ಆಪರೇಷನ್ ಸಿಂಧೂರ | ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ … Continued

ಯತ್ನಾಳ ಸವಾಲು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ : ಆದರೆ…

ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್‌ ಇದೆ. … Continued

ಅದು ನಮ್ಮ ಅಭಿಪ್ರಾಯವಲ್ಲ…’: ಪಹಲ್ಗಾಮ್ ದಾಳಿಯ ಬಗ್ಗೆ ತನ್ನ ಕೆಲ ನಾಯಕರ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ ಭಿನ್ನ ಹೇಳಿಕೆಗಳ ನಡುವೆ, ಸೋಮವಾರ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಧಿಕೃತ ಎಐಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳು ಮಾತ್ರ ಪಕ್ಷದ ಅಧಿಕೃತ ನಿಲುವನ್ನು ಪ್ರತಿನಿಧಿಸುತ್ತವೆ ಎಂದು ಪಕ್ಷ ಹೇಳಿದೆ. “ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಏಪ್ರಿಲ್ 24ರಂದು … Continued

ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ … Continued

ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು..?

ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಸಂಬಂಧಿಸಿದ ಆಸ್ತಿಗಳ ಮುಟ್ಟುಗೋಲಿಗೆ ಮುಂದಾದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲು ಜಾರಿ ನಿರ್ದೇಶನಾಲಯ (ED) ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಿದ್ದ ₹661 ಕೋಟಿ ಮೌಲ್ಯದ ಸ್ಥಿರ … Continued

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ​ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued

ವಕ್ಫ್ ತಿದ್ದುಪಡಿ ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ

ನವದೆಹಲಿ : ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ, “ವಕ್ಫ್ (ತಿದ್ದುಪಡಿ) ಕಾಯ್ದೆ-2025 (2025 ರ 14) ರ ಸೆಕ್ಷನ್ 1 ರ ಉಪವಿಭಾಗ (2) ರಿಂದ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಸರ್ಕಾರವು ಈ … Continued

ವೀಡಿಯೊ…| ಅಹಮದಾಬಾದಿನಲ್ಲಿ ಬಿಸಿಲಿನ ತಾಪಕ್ಕೆ ಎಚ್ಚರತಪ್ಪಿ ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ ; ಆಸ್ಪತ್ರೆಗೆ ದಾಖಲು

ಅಹಮದಾಬಾದ್‌ : ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಐತಿಹಾಸಿಕ ಸಬರಮತಿ ಆಶ್ರಮದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ … Continued