ರಾಜ್ಯದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಬಲಗೊಳಿಸುವ ಜೊತೆಗೆ ಪೊಲೀಸರ ಕಲ್ಯಾಣಕ್ಕೂ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ದಿನಗಳಲ್ಲಿ ೧೬ ಸಾವಿರ ಪೊಲೀಸ್ ಹುದ್ದೆಗಳನ್ನು ತುಂಬಲಾಗುವುದು ಎಂದಿದ್ದಾರೆ. ಹುಬ್ಬಳ್ಳಿಯ ಹಳೇ ಸಿ.ಎ.ಆರ್. ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿದ … Continued

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ಭೂಗರ್ಭ ಶಾಸ್ತ್ರಜ್ಞರ ವರದಿ ಆಧರಿಸಿ ಮುಂದಿನ ಕ್ರಮ

ಕಲಬುರಗಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗುತ್ತಿರುವ ಬಗ್ಗೆ ಭೂಗರ್ಭಶಾಸ್ತ್ರಜ್ಞರು ಭೇಟಿ ನೀಡಿದ್ದಾರೆ. ಭೂಗರ್ಭಶಾಸ್ತ್ರಜ್ಞರ ವರದಿ ಬಂದ ಮೇಲೆ ಅದರ ತೀವ್ರತೆಯನ್ನು ಆಧರಿಸಿ ಮುಂದೆ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಾವ ಕಾರಣದಿಂದಾಗಿ ಭೂಕಂಪನ ಸಂಭವಿಸುತ್ತಿದೆ, ಯಾಕೆ ನಿರ್ದಿಷ್ಟ ಸ್ಥಳದಲ್ಲಿ ಸಂಭವಿಸುತ್ತಿದೆ ಹಾಗೂ … Continued

ಐಟಿ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಗೆ ಗೇಟ್ ಪಾಸ್ ನೀಡಿದ ಬೊಮ್ಮಾಯಿ

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ … Continued

ಮೂಢನಂಬಿಕೆಗೆ ಸಡ್ಡು ಹೊಡೆದು ಚಾಮರಾಜನಗರಕ್ಕೆ ಬಂದ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಚಾಮರಾಜನಗರ ಪಟ್ಟಣಕ್ಕೆ ಭೇಟಿ ನೀಡಿ ಮೂಢನಂಬಿಕೆಯನ್ನು ಮೆಟ್ಟಿನಿಂತಿದ್ದಾರೆ. ಮೈಸೂರಿನಿಂದ ನಂಜನಗೂಡು ಮಾರ್ಗವಾಗಿ ರಸ್ತೆ ಮೂಲಕ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ನಗರದ ಬೈಪಾಸ್ ರಸ್ತೆಯ ಬಳಿ ಬಿಜೆಪಿ ಮುಖಂಡರು ಶಾಲು, ಹಾರ ಹಾಕಿ ಸ್ವಾಗತಿಸಿದರು. ಬಳಿಕ ಬೊಮ್ಮಾಯಿ … Continued

ಹಂಪಿಯಲ್ಲಿ ಹೆಲಿ ಟೂರಿಸಂಗೆ ಅವಕಾಶ: ಸಿಎಂ ಬೊಮ್ಮಾಯಿ

ಹೊಸಪೇಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಜಯನಗರ ಜಿಲ್ಲೆಯಲ್ಲಿ ಮಹತ್ವದ ಪಾರಂಪರಿಕ ಪ್ರವಾಸೀ ಸ್ಥಳಗಳ ಅಭಿವೃದ್ಧಿಗಾಗಿ 643 ಕೋಟಿ ರೂ.ಗಳ ವಿಶೇಷ ಯೋಜನೆ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಅವರು ಅಕ್ಟೋಬರ್‌ 2ರಂದು ಹೊಸಪೇಟೆ ಕೇಂದ್ರ ಸ್ಥಾನವಾಗಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯ ಉದ್ಘಾಟನೆ ನೆರವೇರಿಸಿ … Continued

ಕರ್ನಾಟಕದ  ಆರು ನಗರಗಳಲ್ಲಿ ವಿಧಿವಿಜ್ಞಾನ  ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

ಹುಬ್ಬಳ್ಳಿ: ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ ,ಹುಬ್ಬಳ್ಳಿ-ಧಾರವಾಡ , ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಎಫ್ ಎಸ್ ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಈ ಕುರಿತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. … Continued

ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ, ಅಧ್ಯಕ್ಷರನ್ನಾಗಿ ಡಾ.ಅಶೋಕ ಶೆಟ್ಟರ್ ನೇಮಕಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿದ್ದು, ಅವುಗಳಿಗೆ ಹೆಚ್ಚು ಮಹತ್ವ ನೀಡಲಾಗುವುದು. ಈ ಕ್ಷೇತ್ರಗಳಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದ್ದು, … Continued

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು:ಕೇಂದ್ರದ ಪೂರ್ವಾನುಮತಿಗೆ ಸಂಪೂರ್ಣ ಮಾಹಿತಿ ಕಳುಹಿಸಲು ಸಿಎಂ ಸೂಚನೆ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಜಲ ವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾಗಿರುವ ಪ್ರದೇಶದ ಸಂತ್ರಸ್ತರ ಸಮಸ್ಯೆಗಳ ಕುರಿತು ಇಂದು … Continued

ಭಕ್ತರಿಗೆ ಆಗಿರುವ ನೋವು ಸರಿಪಡಿಸುತ್ತೇನೆ : ಸಿಎಂ ಬೊಮ್ಮಾಯಿ ಭರವಸೆ

ದಾವಣಗೆರೆ: ನಂಜನಗೂಡು ದೇವಾಲಯ ತೆರವು ಪ್ರಕರಣದಲ್ಲಿ ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ತ್ರಿಶೂಲ್ ಕಲಾಭವನದಲ್ಲಿ ಹಮ್ಮಕೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಸ್ಥಾನ ತೆರವುಗೊಳಿಸಿರುವುದರಿಂದ ಅಲ್ಲಿನ ಭಕ್ತರ ಮನಸ್ಸಿಗೆ ಘಾಸಿಯಾಗಿದೆ. ಆದರೆ ಅದನ್ನು ಸರಿಪಡಿಸುವ … Continued

ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: ಒಂದೇ ದಿನ 30 ಲಕ್ಷ ಲಸಿಕೆ ನೀಡುವ ಗುರಿ ನಿಗದಿ

ಬೆಂಗಳೂರು: ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು (ಮಂಗಳವಾರ) ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ … Continued