ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ: ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಘುಮೂರ್ತಿ

ಚಿತ್ರದುರ್ಗ: ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸುವುದು ಬೇಡ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿದ್ದು, ಇದೇ ಜನವರಿ ತಿಂಗಳಲ್ಲೇ ಪ್ರಕಟವಾಗಲಿದೆ ಎಂಬ ವರದಿಯ ಬೆನ್ನಲ್ಲೇ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕಾಂಗ್ರೆಸ್‌ ಶಾಸಕ … Continued

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ; ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಅವರು ಈ ಘೋಷಣೆ ಘೋಷಣೆ ಮಾಡಿದ್ದಾರೆ. ರಾಜ್ಯ, ಜಿಲ್ಲಾ, ತಾಲೂಕು ಹಾಗೂ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಸಮಿತಿ ರಚಿಸಲಾಗುವುದು ಎಂದು … Continued

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ : ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು : ಲಿಂಗಾಯತ ಮಠಾಧೀಶರ ನಿಯೋಗ ಸೋಮವಾರ (ಜನವರಿ 8) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮನವಿ ಮಾಡಿದೆ. ಬಸವಲಿಂಗ ಪಟ್ಟಾದೇವರು ಸ್ವಾಮೀಜಿ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ … Continued

ನಾವು ರಾಮ ಮಂದಿರದ ಪರವಾಗಿದ್ದೇವೆ, ನಾನೂ ರಾಮ ಭಜನೆಗೆ ಹೋಗ್ತಿದ್ದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಯೋಧ್ಯೆ ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಲ ವಿಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಹಾಗೂ ಉದ್ಘಾಟನೆಗೆ ನಮ್ಮ ಯಾವುದೇ ವಿರೋಧವಿಲ್ಲ, ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಹೇಳಿದ್ದಾರೆ. … Continued

ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued

ಹಿಜಾಬ್ ವಿಚಾರ : ಸಿದ್ದರಾಮಯ್ಯ ಯಾವುದೇ ಒಂದು ಪಂಗಡದ ಮುಖ್ಯಮಂತ್ರಿಯಲ್ಲ ; ಪೇಜಾವರ ಶ್ರೀ

ಬೆಳಗಾವಿ : ಹಿಜಾಬ್ ಹಿಂಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀಗಳು ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿವಿಧ ಗುಂಪುಗಳಿಗೆ ವಿಭಿನ್ನ ಕಾನೂನುಗಳನ್ನು ಜಾರಿಗೊಳಿಸುವುದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಇಂಥದ್ದನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಕರ್ನಾಟಕದ ಎಲ್ಲರಿಗೂ ಮುಖ್ಯಮಂತ್ರಿಯಾಗಿದ್ದಾರೆ. ಸಮಾಜದಲ್ಲಿ … Continued

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯಕ್ಕೆ ಬರ ಪರಿಹಾರ ಹಣ ತುರ್ತು ಬಿಡುಗಡೆಗೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಡಿಸೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಪರಿಹಾರದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬರ ಪರಿಸ್ಥಿತಿಯ ಕುರಿತು … Continued

ರೈತರಿಗೆ ಸಿಹಿ ಸುದ್ದಿ…| ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ : ರಾಜ್ಯದಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲದ ಅಸಲು ಹಣ ಪಾವತಿಸಿದರೆ ಸಂಪೂರ್ಣವಾಗಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ … Continued

ಐಸಿಸ್‌ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ: ಯತ್ನಾಳ ಆರೋಪ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ … Continued

ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ಶಾಸಕರ ನೇಮಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಿಗಮ ಮಂಡಳಿಗೆ ಅಧ್ಯಕ್ಷರ ಹುದ್ದೆಗೆ ಮೊದಲ ಹಂತದಲ್ಲಿ ಶಾಸಕರನ್ನ ಮಾತ್ರ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ಜೊತೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಚರ್ಚಿಸಿದ ನಂತರ … Continued