‘ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ…ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ’ : ಕಾಂಗ್ರೆಸ್ ಮಾಜಿ ನಾಯಕನ ಸ್ಫೋಟಕ ಹೇಳಿಕೆ
ನವದೆಹಲಿ: ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ ಕೃಷ್ಣಂ ಅವರು ಲೋಕಸಭೆ ಚುನಾವಣೆಗೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಒಂದು ದಿನದ ನಂತರ, ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. … Continued