120 ನೂತನ ಉಚಿತ ಆಂಬುಲೆನ್ಸ್‌ ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜನಸಾಂದ್ರತೆ ಹೆಚ್ಚಿರುವ ಕಾರಣ, ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಆರೋಗ್ಯ ಸೇವೆಗಳನ್ನು ಒಂದೇ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ಹೇಳಿದ್ದಾರೆ. ವಿಧಾನ ಸೌಧದ ಪೂರ್ವದ್ವಾರದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಡೆದ 108 … Continued

ಶಿಕ್ಷಕರಾಗುವವರಿಗೆ ಸರ್ಕಾರದಿಂದ ಗುಡ್‌ ನ್ಯೂಸ್‌ : ಈ ವರ್ಷವೇ 5 ಸಾವಿರ ಶಿಕ್ಷಕರ ನೇಮಕ ಮಾಡ್ತೇವೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು ರಾಜ್ಯಾದ್ಯಂತ ಶಿಕ್ಷಕರ ಕೊರತೆ ಇದೆ, ಅದನ್ನು ನೀಗಿಸುವ ನಿಟ್ಟಿನಲ್ಲಿ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಐದು ಸಾವಿರ … Continued

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ; ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಮಂಗಳವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ … Continued

ನವಕರ್ನಾಟಕಕ್ಕೆ ದೃಢ ಸಂಕಲ್ಪ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು: ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ಉಳಿದಿರುವ 20 ತಿಂಗಳಲ್ಲಿ ಅಭಿವೃದ್ಧಿ ಕೆಲಸಕ್ಕೆ ವೇಗ ನೀಡುತ್ತೇವೆ. ಇವತ್ತಿನಿಂದ ನವಕರ್ನಾಟಕ ಆಗುತ್ತದೆಂದು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ರಾಷ್ಟ್ರಧ್ವಜಾರೋಹಣದ ಬಳಿಕ ಮಾಡಿದ ತಮ್ಮ ಭಾಷಣದಲ್ಲಿ ಅವರು … Continued

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ತಾವು ಸಂಚರಿಸುವ ರಸ್ತೆಗಳಲ್ಲಿ ಭದ್ರತೆಗಾಗಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದೆಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸಭೆ ಸಮಾರಂಭಗಳಲ್ಲಿ ಹಾರ-ತುರಾಯಿ ಹಾಕಬಾರದೆಂದು ಆದೇಶ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಸಾರ್ವಜನಿಕರಿಗೆ ಆಗುವ ಕಿರಿಕಿರಿ ತಪ್ಪಿಸಲು ತಾವು … Continued

ಖಾತೆ ಕ್ಯಾತೆ ನಂತರ ಸಿಎಂ ಬೊಮ್ಮಾಯಿಗೆ ಈಗ ಮಹಾನಗರ ಪಾಲಿಕೆಗಳ ಚುನಾವಣೆಯ ಲಿಟ್ಮಸ್‌ ಟೆಸ್ಟ್

ಬೆಂಗಳೂರು: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈಗ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಸವಾಲು ಎದುರಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಪುಟ ರಚನೆಯಾಗಿ ಖಾತೆಗಾಗಿ ಕೆಲವು ಸಚಿವರ ಖ್ಯಾತೆ, ನಂತರ ಸಮಾಧಾನ ಇವೆಲ್ಲ ವಿದ್ಯಮಾನಗಳ ನಡುವೆಯೇ ಬುಧವಾರ ಚುನಾವಣಾ ಆಯೋಗವು ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್‌ 3ರಂದು ಚುನಾವಣೆ … Continued

ಸಿಎಂ ಬೊಮ್ಮಾಯಿ-ಬಿಎಸ್‌ವೈ ಜೊತೆಗೆ ಸಭೆ ನಂತರ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್

ಬೆಂಗಳೂರು: ಪ್ರಬಲ ಖಾತೆಗೆ ಬಿಗಿಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಈಗ ಹಿಂದೆ ಸರಿದಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ನಡೆಸಿದ ಸಭೆ ಯಶಸ್ವಿಯಾಗಿದ್ದು, ಅದರ ನಂತರ ಅವರು ರಾಜೀನಾಮೆ ನಿರ್ದಾರದಿಂದ ಹಿಂದೆ ಸರದಿದ್ದಾರೆ. ಈ ಹಿಂದೆ ಪ್ರತ್ಯೇಕ ಜಿಲ್ಲೆಗೆ ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ … Continued

ದಿಢೀರ್‌ ಬೆಳವಣಿಗೆಯಲ್ಲಿ ಹೆಲಿಕ್ಯಾಪ್ಟರಿನಲ್ಲಿ ಬಿಎಸ್‌ವೈ ಮನೆಗೆ ಬಂದ ಸಚಿವ ಆನಂದ ಸಿಂಗ್‌..!

ಯಾದಗಿರಿ: ದಿಢೀರ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂದು (ಬುಧವಾರ) ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ ( ರಾಜುಗೌಡ) ಅವರು ಹೊಸಪೇಟೆಗೆ ತೆರಳಿ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿಗೆ ತೆರಳಿದ್ದು, ಸದ್ಯ ಮಾಜಿ ಮುಖ್ಯಮಂತ್ರಿ ನಿವಾಸದಲ್ಲಿದ್ದಾರೆ. ಬೆಂಗಳೂರಿಗೆ ಹೋಗುವ ಮೊದಲು ಅವರು ಹೊಸಪೇಟೆಯಲ್ಲಿ ಸಚಿವ ಆನಂದ … Continued

ಖಾತೆಗಾಗಿ ಸಚಿವರ ಕ್ಯಾತೆ: ಅಸಮಾಧಾನ ಶಮನಕ್ಕೆ ಸಿಎಂ ಬೊಮ್ಮಾಯಿ ಹೈಕಮಾಂಡ್‌ ಮೊರೆ..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮತ್ತು ವಿಸ್ತರಣೆಯ ನಂತರ ಖಾತೆ ಹಂಚಿಕೆಯಲ್ಲಿನ ಅಸಮಾಧಾನ ಹತ್ತಿಕ್ಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಸಿಗದ ಅಸಮಾಧಾನ ಕೆಲವರಿಗಾದರೆ ಮತ್ತೊಂದೆಡೆ ಬಯಸಿದ ಖಾತೆ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಹಲವು ಸಚಿವರು ತಮ್ಮ ಅತೃಪ್ತಿ ಹೊರಹಾಕಿರುವುದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆನೋವಿಗೆ … Continued

ಮೇಕೆದಾಟು ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ತಮಿಳುನಾಡಿನಲ್ಲಿ ಕರ್ನಾಟಕದ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕರ್ನಾಟಕದ ಪಕ್ಷದವರು ಕೂಡ ತಮಿಳುನಾಡು ರಾಜಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರ … Continued