ಮುಂದಿನ ಎರಡು ತಿಂಗಳಲ್ಲಿ ರಾಜ್ಯದ ಆರು ಕಡೆ ಬಿಜೆಪಿ ಸಮಾವೇಶ : ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದ ಆರು ಕಡೆ ದೊಡ್ಡ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ : ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಪತ್ರ

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿ.ಟಿ. ರವಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಚಾಮರಾಜಪೇಟೆಯ … Continued

ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಎಸಿಬಿ ವಿಚಾರವಾಗಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು, ಮಂಗಳವಾರ ಹಿಟಾಚಿ ಎನರ್ಜಿ ಇಂಡಿಯಾ ಆಯೋಜಿಸಿದ್ದ ಪವರ್ ಕ್ವಾಲಿಟಿ ಫ್ಯಾಕ್ಟರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಸಿಬಿ ವಿಚಾರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಮೇಲ್ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ … Continued

ದೇವರಾಜ ಅರಸು ಹೆಸರಲ್ಲಿ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಹೆಸರಿನಲ್ಲಿ ಇನ್ಮುಂದೆ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಇಂದು, ಶನಿವಾರ ದೇವರಾಜ ಅರಸು ಾವರ ೧೦೭ನೇ ಜನ್ಮದಿನಾಚರಣೆ ಹಾಗೂ ಅರಸು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದಿ. ದೇವರಾಜ ಅರಸು ಹೆಸರಿನಲ್ಲಿ ಈಗ … Continued

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಳಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜೊತೆ ಖುದ್ದು ಮಾತಾಡಿದ್ದೇನೆ ಹಾಗೂ ಅವರಿಗೆ ಸೂಕ್ತ ಭದ್ರತೆ ಒದಗಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶುಕ್ರವಾರ ಮಾಧ್ಯದವರ ಜೊತೆ ಮಾತನಾಡಿದ ಅವರು, ಯಾರಿಂದಲಾದರೂ ಬೆದರಿಕೆ ಕರೆ ಬಂದಿದೆಯಾ ಎಂದು ಸಿದ್ದರಾಮಯ್ಯ ಅವರನ್ನೇ … Continued

ಬೆಂಗಳೂರು ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಸಿಎಂ ಜೊತೆ ಚರ್ಚೆ : ಸಚಿವ ಅಶೋಕ

ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯ ದಿಮಾಚರಣೆಯಂದು ರಾಷ್ಟ್ರಧ್ವಜ ಹಾರಿಸಲಾಗಿದೆ. ಈಗ ಈ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವ ಕುರಿತು ಮನವಿ ಇದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ … Continued

ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ ಮಾಡಿ : ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಗ್ರಾಮ ಪಂಚಾಯತ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, … Continued

ಸರ್ಕಾರಿ ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಎಲ್ಲ ಇಲಾಖೆಗಳಿಗೂ ವಿಸ್ತರಣೆ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ಸರ್ಕಾರ ಕ್ರೀಡಾಪಟುಗಳಿಗೆ ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಈಗಾಗಲೇ 2% ರಷ್ಟು ಉದ್ಯೋಗ ಮೀಸಲು ನಿಗದಿ ಮಾಡಲಾಗಿದೆ. ಈಗ ಕ್ರೀಡಾಪಟುಗಳ ಉದ್ಯೋಗದ ಈ ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು, ಮಂಗಳವಾರ ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ … Continued

ಕುಮಟಾ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ, ಸಿಎಂ ಬೊಮ್ಮಾಯಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ತ್ರಿ-ವರ್ಣದ ಬೆಳಕಿನಲ್ಲಿ ಅದ್ಭುತವಾಗಿ ಕಾಣುವ 16ನೇ ಶತಮಾನದ ಮಿರ್ಜಾನ್‌ ಕೋಟೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ್ ಕೋಟೆಯು ತನ್ನ ವಾಸ್ತುಶಿಲ್ಪದ ಸೊಬಗಿಗೆ ಹೆಸರುವಾಸಿಯಾಗಿದೆ, 16ನೇ ಶತಮಾನದ ಕೋಟೆಯು ಅನೇಕ ಐತಿಹಾಸಿಕ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ನೆನಪಿಗಾಗಿ ಈಗ ತ್ರಿ-ವರ್ಣದ ಬೆಳಕಿನಲ್ಲಿ ಪ್ರಕಾಶಿಸಲ್ಪಟ್ಟಿದೆ . ತ್ರಿ-ವರ್ಣದ ಬೆಳಕಿನಲ್ಲಿ ಪ್ರಕಶಮಾನವಾಗಿ ಬೆಳಗುತ್ತಿರುವ ಈ ಕೋಟೆಯ ನಯನಮನೋಹರ ಬೆಳಕಿನ ಸುಂದರ ಚಿತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ … Continued

ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢ : ದೆಹಲಿ ಪ್ರವಾಸ ರದ್ದು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಹೀಗಾಗಿ ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ರದ್ದಾಗಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು … Continued