ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂಡೂಡಿದ ಹೈಕೋರ್ಟ್‌

ಬೆಂಗಳೂರು : ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ಮುಂದೂಡಿದೆ. ಹೈಕೋರ್ಟ್‌ನಲ್ಲಿ ಗುರುವಾರ ನಾಗಪ್ರಸನ್ನ ಅವರ ಏಕ ಸದಸ್ಯರ ಪೀಠ ಅರ್ಜಿ ವಿಚಾರಣೆ ನಡೆಸಿತು. ವಾದ ಆಲಿಸಿದ ಪೀಠ ವಿಚಾರಣೆಯನ್ನು ಆಗಸ್ಟ್‌ 31 ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ ; ಹೈಕೋರ್ಟ್‌ಗೆ ಕೇವಿಯಟ್‌ ಸಲ್ಲಿಕೆ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ನೀಡಿರುವ ಅಭಿಯೋಜನಾ ಮಂಜೂರಾತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದರೆ ತಮ್ಮ ವಾದವನ್ನೂ ಆಲಿಸಬೇಕು ಎಂದು ಕೇವಿಯಟ್‌ ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವ ಬೆಂಗಳೂರಿನ ನಾಗರಭಾವಿಯ ಎಸ್‌.ಪಿ. ಪ್ರದೀಪಕುಮಾರ ಅವರು ವಕೀಲ ಎಂ.ಎಚ್‌. ಪ್ರಕಾಶ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಟಿ.ಜೆ.ಅಬ್ರಹಾಂ ಖಾಸಗಿ ದೂರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಹಾಗಾಗಿ, ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯಕ್ಕೆ ಸೋಮವಾರ … Continued

ಅಕ್ಟೋಬರ್‌ 3ರಂದು ಮೈಸೂರು ದಸರಾ ಉತ್ಸವಕ್ಕೆ ಚಾಲನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9:15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ … Continued

ಬದಲಿ ನಿವೇಶನ ಕೋರಿ ಸಿದ್ದರಾಮಯ್ಯ ಬರೆದಿದ್ದ ‘ಪತ್ರ’ ಬಿಡುಗಡೆ ಮಾಡಿದ ಜೆಡಿಎಸ್‌…!

ಬೆಂಗಳೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿಯೂ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರು ಬದಲಿ ನಿವೇಶನಕ್ಕೆ ಕೋರಿ ಬರೆದಿದ್ದಾರೆ ಎನ್ನಲಾದ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ಟಾಂಗ್‌ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿ … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು ; ಆದೇಶ ಕಾಯ್ದಿರಿಸಿದ ವಿಶೇಷ ಕೋರ್ಟ್‌

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವುದರ ಕುರಿತಾದ ಆದೇಶವನ್ನು ಬೆಂಗಳೂರಿನ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ. ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ … Continued

ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಭೇಟಿ | ಅವೈಜ್ಞಾನಿಕ ಕಾಮಗಾರಿಗೆ ಬಗ್ಗೆ ಕೇಂದ್ರ ಸಚಿವ ಗಡ್ಕರಿಗೆ ಪತ್ರ -ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವೈಜ್ಞಾನಿಕ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಪ್ರಾದೇಶಿಕ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 … Continued