ಶೌರ್ಯ ಪ್ರಶಸ್ತಿ ಅನುದಾನ 5 ಪಟ್ಟು ಹೆಚ್ಚಳ : ಸಿಎಂ

ಬೆಳಗಾವಿ: ’ಶೌರ್ಯ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರ್ಕಾರದಿಂದ ಒಂದು ಬಾರಿ ನೀಡುವ ನಗದು ಅನುದಾನ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಪ್ರಶಸ್ತಿ ಮೊತ್ತವನ್ನು ಸರಾಸರಿ 5 ಪಟ್ಟು ಹೆಚ್ಚಳ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಜಯ ಸಾಧಿಸಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಾ ಲಘು … Continued

ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧ: ಸಿಎಂ ಬೊಮ್ಮಾಯಿ

ಬೆಳಗಾವಿ:ವಿರೋಧಪಕ್ಷಗಳು ಪ್ರಸ್ತಾಪ ಮಾಡುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಸೋಮವಾರ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಲವಾರು ಕಾನೂನುಗಳನ್ನು ತರುವುದು, ಜನಪರವಾದ ಅಭಿವೃದ್ಧಿಯ ಕುರಿತು ಚರ್ಚೆ ಮಾಡಿ ಅದಕ್ಕೆ ಪರಿಹಾರ ದೊರಕಿಸುವುದು ಸರ್ಕಾರದ ಆದ್ಯತೆ. ಸಮಗ್ರ ಕರ್ನಾಟಕದ … Continued

ಜನರಲ್‌ ಬಿಪಿನ್‌ ರಾವತ್ ಸಾವು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

ಹಾವೇರಿ: ಸಿಡಿಎಸ್‌ ಜನರಲ್‌ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾವಣೆ ನಂತರ ಮಾತನಾಡಿದ ಅವರು, ಇಡೀ ದೇಶವೇ ರಾವತ್ ಅವರ ಸಾವಿಗೆ ಕಂಬನಿ‌‌ ಮಿಡಿದಿದೆ. ಆದರೆ ಕೆಲವರು … Continued

ಕಾಶಿಯಲ್ಲಿ ‘ಗಂಗಾ ಆರತಿ’ಯಂತೆ ಹರಿಹರದಲ್ಲಿ ‘ತುಂಗಾ ಆರತಿ ಮಂಟಪ’ ನಿರ್ಮಾಣ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾಶಿಯ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪಗಳನ್ನು ನಿರ್ಮಾಣದ 30 ಕೋಟಿ ರೂ. ವೆಚ್ಚದ ಯೋಜನೆಗೆ ಜನವರಿ 14, 15 ರ ಹರಜಾತ್ರೆ ವೇಳೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹರಿಹರದ ಪಂಚಮಸಾಲಿ ಗುರುಪೀಠದ ಆಶ್ರಯದಲ್ಲಿ ನಡೆಯಲಿರುವ ಹರಜಾತ್ರೆಯ ಲಾಂಛನ, ಧ್ವನಿಸುರುಳಿ, ಟಿ ಶರ್ಟ್‌ಗಳನ್ನು ಗುರುವಾರ ಬಿಡುಗಡೆ … Continued

ಸದ್ಯಕ್ಕೆ ನೈಟ್, ವೀಕೆಂಡ್ ಕರ್ಫ್ಯೂ ಸದ್ಯಕ್ಕಿಲ್ಲ : ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ವಾರದ ಬಳಿಕ ನಿರ್ಧಾರ- ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರ ಯಾವುದೇ ರೀತಿಯ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಜ್ಞರ ಜೊತೆಗೆ ಚರ್ಚೆ ನಡೆಸಿದ್ದೇವೆ. ಓಮಿಕ್ರಾನ್ ಬಗ್ಗೆ ವಿವರಣೆ ನೀಡಿದ್ದಾರೆ. ಈಗಿರುವ ಪ್ರಕರಣಗಳಿಂದ ಗಾಬರಿಯಾಗಬೇಕಿಲ್ಲ ಎಂದು ಹೇಳಿದ್ದಾರೆ. ಆದರೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ, ವೀಕೆಂಡ್‌ ಕರ್ಫ್ಯೂ … Continued

ಓಮಿಕ್ರಾನ್-ಕೋವಿಡ್‌ ಕ್ಲಸ್ಟರ್‌; ನಾಳಿನ ಸಚಿವ ಸಂಪುಟ ಸಭೆ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ತಡೆಗೆ ನಾಳೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ತಮ್ಮ ಆರ್‌ಟಿ ನಗರದ ನಿವಾಸದಲ್ಲಿ ಇಂದು, ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರಿ ಓಮಿಕ್ರಾನ್ ತಡೆಗೆ ಹಾಗೂ ಕೋವಿಡ್‌ ಕ್ಲಸ್ಟರ್‌ಗೆ ಹೊಸ ಮಾರ್ಗಸೂಚಿ ರೂಪಿಸಲಾಗುವುದು. ನಾಳೆ, ಗುರುವಾರ ನಡೆಯುವ … Continued

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ: ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ವೈರಸ್ ಪ್ರಕರಣಗಳು ಕಾಣಿಸಿಕೊಂಡ ನಂತರ ಎಚ್ಚೆತ್ತುಕೊಂಡ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭೆಯಲ್ಲಿ ಆರೋಗ್ಯ ಸಚಿವ … Continued

ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಗೆ ಚಿಂತನೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದ ನಾನಾ ಕಡೆ ದಕ್ಷಿಣ ಆಫ್ರಿಕಾ ಮೂಲದ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಇಬ್ಬರಿಗೆ ಮಾತ್ರ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಅವರ ಸಂಪರ್ಕದಲ್ಲಿದ್ದವರಿಗೆ ಸೋಂಕು ಕಾಣಿಸಿಕೊಂಡಿಲ್ಲ … Continued

ತಜ್ಞರ ಅಭಿಪ್ರಾಯ ಪಡೆದ ನಂತರ ರಾತ್ರಿ ಕರ್ಫ್ಯೂ ಜಾರಿ ಬಗ್ಗೆ ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ/ಬೀದರ:ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಚಿತ್ರಮಂದಿರ ಮತ್ತು ಮಾಲ್‌ಗಳಲ್ಲಿ ಶೇ. ೫೦ರಷ್ಟು ಮಾತ್ರ ಪ್ರವೇಶ, ನೈಟ್ ಕರ್ಫ್ಯೂ ಜಾರಿ ಪ್ರಸ್ತಾಪ ಸೇರಿದಂತೆ ಎಲ್ಲ ಪ್ರಸ್ತಾಪಗಳ ಬಗ್ಗೆ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಓಮಿಕ್ರಾನ್ ಇಬ್ಬರಲ್ಲಿ ಕಂಡುಬಂದಿದೆ. ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದು, ಇವರಲ್ಲಿ ಯಾವುದೇ … Continued

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕರ್ನಾಟಕ ಸರ್ಕಾರದ ವಿರೋಧ: ಕೇಂದ್ರಕ್ಕೆ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಅವರು ಶನಿವಾರ ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ … Continued