ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ ? ದೆಹಲಿಗೆ ತೆರಳಲಿರುವ ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಬಹುದಿನಗಳ ನಿರೀಕ್ಷೆಯಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿನ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ವೇಗ ಸಿಕ್ಕಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ ಸೋಮವಾರ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಶಿವಕುಮಾರ ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. … Continued

ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್‌ ಫಾಸ್ಟ್‌ʼ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued

‘ಸಿಎಂ ಬದಲಾವಣೆ’ ಚರ್ಚೆ ಮತ್ತೆ ಮುನ್ನೆಲೆಗೆ : ಡಿಕೆ ಶಿವಕುಮಾರ ಬಣದ ಶಾಸಕರು ದಿಢೀರ್ ದೆಹಲಿಗೆ…!

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬಣಕ್ಕೆ ಸೇರಿದ ಕೆಲವು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಬಹುಕಾಲದಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಸೂತ್ರವನ್ನು ಜಾರಿಗೆ ತರಲು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರವು ಗುರುವಾರ (ನವೆಂಬರ್‌  20)ದಂದು 2.5 ವರ್ಷಗಳನ್ನು … Continued

ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್‌.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್‌ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್‌ ಸೂಚನೆಯ ಮೇರೆಗೆ ಅವರನ್ನು … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಇವೆಲ್ಲ ಕೇವಲ ಊಹಾಪೋಹ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ … Continued

ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ … Continued