ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued

ವೀಡಿಯೊ…| ಫೇಸ್‌ಬುಕ್‌ನಲ್ಲಿ ಅತ್ಯಾಚಾರ ಬೆದರಿಕೆ-ಅಶ್ಲೀಲ ಕಾಮೆಂಟ್‌ ; ವ್ಯಕ್ತಿಯ ಮನೆಗೇ ತೆರಳಿ ಕಾಂಗ್ರೆಸ್‌ ನಾಯಕಿ-ಬೆಂಬಲಿಗರಿಂದ ಗೂಸಾ

ವಾರಾಣಸಿ : ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿರುವುದು ಮತ್ತು ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಸ್ಥಳೀಯ ಕಾಂಗ್ರೆಸ್ ಮಹಿಳಾ ನಾಯಕಿ ರೋಶನಿ ಕುಶಾಲ ಜೈಸ್ವಾಲ್ ಹಾಗೂ ಅವರ ಬೆಂಬಲಿಗರು ಕೇಸರಿ ರಾಜೇಶ ಸಿಂಗ್ ಎಂಬ ವ್ಯಕ್ತಿಯನ್ನು ಆತನ ನಿವಾಸಕ್ಕೆ ತೆರಳಿ ಥಳಿಸಿದ್ದಾರೆ. ಮನೆಗೆ ನುಗ್ಗಿ, ಹೆಂಡತಿ ಮಕ್ಕಳ ಮುಂದೆಯೇ ಆತನಿಗೆ ಥಳಿಸಿದ್ದಾರೆ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ … Continued

ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ಬೆಂಗಳೂರು :ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದವುಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು … Continued

ಹರಿಯಾಣ ವಿಧಾನಸಭೆ ಚುನಾವಣೆ; ಕುಸ್ತಿಪಟು ವಿನೇಶ್‌ ಫೋಗಟ್‌ ಗೆ ಕಾಂಗ್ರೆಸ್‌ ಟಿಕೆಟ್‌

ಚಂಡೀಗಢ : ಜುಲಾನಾದಿಂದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಲಿಂಪಿಯನ್‌ ಕುಸ್ತಿಪಟು ವಿನೇಶ್ ಫೋಗಟ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಜುಲಾನ್‌ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಇದು ತೂಕದ ಕಾರಣಕ್ಕೆ ಒಲಿಂಪಿಕ್ ನಿಂದ ಅನರ್ಹತೆಗೊಂಡ ನಂತರ ಪ್ರಸಿದ್ಧ ಕುಸ್ತಿಪಟುವಿನ ಜೀವನದಲ್ಲಿ ಹೊಸ ಆರಂಭವನ್ನು ಗುರುತಿಸಿದೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರ, ಮತ್ತು … Continued

‘ನಾನು ಸಿಎಂ ರೇಸಲ್ಲಿ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷದ ವರೆಗೆ ಸಿಎಂ ; ವರಸೆ ಬದಲಿಸಿದ ದೇಶಪಾಂಡೆ

ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ … Continued

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ: ಆರ್‌.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ, ಆದರೆ ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಅಚ್ಚರಿ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued