ಕರ್ನಾಟಕ ಬಜೆಟ್ 2024: ಅಲ್ಪಸಂಖ್ಯಾತರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದೇನು..?

 ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಸಾಕಷ್ಟು ಯೋಜನೆಗಳನ್ನ ಘೋಷಿಸಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. … Continued

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣನವರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು, ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು … Continued

ಕಾರ್ಕಳ : ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ

ಉಡುಪಿ : ಜಿಲ್ಲೆಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣವನ್ನುಸಿಒಡಿ ತನಿಖೆಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಶಿಫಾರಸ್ಸಿನ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಹಗರಣದ ಕುರಿತು ಹೋರಾಟಗಳು ಪ್ರತಿಭಟನೆಗಳು ನಡೆದಿದ್ದವು. ಕಾಂಗ್ರೆಸ್ ಕಾರ್ಯಕರ್ತರು … Continued

ಸಿಎಂ ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ : ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ

ಬೆಂಗಳೂರು: 2022ರ ಏಪ್ರಿಲ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ 10,000 ರೂಪಾಯಿ ದಂಡ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕದ … Continued

ರಾಷ್ಟ್ರಪತಿಗೆ ಏಕವಚನದಲ್ಲಿ ಸಂಬೋಧಿಸಿದ ಸಿಎಂ ಸಿದ್ದರಾಮಯ್ಯ : ಸಿಎಂ ಸ್ಥಾನದಿಂದ ವಜಾಗೊಳಿಸಲು ಕುಮಾರಸ್ವಾಮಿ ಆಗ್ರಹ

 ಚಿತ್ರದುರ್ಗ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಶೋಷಿತ ಸಮುದಾಯಕ್ಕೆ ಸೇರಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವಳನ್ನು ನೂತನ … Continued

ಹೆಚ್ಚುವರಿ ವೇತನ ವಾಪಸ್‌ ನೀಡಲು ನೋಟಿಸ್‌ ; ಹಿರೇಮಗಳೂರು ಕಣ್ಣನ್ ತಪ್ಪಿಲ್ಲ, ತಹಸೀಲ್ದಾರರಿಂದ ಹಣ ವಸೂಲಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಪೂಜಾರಿ ಎಂದೇ ಜನಪ್ರಿಯರಾಗಿರುವ ಸಾಹಿತಿ, ವಾಗ್ಮಿ ಹಾಗೂ ಹಿರೇಮಗಳೂರು ಗ್ರಾಮದ ಕೊಂದಡರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರಾದ ಹಿರೇಮಗಳೂರು ಕಣ್ಣನ್‌ ಅವರಿಗೆ ನೀಡಿದ್ದ ಅರ್ಚಕರ ಹಣವನ್ನು ವಾಪಸ್ ಮಾಡುವಂತೆ ನೀಡಿದ್ದ ನೋಟಿಸ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಹಾಗೂ ಹೆಚ್ಚುವರಿ ಹಣವನ್ನು ತಹಸೀಲ್ದಾರರಿಂದಲೇ ವಸೂಲಿ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಇಂದು ಬುಧವಾರ ಟ್ವೀಟ್‌ ಮಾಡಿರುವ … Continued

ವೀಡಿಯೊ…| ನಾನು ನಾಸ್ತಿಕನಲ್ಲ-ಆಸ್ತಿಕ ; ʼಜೈ ಶ್ರೀರಾಮʼ ಘೋಷಣೆ ಕೂಗಿದ ಸಿದ್ದರಾಮಯ್ಯ

ಬೆಂಗಳೂರು: ನಾನು ನಾಸ್ತಿಕನಲ್ಲ, ನಾನು ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳಿವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾರೆ, ಗುಡಿ ಕಟ್ಟುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೈ ಶ್ರೀರಾಮ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎಂದು ಹೇಳಿದ ಅವರು, ಜೈ ಶ್ರೀರಾಮ … Continued

ರಾಮ ಮಂದಿರ ಉದ್ಘಾಟನೆ : ಸೋಮವಾರ ಸರ್ಕಾರಿ ರಜೆ ನೀಡಲ್ಲ ; ಸಿಎಂ ಸಿದ್ದರಾಮಯ್ಯ

ತುಮಕೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ(ಜನವರಿ 22) ನಡೆಯಲಿದ್ದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ, ಹಿಂದೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ … Continued

ಮತ್ತೆ ವಿವಾದಕ್ಕೆ ಕಾರಣವಾದ ಅನಂತಕುಮಾರ ಹೆಗಡೆ ಹೇಳಿಕೆ : ಸಿದ್ದರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ

ಕುಮಟಾ : ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ನೀಡಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿಯೇ ಸಂಬೋಧಿಸಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಟ್ಕಳ, ಶಿರಸಿ ಹಾಗೂ ಶ್ರೀರಂಗಪಟ್ಟಣದಲ್ಲಿರುವ ಮಸೀದಿಗಳು ಈ ಹಿಂದೆ ದೇವಸ್ಥಾನಗಳೇ ಆಗಿದ್ದವು ಎಂದು ಅವರು ಹೇಳಿಕೆ … Continued

ನಾವೂ ಶ್ರೀರಾಮನ ಭಕ್ತರೆ, ಅಯೋಧ್ಯೆಗೆ ನಾನೂ ಹೋಗಿ ಬರ್ತೇನೆ…ಆದರೆ ಜನವರಿ 22ರ ನಂತರ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ : ಜನವರಿ 22ರ ನಂತರ ನಾವು ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ. ದೇವರನ್ನು ರಾಜಕೀಯ ಉದ್ದೇಶಕ್ಕಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ. … Continued