದಿಗಳು, ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ … Continued

ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ತರಬೇತಿ ಕೋರ್ಸ್ ಶೀಘ್ರವೇ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣೆ ತರಬೇತಿ ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇಂದು, ಭಾನುವಾರ ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದ ‘ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪೊಲೀಸ್ ತರಬೇತಿ ಶಾಲೆಗಳನ್ನು ಬಳಸಿಕೊಂಡು ಶಾಲಾ-ಕಾಲೇಜುಗಳ ಹೆಣ್ಣು … Continued

ಗ್ರಾಮ ಒನ್ ಕೇಂದ್ರಗಳಲ್ಲಿ ಬಿಪಿಎಲ್-ಎಪಿಎಲ್ ಕಾರ್ಡ್‍ಗಳ ವಿತರಣೆ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‍ಗಳಿಗೆ ಮಂಜೂರಾತಿ ನೀಡಲಾಗಿದ್ದು, ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗ್ರಾಮ ಒನ್ ಯೋಜನೆಯ ಪ್ರಗತಿ ಕುರಿತು ಶನಿವಾರ ಜಿಲ್ಲಾಡಳಿತ ಹಾಗೂ ಗ್ರಾಮ ಒನ್ ಕಂಪ್ಯೂಟರ್ ಆಪರೇಟರುಗಳೊಂದಿಗೆ ನಡೆದ ವಿಡಿಯೊ ಸಂವಾದದಲ್ಲಿ ಮಾತನಾಡಿ ಅವರು, … Continued

ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ನಿಯಂತ್ರಣ’ ಸಭೆ: ನಿರ್ಬಂಧಗಳು ಇನ್ನಷ್ಟು ಸಡಿಲ..?

ಬೆಂಗಳೂರು: ನಾಳೆ ಕೋವಿಡ್ ನಿಯಂತ್ರಣ ಸಭೆ ನಡೆಯುತ್ತಿದ್ದು, ಸಭೆಯ ನಂತರ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆಯಲಿದೆಯೇ ಎಂಬ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಈಗ ನೈಟ್ ಕರ್ಫ್ಯೂ ( Night Curfew ) ಹಾಗೂ ಹೆಚ್ಚು ಜನರು ಸೇರುವುದಕ್ಕೆ ನಿರ್ಬಂಧವಿದೆ. ಈಗಾಗಲೇ ರಾತ್ರಿ ಕರ್ಫ್ಯೂ … Continued

ಮಾರ್ಚ್‌ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ

ಬೆಂಗಳೂರು: ಮುಂದಿನ‌ ತಿಂಗಳು ಫೆ.14ರಿಂದ 25ರ ವರೆಗೆ ವಿಧಾನ ಮಂಡಲ ಅಧೇವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವುದಾಗಿ ತಿಳಿಸಿದರು. ಅಲ್ಲದೆ ಸಂಸತ್ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲ … Continued

ಹೈಕಮಾಂಡ್‌ ಜೊತೆ ಚರ್ಚೆಯಾದ ನಂತರವೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ಸೂಚಿಸಿದಾಗ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಸದ್ಯವೇ ಸಂಪುಟ ವಿಸ್ತರಣೆಯಿಲ್ಲ ಎಂಬ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ವಿಚಾರದಲ್ಲಿಯೂ ಗೊಂದಲ ಇಲ್ಲವೇ ಇಲ್ಲ. ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇರುವಾಗ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆಗಳು ಸಹಜ. ಆದರೆ ಪಕ್ಷದ … Continued