ಪೇ-ಸಿಎಂ ಅಭಿಯಾನದ ಮೂಲಕ ರಾಜ್ಯ-ನನ್ನ ಹೆಸರು ಕೆಡಿಸಲು ಷಡ್ಯಂತ್ರ: ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಪೇ – ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಬುಧವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಮಾಡಿರುವ ಷಡ್ಯಂತ್ರ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ … Continued

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಂಗ ತನಿಖೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಸೋಮವಾರ ವಿಧಾನಸಭೆಯಲ್ಲಿ ನಡೆದ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದೆ ಕೆರೆ, ರಾಜಕಾಲುವೆ ಹಾಗೂ ಬಫರ್ ಝೋನ್ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು. ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ತಾಂತ್ರಿಕ ಸದಸ್ಯರೊಂದಿಗೆ ತನಿಖಾ ಆಯೋಗ ರಚನೆ ಮಾಡಲಾಗುವುದು ಎಂದು ತಿಳಿಸಿದರು. ಕೆರೆ, ರಾಜಕಾಲುವೆ ಒತ್ತುವರಿ ತೆರವು … Continued

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ: ಕೇರಳದ ಬೇಡಿಕೆಗೆ ಒಪ್ಪದ ಕರ್ನಾಟಕ

ಬೆಂಗಳೂರು: ರಾಜ್ಯದ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ, ವನ್ಯಜೀವಿಧಾಮಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ರಾಜ್ಯ ಸರ್ಕಾರ ತಿಳಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿ ಬಳಿಕ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತ್ತೀಚೆಗೆ ನಡೆದ ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಿಣರಾಯಿ ವಿಜಯನ್ ಬಂದಿದ್ದರು … Continued

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡಲಿರುವ ₹ 3 ಸಾವಿರ ಕೋಟಿ ಹೊರತುಪಡಿಸಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶನಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸ್ಥಳೀಯ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ … Continued

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ವಿದ್ಯುತ್ ಬೈಕ್‌ಗಳ ವಿತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ಬಾಬು ಜಗಜೀವನರಾಮ್ ಅವರ ಹೆಸರಿನಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ … Continued

ಪವರ್‌ಸ್ಟಾರ್ ಪುನೀತ ರಾಜಕುಮಾರ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಸರ್ಕಾರದಿಂದಲೇ ಆಚರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇನ್ಮುಂದೆ ಕನ್ನಡದ ಖ್ಯಾತ ನಟ ಪುನೀತರಾಜಕುಮಾರ ಅವರ ಜನ್ಮದಿನ(ಮಾರ್ಚ್ 17)ವನ್ನು ‘ಸ್ಫೂರ್ತಿ ದಿನ’ವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಗುರುವಾರ ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅವರು ಈ ವಿಷಯ ಪ್ರಕಟಿಸಿದರು. ಈ ಕುರಿತು ಇಂಧನ ಸಚಿವ ಸುನಿಲಕುಮಾರ … Continued

ಕನ್ನಡಕ್ಕೆ ಕಾನೂನಿನ ಬಲ ನೀಡಲು ಈ ಅಧಿವೇಶನದಲ್ಲೇ ಮಸೂದೆ ಮಂಡನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಎಲ್ಲ ಹಂತಗಳಲ್ಲಿ ಕನ್ನಡ ಕಡ್ಡಾಯಗೊಳಿಸುವುದಕ್ಕಾಗಿ ಅದಕ್ಕೆ ಕಾನೂನು ಬಲ ನೀಡಲು ಇದೇ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕಾನೂನಿನ ಮೂಲಕ ಕನ್ನಡ ಭಾಷೆ ಮತ್ತು ಕನ್ನಡದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಕರು ಕನ್ನಡ ಕಲಿತುಕೊಳ್ಳಲು … Continued

ಬೆಂಗಳೂರು ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ ಹಾಗೂ ಮನೆ ಕಟ್ಟಿದವರ ಮೇಲೆ ಹಾಗೂ ಕಾಲುವೆ ನೀರನ್ನು ಹರಿದು ಹೋಗಲು ತೊಂದರೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಭೇದಿ-ಬಾವ … Continued

ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಲೋಪ : ಕೇಂದ್ರ ಸಾರಿಗೆ ಸಚಿವ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಯಲ್ಲಿ ನಡೆದಿದೆ ಎಂದು ಹೇಳಲಾದ ಲೋಪಗಳ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಿದರು. ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿದ್ದ ಸಚಿವ ಗಡ್ಕರಿ ಅವರನ್ನು ಖಾಸಗಿ ಹೊಟೇಲ್‍ನಲ್ಲಿ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು, … Continued

ನವೆಂಬರ್‌ 23ಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ: ಅನುಭವಿ ಕಾನೂನು ತಜ್ಞರ ನೇಮಕ ಮಾಡ್ತೇವೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸುಪ್ರೀಂಕೋರ್ಟ್‌ನಲ್ಲಿ ನವೆಂಬರ್ 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡವನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟ‌ನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಭಾನುವಾರ ಆಗಮಿಸಿದ್ದ ಅವರು, ಹುಬ್ಬಳ್ಳಿ … Continued