ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಬೆಳಗಾವಿ: ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರ ಆಡಿಯೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈಗ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಮತ್ತೋರ್ವ ಶಾಸಕ ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಆಡಳಿತ ವ್ಯವಸ್ಥೆ … Continued

ನನ್ನಲ್ಲಿರುವ ಮಾಹಿತಿ ಬಹಿರಂಗವಾದ್ರೆ ಸರ್ಕಾರದ ಬುಡವೇ ಅಲ್ಲಾಡುತ್ತೆ : ವಸತಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಶಾಸಕ ಬಿ.ಆರ್‌.ಪಾಟೀಲ ಆಡಿಯೋ ವೈರಲ್..!

ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಆಡಿಯೋ ಕ್ಲಿಪ್ ಒಂದು ಶುಕ್ರವಾರ (ಜೂ.20) ಎಲ್ಲೆಡೆ ವೈರಲ್ ಆಗಿದೆ. ಅವರದ್ದು ಎನ್ನಲಾದ ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಬಿ.ಆರ್‌.ಪಾಟೀಲ ಅವರು ತಮ್ಮಲ್ಲಿರುವ ಮಾಹಿತಿ ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ … Continued

ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್

ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued

ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ಅನುಮೋದನೆ: ಎಚ್.ಕೆ. ಪಾಟೀಲ

ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು … Continued

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮಾದ್ಯಮದವರ ಜೊತೆ ಮಾತನಾಡಿದ ಅವರು, ‘ನಾವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಆದೇಶ … Continued

ದಾಖಲೆ ಬಿಡುಗಡೆ ಮಾಡಿ ”ತಾನು ಕಳ್ಳ ಪರರ ನಂಬ” ಎಂದು ಕುಮಾರಸ್ವಾಮಿಗೆ ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಸಂಭಾಷಣೆ ವೀಡಿಯೊ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಲ್ಲಿದದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕುಮಾರಸ್ವಾಮಿ ಆರೋಪ ತಳ್ಳಿ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ, ಯತೀಂದ್ರ ಸಿದ್ದರಾಮಯ್ಯ ಯಾವ ವರ್ಗಾವಣೆ ಬಗ್ಗೆ ಕೂಡ … Continued

ಮೂರು ಡಿಸಿಎಂ ಹುದ್ದೆಯ ನನ್ನ ಅಭಿಪ್ರಾಯಕ್ಕೆ ನಾನು ಈಗಲೂ ಬದ್ಧ : ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು : ಪಕ್ಷದ ಹಿತದೃಷ್ಠಿಯಿಂದ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಹೇಳಿದ್ದೇನೆ. ಈ ಅಭಿಪ್ರಾಯಕ್ಕೆ‌ ನಾನು ಈಗಲೂ ಬದ್ಧನಾಗಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮುದಾಯವಾರು ಮೂರು ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. … Continued

ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು ಎಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ

ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಅದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತದೆಯೆಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ಜಾರಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ … Continued