ಜೆಡಿಎಸ್‌ನಿಂದ ಸಿ.ಎಂ. ಇಬ್ರಾಹಿಂ, ಸಿ.ಕೆ. ನಾಣು ಉಚ್ಚಾಟನೆ

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ. ಇಬ್ರಾಹಿಂ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾಣು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಕ್ಷದ … Continued

ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ, ಅಮಾನತು ಪ್ರಶ್ನಿಸಿ ಕೋರ್ಟಿಗೆ ಹೋಗ್ತೇನೆ: ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ಪಕ್ಷದ ಅಮಾನತುಗೊಂಡಿರುವ ನಾಯಕ ಸಿ.ಎಂ.ಇಬ್ರಾಹಿಂ ಅವರು ತಾವು ಈಗಲೂ ಜೆಡಿಎಸ್ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದು, ತಮ್ಮ ಅಮಾನತು ನಿರ್ಧಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯುತ್ತಾರೆಯೇ ಎಂಬುದು ಡಿಸೆಂಬರ್ 9 ರಂದು ಗೊತ್ತಾಗಲಿದೆ ಎಂದು … Continued

ಜೆಡಿಎಸ್ ನಿಂದ ಸಿ.ಎಂ. ಇಬ್ರಾಹಿಂ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು … Continued

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂಗೆ ಕೊಕ್‌ ; ಮಾಜಿ ಸಿಎಂ ಕುಮಾರಸ್ವಾಮಿಗೆ ಪಟ್ಟ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ಅವರನ್ನು ಮುಕ್ತಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಹಿಂದಿನ ಅಧ್ಯಕ್ಷರ ಹೇಳಿಕೆ ಬಗ್ಗೆ … Continued

ನಮ್ಮದೇ ನಿಜವಾದ ಜೆಡಿಎಸ್ : ಯಾವ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು : ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೇ ಸಡ್ಡು ಹೊಡೆದಿದ್ದಾರೆ. ನಮ್ಮದೇ ಅಸಲಿ ಜೆಡಿಎಸ್. ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗುವುದಿಲ್ಲ ಎಂದು ಸಿಎಂ … Continued

ಹಿಜಾಬ್‌ ತೀರ್ಪಿನ ಬಗ್ಗೆ ಅಸಮಾಧಾನವಿದೆ, ನಾವು ಸುಪ್ರೀಂ ಕೋರ್ಟ್ ಗೆ ಹೋಗ್ತೇವೆ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಹಿಜಾಬ್ ವಿವಾದ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು ಎಂದು ಹೇಳಿದ್ದಾರೆ. ತಿಲಕ, ವಿಭೂತಿ ಅಲಂಕಾರಿಕ ವಸ್ತುವಲ್ಲ, … Continued