ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಿತ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ (SIT) ರಚಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದ್ದು, ಅದರ ಬಗ್ಗೆ … Continued

ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಹತ್ಯೆಗೀಡಾದ ನೇಹಾ ಹಿರೇಮಠ (Neha Hiremath) ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನಿಮ್ಮ ಕುಟುಂಬದ ಜೊತೆಗೆ ನಾವಿದ್ದೇವೆ ಅಂತ ಭರವಸೆ ನೀಡಿದರು. … Continued

ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ವೈಯಕ್ತಿಕ ಕಾರಣಗಳಿಗೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದಕ್ಕೆ ಮೃತಳ ತಂದೆ ನಿರಂಜನ ಹಿರೇಮಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಗುರವಾದ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ. ಮುಖ್ಯಮಂತ್ರಿಯವರು ಅಷ್ಟು ಹಗುರವಾಗಿ ಹೇಗೆ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್‌ : 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂಬ ಸುಳ್ಳು ಸುದ್ದಿಯನ್ನು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ … Continued

ಬೆಂಗಳೂರು : ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇದ್ದ ವಾಹನ ಏರಿ ಹಾರ ಹಾಕಿದ ವ್ಯಕ್ತಿ…!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಭೈರಸಂದ್ರದಲ್ಲಿ ಸೌಮ್ಯ ರೆಡ್ಡಿ ಅವರ ಪರ ಪ್ರಚಾರ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಪ್ರಚಾರದ ವೇಳೆ ಗನ್ ಇಟ್ಟುಕೊಂಡು ಬಂದು ಕ್ಯಾಂಟರ್ ಏರಿದ … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅನಂತ ಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ ಗುಂಡೂರಾವ್, ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ … Continued

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸ ; ಎಂ.ಎಸ್‌. ಸತ್ಯುಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರಿಗೆ ರಾಜ್ಯ ಸರ್ಕಾರದ ವತಿಯಿಂದ “15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ” ಘೋಷಣೆ ಮಾಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ‘ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ … Continued

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬೆನ್ನಲ್ಲೇ ಸಿಎಂ, ಡಿಸಿಎಂಗೆ ಬಾಂಬ್​ ಸ್ಫೋಟಿಸುವ ಬೆದರಿಕೆಯ ಇ-ಮೇಲ್

ಬೆಂಗಳೂರು : ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮತ್ತೊಮ್ಮೆ ಬಾಂಬ್ ಸ್ಫೋಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಬೆಂಗಳೂರು ಪೊಲೀಸ್‌ ಕಮಿಷನರ್‌ ಅವರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್‌ 2ರ ಶನಿವಾರ ಮಧ್ಯಾಹ್ನ ಬೆದರಿಕೆ ಇ-ಮೇಲ್‌ ಕಳುಹಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ … Continued