ಲಾಕ್‌ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯ್ಲಿದೆ; ಒಂದು ವಾರ ಕಾದು ನೋಡ್ತೇವೆ: ಸಿಎಂ

ಬೆಂಗಳೂರು: ರಾಜ್ಯವನ್ನು ಲಾಕ್‌ ಡೌನ್‌ ಮಾಡುವುದು, ಬಿಡುವುದು ನಿಮ್ಮ ಕೈಯಲ್ಲಿದೆ. ರಾಜ್ಯವನ್ನು ಮತ್ತೊಮ್ಮೆ ಲಾಕ್‌ ಡೌನ್‌ ಮಾಡಬಾರದು ಎಂಬ ಮನಸ್ಸು ನಿಮ್ಮಲ್ಲಿದ್ದರೆ, ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೊನಾ ಮಟ್ಟ ಹಾಕಲು ಇರುವುದು ಇದೊಂದೇ ಮಾರ್ಗ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ರೋಗದ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ … Continued

ಕೊವ್ಯಾಕ್ಸಿನ್‌ ಮೊದಲ ಡೋಸ್‌ ಪಡೆದ ಸಿಎಂ ಬಿಎಸ್‌ವೈ

ಬೆಂಗಳೂರು; ನಗರದ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಸ್​ಎಸ್​ವೈ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಕೊವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದರು. ಮುಖ್ಯಮಂತ್ರಿಗಳ‌ ಜತೆ ಆರೋಗ್ಯ ಸಚಿವ ಸುಧಾಕರ್ ಕೂಡ ಲಸಿಕೆ ಹಾಕಿಸಿಕೊಂಡರು. ಲಸಿಕೆ ಹಾಕಿಸಿ ಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಲಸಿಕೆ ಹಾಕಿಸಿಕೊಂಡರೆ ಯಾವುದೇ ಸಮಸ್ಯೆ ಆಗುವುದಿಲ್ಲ. ನಾನು ದೇಸಿ ಲಸಿಕೆ ಕೋವಾಕ್ಸಿನ್ … Continued

ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಹೊರಬಿದ್ದ ಮಾರನೇ ದಿನ ಬುಧವಾರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೂ ತನಗೂ ಸಮಬಂಧವಿಲ್ಲ, ಅದು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ವಿಯದಲ್ಲಿ ನಾನು ನಿರ್ದೋಷಿಯಾಗುವ ಭರವಸೆಯಿದ್ದರೂ ನೈತಿಕ ಹೊಣೆ … Continued

ಹೆಚ್ಚುವರಿ ಕಾವೇರಿ ನೀರಿನ ಬಳಕೆ ತಮಿಳುನಾಡು ಯೋಜನೆ ಖಂಡಿಸಿ ಕೇಂದ್ರಕ್ಕೆ ಪತ್ರ ಬರೆದ ಬಿಎಸ್‌ವೈ

ಬೆಂಗಳೂರು: ಕಾವೇರಿಯಿಂದ ವಾಯ್‌ಗೈ ಮತ್ತು ಗುಂಡಾರ್‌ಗೆ ಕಾಲುವೆ ನಿರ್ಮಾಣದೊಂದಿಗೆ ನದಿ ಸಂಪರ್ಕಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೂಲಕ ಹೆಚ್ಚುವರಿ ಕಾವೇರಿ ನೀರನ್ನು ಬಳಸಲು ತಮಿಳುನಾಡಿಗೆ ಅವಕಾಶ ನೀಡಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ … Continued

ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು. ವಿವಿಧ ಸಮುದಾಯಗಳಿಗೆ … Continued

ಕಾಂಗ್ರೆಸ್‌ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡ್ತೇನೆ: ಗುಡುಗಿದ ಯಡಿಯೂರಪ್ಪ

ಬೆಂಗಳೂರು: ಸವಾಲುಗಳನ್ನು ಎದುರಿಸಿ ಜನರ ವಿಶ್ವಾಸ ಗೆದ್ದು ೪ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ. ಸವಾಲುಗಳನ್ನು ಎದುರಿಸಲು ನನಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ನನ್ನನ್ನು ಗಟ್ಟಿಗೊಳಿಸುತ್ತವೆ. ಮುಂದಿನ ಚುನಾವಣೆಯಲ್ಲೂ ಎಲ್ಲ ಸವಾಲುಗಳನ್ನು ಎದುರಿಸಿ ಬಿಜೆಪಿಯನ್ನು ೧೫೦ ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೆ ಬಿಜೆಪಿ ಸರ್ಕಾರವನ್ನೆ ಅಧಿಕಾರಕ್ಕೆ ತಂದು ಕಾಂಗ್ರೆಸ್‌ನ್ನು ಶಾಶ್ವತವಾಗಿ ಪ್ರತಿಪಕ್ಷದ ಸ್ಥಾನದಲ್ಲಿರುವಂತೆ ಮಾಡಿಯೇ ತೀರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ … Continued