ಕಾರ್ಮಿಕ ಮಕ್ಕಳಿಗೆ ನೇರ ವಿದ್ಯಾರ್ಥಿ ವೇತನ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಹರ್ಷ

ಬೆಂಗಳೂರು : ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಳಸ್ಥರದ ಜನರಿಗೆ ನೀಡಲಾಗುವ ಈ ಮೊತ್ತವು … Continued

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ: ಇಂದು ಸಂಜೆ ಸಿಎಂ ಮಹತ್ವದ ಸಭೆ, ಕಠಿಣ ನಿಯಮ ಜಾರಿಯಾಗುತ್ತಾ..?

ಬೆಂಗಳೂ: ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಏರಿಕೆ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ ಈಗ ಜಾರಿಗೊಳಿಸಿರುವ ನಿರ್ಬಂಧಗಳು … Continued

ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಪ್ರಕಾರ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಭೇದ ಭಾವ ಮಾಡದೆ ಕಾನೂನು ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್.ಟಿ.ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆಗಲಿ, ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ … Continued

ಹಿಂದೂ ದೇಗುಲಗಳನ್ನು ಕಾನೂನಿನಿಂದ ಸ್ವತಂತ್ರ ಮಾಡುತ್ತೇವೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮತಾಂತರ ಕಾಯ್ದೆ ಜಾರಿಗೆ ವಿಶೇಷ ಕಾರ್ಯ ಪಡೆ ರಚನೆ ಮಾಡಲಾಗುತ್ತದೆ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿಯಲ್ಲೇ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ. ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ. ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸುತ್ತೇವೆ. ಸರ್ವ … Continued

ಸಿಎಂ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಪ್ರಯಾಣ ವಿಳಂಬ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅವರ ಪ್ರಯಾಣ ಎರಡು ಗಂಟೆಗಳ ಕಾಲ ವಿಳಂಬಗೊಂಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣ ವಿಳಂಬವಾಗಲಿದ್ದು, ಬೊಮ್ಮಾಯಿ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿಯೇ ವಿಶ್ರಾಂತಿ ಕೊಠಡಿಯಲ್ಲಿ ಕಾಯುತ್ತಿದ್ದಾರೆ. ಇಂದು, ಮಂಗಳವಾರ ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ … Continued

ರೈತರ ಬೆಳೆ ಪರಿಹಾರ ಮೊತ್ತ ಹೆಚ್ಚಳ- ರಾಜ್ಯದಿಂದ 1200 ಕೋಟಿ ರೂ. ಹೆಚ್ಚುವರಿ ಪರಿಹಾರ : ಸಿಎಂ ಬೊಮ್ಮಾಯಿ

ಸುವರ್ಣಸೌಧ(ಬೆಳಗಾವಿ): ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದರು. ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಅವರು, ಒಟ್ಟು ೧೦ ಲಕ್ಷಕ್ಕೂ ಹೆಚ್ಚಿನ ರೈತರಿಗೆ ೯೬೯ ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದರು. ಎನ್.ಡಿ.ಆರ್. … Continued

ಖಾಸಗಿ ಶಾಲೆಗಳಿಗೆ ವೇತನಾನುದಾನಕ್ಕೆ ಪರಿಶೀಲಿಸಿ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಣಕಾಸು ಪರಿಸ್ಥಿತಿ ಅವಲೋಕಿಸಿ 1995 ಕ್ಕೂ ಮುನ್ನ ಹಾಗೂ ನಂತರದ ಖಾಸಗಿ ಶಾಲೆಗಳನ್ನು ಸರ್ಕಾರದ ವೇತನಾನುದಾನಕ್ಕೆ ಒಳಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪರಿಷತ್ ಸಭಾಪತಿ ಬಸವರಾಜ.ಎಸ್ .ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಅನುದಾನಿತ , ಅನದಾನ ರಹಿತ ಶಿಕ್ಷಣ ಸಂಸ್ಥೆಗಳ ಕುರಿತಾದ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 30ರ … Continued

ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಶನಿವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಕರಣದ ಬಗ್ಗೆ ಮಾತನಾಡಿದರು. ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ತೆ … Continued

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ, ಆಯೋಗದ ವರದಿ ಸಲ್ಲಿಕೆಯ ನಂತರ ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. .ಅವರು ಗುರುವಾರ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. … Continued

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ- ದರ ಒದಗಿಸಲು ಕ್ರಮ: ಸಿಎಂ ಬೊಮ್ಮಾಯಿ

ಬೆಳಗಾವಿ:ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಗುರುವಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದರು. ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯ ವಿರುವ ಬಟ್ಟೆ/ಸೀರೆಗಳನ್ನು ನೇಕಾರರ … Continued