ಎಸ್‌ಐಆರ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್‌ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯಲು ಸೂಚನೆ

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕೆಲವೇ ದಿನಗಳಲ್ಲಿ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಭಾರತ ತೊರೆಯುವಂತೆ ಮುಂಬೈ ಪೊಲೀಸರು ನೋಟಿಸ್ ನೀಡಿದ್ದಾರೆ. ಬಾಲಿವುಡ್ ನಟ ಆಮಿರ್ ಖಾನ್ ಅವರ ಸಂಬಂಧಿಯಾಗಿರುವ ಇಮ್ರಾನ್ ಖಾನ್, ಭಾರತೀಯ ಪ್ರಜೆಯಲ್ಲದಿದ್ದರೂ ದೇಶದಲ್ಲಿ ರಾಜಕೀಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು … Continued

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನುಗ್ಗಿದ ಸಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ವಿರುದ್ಧ ಪ್ರತಿಭಟನೆ ನಡೆಸಲು ದೆಹಲಿಯ ಜಂತರ್ ಮಂತರ್‌ಗೆ ನುಗ್ಗಿದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ ರಾಂಕಾ ಅವರನ್ನು ಮಂಗಳವಾರ ಬೆಳಿಗ್ಗೆ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು … Continued

‘ನಾಚಿಕೆಯಾಗಬೇಕು ನಿಮಗೆ’ : ಸಿಜೆಪಿ ನಾಯಕರ ವಶಕ್ಕೂ ಮುನ್ನ ಸೌರವ ದಾಸ್‌-ಮಹಿಳಾ ಪ್ರಯಾಣಿಕಳ ನಡುವೆ ವಾಗ್ವಾದ ; ವಿಡಿಯೊ ವೈರಲ್

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರನ್ನು ಶನಿವಾರ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಪೊಲೀಸರು ವಶಕ್ಕೆ ಪಡೆದ ಘಟನೆಗೆ ಸಂಬಂಧಿಸಿದಂತೆ, ವಿಮಾನದೊಳಗೆ ಸಿಜೆಪಿ ಸಹ ಸಂಚಾಲಕ ಸೌರವ ದಾಸ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ನಡೆದ ಮಾತಿನ ಚಕಮಕಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ, … Continued

ಮಹಿಳೆಯ ಮಾರ್ಫ್‌ ಫೋಟೊ ವಿವಾದ: ಡಿಲೀಟ್‌ ಮಾಡಲು ಮೆಟಾಗೆ ದೆಹಲಿ ಹೈಕೋರ್ಟ್‌ ಆದೇಶ, ಸಿಜೆಪಿ ನಾಯಕರಿಗೆ ನೋಟಿಸ್‌

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಈ ವರ್ಷ ನಡೆದ ಪ್ರತಿಭಟನೆಗಳ ವೇಳೆ ತನ್ನ ಅನುಮತಿಯಿಲ್ಲದೆ ಫೋಟೊವನ್ನು ಮಾರ್ಫ್‌ ಮಾಡಿ ಪ್ರಸಾರ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೈಗೊಂಡಿರುವ ದೆಹಲಿ ಹೈಕೋರ್ಟ್‌, ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ ದಾಸ್‌, ಅಭಿಜಿತ್‌ ದಿಪ್ಕೆ, ಆಶುತೋಷ್‌ ರಾಂಕಾ ಹಾಗೂ ರತ್ನಾ ಸಿಂಗ್‌ ಅವರಿಗೆ ಶುಕ್ರವಾರ ನೋಟಿಸ್‌ … Continued

ಮೋದಿ ಜತೆ ಮಹಿಳೆಯ ಮಾರ್ಫ್‌ ಫೋಟೊ ವಿವಾದ; ಸಿಜೆಪಿ ನಾಯಕರ ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್‌ ಒಪ್ಪಿಗೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ತಾನು ಪ್ರಧಾನಿ ನರೇಂದ್ರ ಮೋದಿ ಅವರಜೊತೆ ಇರುವಂತೆ ತೋರಿಸುವ ಡೀಪ್‌ಫೇಕ್‌ ಚಿತ್ರವನ್ನು ಪೋಸ್ಟ್‌ ಮಾಡಿ ವ್ಯಾಪಕವಾಗಿ ಹರಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ತುರ್ತು ವಿಚಾರಣೆಗೆ ಸ್ವೀಕರಿಸಿದೆ. ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್‌ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued

ಸರ್ಕಾರಿ ಶಾಲೆಗೆ ಅನುಮತಿ ಇಲ್ಲದೆ ಪ್ರವೇಶ: ಸಿಜೆಪಿ ಸಂಚಾಲಕ ಅಭಿಜೀತ ದಿಪ್ಕೆ ವಿರುದ್ಧ ಎಫ್‌ಐಆರ್

 ಲಾತೂರ್:  ಅನುಮತಿ ಇಲ್ಲದೆ ಸರ್ಕಾರಿ ಶಾಲೆ ಪ್ರವೇಶಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದರ ಜೊತೆಗೆ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಚಾಲಕ ಅಭಿಜೀತ ದಿಪ್ಕೆ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶದ್‌ಬಾನೋ … Continued

ಸಿಜೆಪಿ ಪ್ರತಿಭಟನೆ | ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಸುಪ್ರೀಂಕೋರ್ಟ್ ; ಅಪ್ರಾಪ್ತರ ತಕ್ಷಣ ಬಿಡುಗಡೆಗೆ ಸೂಚನೆ

ನವದೆಹಲಿ : ದೆಹಲಿ ಜಂತರ್ ಮಂತರ್ ಹಾಗೂ ವಿವಿಧ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ (Coercive) ಕ್ರಮ ಕೈಗೊಳ್ಳಬಾರದು ಎಂದು ಮಂಗಳವಾರ ಮಹತ್ವದ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, … Continued

ಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ ಯಶಸ್ವಿ : ದೆಹಲಿ ಜಂತರ್‌ ಮಂತರ್‌ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಕ್ರೋಚ್‌ ಜನತಾ ಪಾರ್ಟಿ (CJP) ತನ್ನ ಪ್ರತಿಭಟನೆಯನ್ನು “ತಕ್ಷಣದಿಂದಲೇ ಜಾರಿಗೆ ಬರುವಂತೆ” ಹಿಂಪಡೆದಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿದ್ದ ಬೆಂಬಲಿಗರಿಗೆ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದೆ. ಶುಕ್ರವಾರ ಅಪರಾಹ್ನ ನಡೆದ ಸರ್ಕಾರ ಮತ್ತು ‘ಸಿಜೆಪಿ’ ಜಂಟಿ … Continued

ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ; ಆದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ ಎಂದ ಸಿಜೆಪಿ ಸಂಸ್ಥಾಪಕ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮಗೆ ಟೈಫಾಯ್ಡ್ ಸೋಂಕು ತಗುಲಿರುವುದಾಗಿ ಶನಿವಾರ ಮಾಹಿತಿ ನೀಡಿದ್ದಾರೆ. ಆದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, … Continued

ನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತು

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಸ್ಪಷ್ಟ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದರೆ ತಾವು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಸಿದ್ಧ ಎಂದು ಸಾಮಾಜಿಕ ಹೋರಾಟಗಾರ ಸೋನಂ … Continued