ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಶೋಕಾಸ್‌ ನೋಟಿಸ್‌ ಹಿಂಪಡೆಯಲಿ : ಸಚಿವ ಸಂಪುಟದಲ್ಲಿ ನಿರ್ಣಯ

ಬೆಂಗಳೂರು : ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರವಾಗಿದೆ ಎಂದು ಮುಖ್ಯಮಂತ್ರಿಯವರ ವಿರುದ್ಧ ನೀಡಲಾಗಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿರುವ ಶೋಕಾಸ್‌ ನೋಟಿಸ್‌ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ ಸಂಪುಟವು ರಾಜ್ಯಪಾಲರಿಗೆ ಸಲಹೆ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸೌಧದ ಎದುರು ಧರಣಿ ಕುಳಿತ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ಭೋವಿ ನಿಗಮದ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನಲ್ಲಿ ಇಂದು (ಸೋಮವಾರ) ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು. ತಮ್ಮ ವಿರುದ್ಧದ ಆರೋಪಗಳನ್ನು ಹಿಂಪಡೆಯಬೇಕು ಅಥವಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ … Continued

ತ್ವರಿತ ಕಾರ್ಯಾಚರಣೆಗೆ ಸೂಚನೆ ; ಕ್ಷಿಪ್ರಗತಿಯಲ್ಲಿ ಮಣ್ಣು ತೆರವು, ಶೋಧ ಕಾರ್ಯಾಚರಣೆಗೆ ಮಿಲಿಟರಿ-ನೌಕಾಪಡೆ ನೆರವು ; ಸಿಎಂ ಸಿದ್ದರಾಮಯ್ಯ

 ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಸಿಲುಕಿಕೊಂಡಿರಬಹುದಾದವರ ಶೋಧ ಕಾರ್ಯಾಚರಣೆಯಲ್ಲಿ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಇದಕ್ಕೆ 44 ಜನ ಮಿಲಿಟರಿ ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಭಾನುವಾರ (ಜುಲೈ 21) ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ ; 7ನೇ ವೇತನ ಆಯೋಗದ ಶಿಫಾರಸು ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ (7th Pay Commission) ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ … Continued

ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ; ಸಿಎಂ, ಡಿಸಿಎಂ ಕುರಿತು ಕೆಟ್ಟ ಭಾಷೆ ಬಳಕೆಗೆ ಅತೃಪ್ತಿ

ಬೆಂಗಳೂರು : ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೆಟ್ಟ ಭಾಷೆ ಬಳಸಬಾರದು” ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಶುಕ್ರವಾರ ಹೇಳಿದೆ. ಪ್ರಕರಣವೊಂದರ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಅರ್ಜಿ … Continued

ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

ಬೆಂಗಳೂರು: ‘ಅಕಾಡೆಮಿ, ಪ್ರಾಧಿಕಾರಗಳು ಹಾಗೂ ಸಾಹಿತಿಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ಕಾಂಗ್ರೆಸ್‌ ಪಕ್ಷದ ನಿಲುವೂ ಆಗಿದೆ. ಸಾಹಿತಿ, ಕಲಾವಿದರು, ಸಂಸ್ಕೃತಿ ಚಿಂತಕರನ್ನು ಯಾವುದೇ ಪಕ್ಷದ ಅಡಿಯಾಳುಗಳಂತೆ ಕಾಣುವುದು ಸರಿಯಾದ ನಡವಳಿಕೆಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ‘ಜಾಗೃತ ನಾಗರಿಕರು-ಕರ್ನಾಟಕ’ದ ಪ್ರಮುಖರು ಹೇಳಿದ್ದು, ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂಬ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ … Continued

ವಾಲ್ಮೀಕಿ ನಿಗಮ ಹಗರಣ; ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ ನಾಗೇಂದ್ರ

ಬೆಂಗಳೂರು : ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ತಾನು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಭ್ರಷ್ಟಾಚಾರ ಆರೋಪದ … Continued

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ. ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ … Continued

ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ … Continued

ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued