ಉನ್ನತ ಶಿಕ್ಷಣ-ಉದ್ಯೋಗದಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ : ಸಿಎಂ ಡಿ.ಕೆ.ಶಿವಕುಮಾರ

ವಿಜಯನಗರ : ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸುವ ಪ್ರಸ್ತಾವವನ್ನು ಸರ್ಕಾರದ … Continued

ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು : “ಸಾರ್ವಜನಿಕರ ಕುಂದುಕೊರತೆಗಳು, ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇದಕ್ಕಾಗಿಯೇ  ಪ್ರತ್ಯೇಕವಾಗಿ ಸಚಿವರನ್ನು ನೇಮಿಸಿ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಹೇಳಿದರು. “ಜನರ ಕಷ್ಟ ಅರಿತು, ಕಾನೂನು … Continued

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

ಬೆಂಗಳೂರು: ಡಿಕೆ ಶಿವಕುಮಾರ ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ  ನಡೆದ ಮೊದಲು ಸಂಪುಟ ಸಭೆಯಲ್ಲಿ  ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, 6  ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಸೇರಿದಂತೆ ಮಹತ್ವದ … Continued

ರಸ್ತೆಗಳಲ್ಲಿ ನಮಾಜ್‌ ಮಾಡ್ಬೇಡಿ, ಜಾಗದ ಕೊರತೆಯಿದ್ರೆ ಪಾಳಿಯಲ್ಲಿ ನಮಾಜ್‌ ಮಾಡಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ರಸ್ತೆಗಳ ಮೇಲೆ ನಮಾಜ್ ಮಾಡುವ ಪದ್ಧತಿಯ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸಂಚಾರವನ್ನು ನಿರ್ಬಂಧಿಸುವುದಕ್ಕೆ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಆಡಳಿತವು ಮೊದಲಿಗೆ ಮನವೊಲಿಕೆಯ ಮೂಲಕ ನಿಯಮ … Continued

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ ; ಯತ್ನಾಳ ಭವಿಷ್ಯ

ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ … Continued

ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ದೀಪಾವಳಿ..| ಹಸಿರು ಪಟಾಕಿ ಮಾತ್ರ ಮಾರಾಟ, ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪಟಾಕಿ … Continued

ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿಯನ್ನು ನೇಮಕ ಮಾಡಿದ ಸಿಎಂ ಎಂ.ಕೆ.ಸ್ಟಾಲಿನ್‌

ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ … Continued