ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued

ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ ; ಸಚಿವ ಜಮೀರ್ ಅಹ್ಮದ್‌ ಪುತ್ರನ ವಿರುದ್ಧ ದೂರು

ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ ಪ್ರಕಾರ, ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಅವರ ತಾಯಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದಕ್ಕೆ ಕಲ್ಟ್ ಚಿತ್ರದ ನಾಯಕ ಜೈದ್ ಖಾನ್ … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ

ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ  ಲೋಕಾಯುಕ್ತ  ಎಡಿಜಿಪಿ ಎಂ. ಚಂದ್ರಶೇಖರ ದೂರು ದಾಖಲಿಸಿದ್ದಾರೆ ಎಂದು ವರದಿಯಾಗದೆ. ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವ ಬೆದರಿಕೆ ಹಾಗೂ ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ … Continued

ಪ್ರಚೋದನಾಕಾರಿ ಹೇಳಿಕೆ ಆರೋಪ : ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲು

ಯಾದಗಿರಿ : ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ ಸಿಂಹ ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ … Continued

ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು

ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬುಧವಾರದ ನೀಡಿದ ಹೇಳಿಕೆ ವಿರುದ್ಧ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿದ ಹೇಳಿಕೆಯು ಪ್ರಚೋದನಕಾರಿ ಮತ್ತು ಅಶಾಂತಿ ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದ್ದಾರೆ. ತೃಣಮೂಲ ಛಾತ್ರ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ … Continued

ನಕಲಿ ಸಹಿ ಆರೋಪ ; ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ನಕಲಿ ಸಹಿ ವಿಚಾರವಾಗಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ದಾಖಲಿಸಬೇಕು ಎಂದು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ … Continued

ಮುಡಾ ಸೈಟ್ ಹಂಚಿಕೆ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್​. ರಮೇಶ ಶನಿವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ ಎನ್.ಆರ್​. ರಮೇಶ್ ಅವರು 400ಕ್ಕೂ ಹೆಚ್ಚು … Continued

ಕಾಪಿರೈಟ್ ಉಲ್ಲಂಘನೆ ದೂರು ; ಸ್ಪಷ್ಟನೆ ಕೊಟ್ಟ ರಕ್ಷಿತ್ ಶೆಟ್ಟಿ : ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ

ಬೆಂಗಳೂರು : ರಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್‌ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಂಡಿದ್ದಾರೆ ಎಂದು ಎಂ ಆರ್‌ ಟಿ ಮ್ಯೂಸಿಕ್ ಸಂಸ್ಥೆಯು ದೂರು ನೀಡಿದ್ದು, ಪರಂವಃ ಸ್ಟಡಿಯೋಸ್‌ ಮಾಲೀಕ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಈಗ ಇದಕ್ಕೆ ಸಂಬಂಧಿಸಿದಂತೆ ‘ಪರಂವಃ ಸ್ಟುಡಿಯೋಸ್​’ ಕಡೆಯಿಂದ ಪ್ರತಿಕ್ರಿಯೆ ನೀಡಿದ್ದು, … Continued