ಸಚಿವರಿಗೆ ಒಂದೆರಡು ದಿನದಲ್ಲಿ ಖಾತೆ ಹಂಚಿಕೆ, ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಬೊಮ್ಮಾಯಿ

ಬೆಂಗಳೂರು: ಎಸ್​ಟಿಪಿಎಸ್​​ ಹಣ ಬೇರೆ ಇಲಾಖೆಗೆ ನೀಡುತ್ತಿದ್ದ ಹಿನ್ನೆಲೆ ಶೀಘ್ರದಲ್ಲೇ ಎಸ್​ಟಿ ಸಚಿವಾಲಯ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನೂತನ ಸಚಿವರೊಂದಿಗೆ ಸಭೆ ನಡೆಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್​ಟಿ ಸಮುದಾಯದ ಬೇಡಿಕೆಯಂತೆ ಪ್ರತ್ಯೇಕ ಸಚಿವಾಲಯ​ ರಚನೆ ಮಾಡುತ್ತೇವೆ.  ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್.ಟಿ.ಪಿ. ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ … Continued

ಸಂಪುಟ ವಿಸ್ತರಣೆ : ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆಗೆ ದೆಹಲಿಗೆ ತೆರಳಿದ ಸಿಎಂ

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಕೇಂದ್ರದ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ದೆಹಲಿಗೆ ತೆರಳಿದರು. ರಾಷ್ಟ್ರ ರಾಜಧಾನಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬಹುಶಹ ನಾಳೆ ಸಭೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಸಂಪುಟ ವಿಸ್ತರಣೆ … Continued

ವೃದ್ಧಾಪ್ಯ ವೇತನ ೧೨೦೦ ರೂ., ವಿಧವಾ ವೇತನ ೮೦೦ ರೂ.ಗೆ ಹೆಚ್ಚಳ: ಸಿಎಂ ಬೊಮ್ಮಾಯಿ ಮೊದಲ ಅಧಿಕೃತ ಆದೇಶ

posted in: ರಾಜ್ಯ | 0

ಬೆಂಗಳೂರು: ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆಯ ಮಾಸಾಶನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಸವರಾಜ ಬೊಮ್ಮಾಯಿ ಅವರ ಮೊದಲ ಅಧಿಕೃತ ಆದೇಶ ಇದಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಸಂಪುಟ … Continued

ಸಿಎಂ ಬೊಮ್ಮಾಯಿಗೆ ಉತ್ತರ ಕರ್ನಾಟಕದ ಬಗ್ಗೆ ಮೂರು ಸವಾಲು ಮುಂದಿಟ್ಟ ಆಮ್‌ ಆದ್ಮಿ ಪಾರ್ಟಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಮುಂದಿನ ಆರು ತಿಂಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಿ.ಬಿಕೋ ಎನ್ನುತ್ತಿರುವ ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳ ಕಚೇರಿಯನ್ನು ಹಸ್ತಾಂತರಿಸುವ ಮೂಲಕ ಉತ್ತರ ಕರ್ನಾಟಕದಲ್ಲಿ ಸಾರ್ವತ್ರಿಕ ಬೆಳವಣಿಗೆಗೆ ನಾಂದಿ ಹಾಡಬೇಕು ಎಂದು ಆಮ್‌ ಆಮಿ ಪಕ್ಷದ (ಆಪ್‌) ರಾಜ್ಯ ವೀಕ್ಷಕರಾದ ರೋಮಿ ಭಾಟಿ, ರಾಜ್ಯ ಉಪಾಧ್ಯಕ್ಷರಾದ ಶಾಂತಲಾ ದಾಮ್ಲೆ ಮತ್ತು … Continued

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ನೆರವು : ಸಿಎಂ ಬೊಮ್ಮಾಯಿ

ನವದೆಹಲಿ: ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಶನಿವಾರ) ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ … Continued

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡಲು ಪ್ರಧಾನಿ ಮೋದಿಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ … Continued

ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ ಸಾಧ್ಯತೆ; ನಡ್ಡಾ ಭೇಟಿ ಬಳಿಕೆ ಸಿಎಂ ಬೊಮ್ಮಾಯಿ ಹೇಳಿಕೆ

ನವದೆಹಲಿ: ವಾರದೊಳಗೆ ರಾಜ್ಯ ಸಚಿವ ಸಂಪುಟದ ರಚನೆಯಾಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದ್ದಾರೆ. ಇಂದು ೯ಶುಕ್ರವಾರ) ಪ್ರಧಾನಿ ಭೇಟಿ ಬಳಿಕೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡಾ ಅವರ ಜೊತೆಗೆ ಸಂಪುಟ ರಚನೆ ಕುರಿತು ಚರ್ಚಿಸಿದ್ದೇನೆ. ಮತ್ತೆ ದೆಹಲಿಗೆ ಬರಬೇಕೋ ಬೇಡವೋ ಎಂಬುದನ್ನು ಅವರು ತಿಳಿಸುತ್ತಾರೆ. ಕೆಲವೆ ದಿನಗಳಲ್ಲಿ ಸಂಪುಟ … Continued