ಮುಡಾ ಹಗರಣ | ಪ್ರಾಸಿಕ್ಯೂಷನ್‌ ಮಂಜೂರಾತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ಆದೇಶ ಮಂಗಳವಾರ ಪ್ರಕಟ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್‌ ಮಂಗಳವಾರ ಪ್ರಕಟಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯ ಒಡೆತನದ್ದು ಎನ್ನಲಾದ ಕೃಷಿ … Continued

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕಲಾವಿದರ ಮಾಸಾಶನವನ್ನು 3000 ರೂ.ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾ 14 ನಿವೇಶನ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗಾಗಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಗುರುವಾರ ಆದೇಶ ಕಾಯ್ದಿರಿಸಿದೆ. ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ ಆದೇಶ ಚಾಲ್ತಿಯಲ್ಲಿರಲಿದೆ ಎಂದು ಅದು … Continued

‘ಸಿಎಂ ಆಕಾಂಕ್ಷಿ’ ನಾಯಕರಿಗೆ ಎಚ್ಚರಿಕೆ ನೀಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್‌ ಮುಖಂಡರು

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸಂಬಂಧ 6ಕ್ಕೂ ಹೆಚ್ಚು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದರ ಜೊತೆಗೆ ಎಚ್ಚರಿಕೆ ನೀಡಬೇಕು ಎಂದು ಕೋರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜ್ಯದ ಕೆಲ ಕಾಂಗ್ರೆಸ್​ ನಾಯಕರು ಪತ್ರ ಬರೆದು ಒತ್ತಾಯಿಸಿದ್ದಾರೆ. ಮಾಜಿ ಸಚಿವರಾದ ಬಿ.ಎಲ್.ಶಂಕರ​, ವಿ.ಎಸ್​.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಪ್ರಕಾಶ​ ರಾಥೋಡ್, ಸಿ.ಎಸ್‌. … Continued

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ಬೆಂಗಳೂರು :ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು … Continued

ಮುಡಾ ಪ್ರಕರಣ : ಸಿದ್ದರಾಮಯ್ಯ ಅವಧಿಯಲ್ಲೇ ಈ ಹಗರಣ ; ಸುಣ್ಣಕ್ಕೆ ಬೆಣ್ಣೆ ಹಂಚಿಕೆ: ಹಿರಿಯ ವಕೀಲ ರಾಘವನ್‌ ಆಕ್ಷೇಪ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಕೆಪಿಎಸ್​​ಸಿ ಪರೀಕ್ಷೆಯಲ್ಲಿ ಗೊಂದಲ : ಮರುಪರೀಕ್ಷೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು … Continued

ಆರೋಪಿತ ಕೋವಿಡ್ ಹಗರಣ : ಸಿಎಂ ಸಿದ್ದರಾಮಯ್ಯಗೆ ತನಿಖಾ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಆಪಾದಿತ ಕೋವಿಡ್ ಹಗರಣದ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಲಾಗಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ. ಕುನ್ಹಾ ಅವರ ನೇತೃತ್ವದ ತಂಡ ತಮ್ಮ ತನಿಖಾ ವರದಿಯನ್ನು ಶನಿವಾರ ರಾತ್ರಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತು. ‘ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಅವರ … Continued

ಮುಡಾ ಹಗರಣ: ರಾಜ್ಯಪಾಲರು ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ : ಸಾಲಿಸಿಟರ್‌ ಜನರಲ್‌ ಮೆಹ್ತಾ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್‌ನಲ್ಲಿ ಶನಿವಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪ್ರಾಸಿಕ್ಯುಶನ್‌ಗೆ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಬಲವಾಗಿ ಸಮರ್ಥಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ … Continued