ಕಾವೇರಿ ವಿವಾದ : ನದಿಯಲ್ಲಿ ನೀರಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಇಂದು ಅರ್ಜಿ ; ಸಿಎಂ ಸಿದ್ದರಾಮಯ್ಯ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ‘ನದಿಯಲ್ಲಿ ನೀರು ಇಲ್ಲ’ ಎಂದು ಗುರುವಾರ (ಸೆಪ್ಟೆಂಬರ್‌ 21) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಭೆಯ ಬಳಿಕ ಮಾತನಾಡಿದ ಅವರು, “ ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಬೇರೆ ಕೆಲಸವಿದ್ದ ಹಿನ್ನೆಲೆಯಲ್ಲಿ … Continued

ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸಾಂವಿಧಾನಿಕ ಹುದ್ದೆ ನೀಡಿದ ಸರ್ಕಾರ…!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದಿಂದ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ, ಕೆಡಿಪಿ ಸದಸ್ಯರಾನ್ನಾಗಿಯೂ ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ‘ಕಳೆದ 15 ದಿನದ ಹಿಂದೆಯೇ … Continued

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಸೋಮವಾರ ಶಿಕ್ಷಣ ನೀತಿ ಕುರಿತಂತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಿತಿ ರಚನೆ ಮಾಡುವ ವಿಷಯವನ್ನು ತಿಳಿಸಿದರು. ಶಿಕ್ಷಣದ … Continued

ಮಹಿಳೆಯರ ಉಚಿತ ಬಸ್‌ ಪ್ರಯಾಣ ಸ್ಥಗಿತಗೊಳ್ಳಲ್ಲ, ಇದಕ್ಕೆ ನಾನೇ ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಯಾವ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಮಹಿಳೆಯರ ಉಚಿತ ಬಸ್‌ ಪ್ರಯಾಣ ಸೌಲಭ್ಯ ಕೊನೆಯಾಗುತ್ತದೆ ಎಂಬ ಊಹಾಪೋಹ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳಿಂದ ಉಂಟಾದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. … Continued

ತನಿಖೆ ಮುಗಿಯುವವರೆಗೆ ಗುತ್ತಿಗೆದಾರರ ಬಾಕಿ ಪಾವತಿಸುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಗೆ ನಮ್ಮ ಸರ್ಕಾರ ಆದೇಶಿಸಿದೆ ಮತ್ತು ತನಿಖೆ ಪೂರ್ಣಗೊಳ್ಳುವವರೆಗೆ ಸಿವಿಲ್ ಗುತ್ತಿಗೆದಾರರ ಬಾಕಿ ಬಿಲ್‌ಗಳ ಪಾವತಿಯನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ರಾಜ್ಯ … Continued

ಸಚಿವ ಚಲುವರಾಯಸ್ವಾಮಿ ವಿರುದ್ದ ರಾಜ್ಯಪಾಲರಿಗೆ ಪತ್ರ : ಪೊಲೀಸ್ ತನಿಖೆಗೆ ಸೂಚನೆ

ಬೆಂಗಳೂರು: ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ಅಧಿಕಾರಿಗಳು ಬರೆದದ್ದು ಎನ್ನಲಾದ ಪತ್ರದ ಬಗ್ಗೆ ತನಿಖೆ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು, ಮಂಗಳವಾರ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ … Continued

ಆಗಸ್ಟ್​ 3ರಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಆಗಸ್ಟ್​ 3ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅದೇ ದಿನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ … Continued

ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟಿಗೆ ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) … Continued

ಸಾರಿಗೆ ಇಲಾಖೆಯಲ್ಲಿ 4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) 4,000 ಬಸ್‌ಗಳನ್ನು ಖರೀದಿಸಲಾಗುವುದು ಮತ್ತು 13,000 ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ … Continued

ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಇಂದು ಚಾಲನೆ

ಬೆಂಗಳೂರು: ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಬಿಪಿಎಲ್ ಪಡಿತರದಾರರಿಗೆ ‍‍10ಕೆಜಿ ಅಕ್ಕಿ ಗ್ಯಾರಂಟಿ ಕಾಂಗ್ರೆಸ್​ ಘೋಷಿಸಿತ್ತು. ಅದರಂತೆ ಕಾಂಗ್ರೆಸ್‌ ಸರ್ಕಾರ ಅದನ್ನು ಜಾರಿ ಮಾಡಿದೆ. ಸದ್ಯಕ್ಕೆ ಐದು ಕೆಜಿ ಅಕ್ಕಿ ನೀಡಲಿದ್ದು, ಉಳಿದ 5 ಕೆ.ಜಿ … Continued