ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು : ಕೊಪ್ಪಳದ ಬಿಜೆಪಿ ಸಂಸದರಾಗಿದ್ದ ಕರಡಿ ಸಂಗಣ್ಣ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್‌ ನಿರಾಕರಣೆ ಮಾಡಿ ಬಿಜೆಪಿ ಹೊಸಮುಖ ಡಾ. ಬಸವರಾಜ್‌ ಕ್ಯಾವಟರ್‌ ಅವರಿಗೆ ಕೊಪ್ಪಳ ಕ್ಷೇತ್ರದ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ಪ್ರಾಥಮಿ ಸದಸ್ಯತ್ವಕ್ಕೆ ಮತ್ತು ಸಂಸತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continued

ಯುಗಾದಿ ನಂತರ ಮೊದಲ ಹಂತದಲ್ಲಿ ಶಿವರಾಮ ಹೆಬ್ಬಾರ ಪುತ್ರ, ಬೆಂಬಲಿಗರು ಕಾಂಗ್ರೆಸ್‌ ಸೇರಲು ತಯಾರಿ..?

ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ … Continued

ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ … Continued

ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ ಆಯನೂರು ಮಂಜುನಾಥ

ಬೆಂಗಳೂರು: ಕಾಂಗ್ರೆಸ್​​ನ ಆಪರೇಷನ್ ಹಸ್ತ ಭಾರೀ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಮಾಜಿ ವಿಧಾನ ಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಹೇಳಿದ್ದಾರೆ. ಭಾನುವಾರ ಬೆಳಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರನ್ನು ಭೇಟಿಯಾದ ಬಗ್ಗೆ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ … Continued