‘ನಾನು ಸಿಎಂ ರೇಸಲ್ಲಿ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷದ ವರೆಗೆ ಸಿಎಂ ; ವರಸೆ ಬದಲಿಸಿದ ದೇಶಪಾಂಡೆ

ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ … Continued

ಕಾಂಗ್ರೆಸ್​ನಲ್ಲಿ 10 ಮಂದಿ ಸಿಎಂ ರೇಸ್ ನಲ್ಲಿದ್ದಾರೆ, ಅವರಲ್ಲಿ ನಾನೂ ಒಬ್ಬ: ಡಾ ಜಿ ಪರಮೇಶ್ವರ

ತುಮಕೂರು: ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ, ಈ ರೇಸ್​ಗೆ ಈಗ ಡಾ ಜಿ ಪರಮೇಶ್ವರ ಅವರು ಸೇರ್ಪಡೆಯಾಗಿದ್ದಾರೆ. ತುಮಕೂರು ‌ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿ ಡಾ.ಪರಮೇಶ್ವರ ಅವರು ಕಾಂಗ್ರೆಸ್​ನಲ್ಲಿ 10 ಮಂದಿ ಮುಖ್ಯಮಂತ್ರಿಗಳಾಗುವ ಅಪೇಕ್ಷೆ ಇದ್ದವರಿದ್ದಾರೆ. ಆ ಹತ್ತು ಮಂದಿಯಲ್ಲಿ ನಾನೂ ಒಬ್ಬ ಎಂದು ಹೇಳಿದ್ದು, ಆ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ತಾನೂ … Continued

ಕಾಂಗ್ರೆಸ್‌ನಲ್ಲಿ ಮೂವರು ಸಿಎಂ ರೇಸ್‌ನಲ್ಲಿದ್ದಾರೆ: ರಾಮಲಿಂಗಾರೆಡ್ಡಿ

ಬಾಗಲಕೋಟೆ: ಮೂವರು ಕಾಂಗ್ರೆಸ್‌ ಮುಖಂಡರು ಸಿಎಂ ಹುದ್ದೆಯ ರೇಸ್‌ನಲ್ಲಿದ್ದು, ಪಕ್ಷ ಅಧಿಕಾರಕ್ಕೆ ಬಂದ ನಂತರ ಎಲ್ಲ ಸೇರಿ ತೀರ್ಮಾನ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿಕಾರಕ್ಕೆ ಬಂದ ಮೇಲೆ ನಾವೆಲ್ಲಾ ತೀರ್ಮಾನಿಸುತ್ತೇವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ … Continued