ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ ಐ ಆರ್‌

ಮೈಸೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ನೀಡಿದ್ದ ದೂರಿನ ಆಧಾರದ ಮೇಲೆ. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued

ವೀಡಿಯೊ..| ಚನ್ನಪಟ್ಟಣ ಚುನಾವಣೆ : ಕುಮಾರಸ್ವಾಮಿಗೆ “ಕಾಲಾ ಕುಮಾರಸ್ವಾಮಿ” ಎಂದು ಕರೆದ ಸಚಿವ ಜಮೀರ್​ ಅಹ್ಮದ್‌ ; ಭುಗಿಲೆದ್ದ ವಿವಾದ

ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ … Continued

ಕಾಂಗ್ರೆಸ್ಸಿನಿಂದ ಅಚ್ಚರಿಯ ನಡೆ ; ಪಕ್ಷದ ಹಿಮಾಚಲ ಪ್ರದೇಶ ರಾಜ್ಯ ಘಟಕ ವಿಸರ್ಜಿಸಿದ ಹೈಕಮಾಂಡ್‌…!

ನವದೆಹಲಿ: ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಲಾಗಿದೆ. ಕಾಂಗ್ರೆಸ್‌ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶವೂ ಒಂದಾಗಿದೆ. ಬುಧವಾರ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು, ‘ಹಿಮಾಚಲದ ಸಂಪೂರ್ಣ ರಾಜ್ಯ ಘಟಕ, ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಂಪೂರ್ಣ ವಿಸರ್ಜಿಸುವ … Continued

ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued

ಕರ್ನಾಟಕ ಸುವರ್ಣ ಸಂಭ್ರಮ : 100 ಸಾಧಕರಿಗೆ ವಿಶೇಷ ಪ್ರಶಸ್ತಿ ಪ್ರಕಟ

ಬೆಂಗಳೂರು : ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವೆಂಬರ್‌ 1ರಂದು ಕರ್ನಾಟಕ ಸಂಭ್ರಮ-50 ಅಭಿಯಾನದ ಸಮಾರೋಪ ನಡೆಯಲಿದೆ. ಸುವರ್ಣ ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಮಹಿಳಾ ಮತ್ತು 50 ಪುರುಷ ಸಾಧಕರು ಸೇರಿ ಒಟ್ಟು 100 ಸಾಧಕರಿಗೆ 2024ನೇ … Continued

ಹರಿಯಾಣ ಚುನಾವಣೆ : ನಿಮ್ಮ ನಿರಾಧಾರ ಆರೋಪಗಳು ಅರಾಜಕತೆ ಸೃಷ್ಟಿಸಬಹುದು; ಕಾಂಗ್ರೆಸ್ಸಿಗೆ ಚುನಾವಣಾ ಆಯೋಗ ತರಾಟೆ, ಆರೋಪಕ್ಕೆ 1,642 ಪುಟಗಳ ಉತ್ತರ…

ನವದೆಹಲಿ : ಇತ್ತೀಚೆಗಷ್ಟೇ ಮುಕ್ತಾಯಗೊಂಡ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮಾಡಿದ “ಅಕ್ರಮ”ಗಳ ಆರೋಪಗಳನ್ನು “ಆಧಾರರಹಿತ” ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ತಿರಸ್ಕರಿಸಿದೆ. ಹಾಗೂ ತಮಗೆ ಅನುಕೂಲಕರವಲ್ಲದ ಚುನಾವಣಾ ಫಲಿತಾಂಶಗಳು ಬಂದಾಗ ಅನುಮಾನಗಳ ಹೊಗೆ ಹೆಚ್ಚಿಸದಂತೆ ಪಕ್ಷಕ್ಕೆ ಎಚ್ಚರಿಕೆ ನೀಡಿದೆ. ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಲವು ಆರೋಪಗಳನ್ನು ಮಾಡಿತ್ತು. ಇವಿಎಂ … Continued

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್‌ ತೀರ್ಪು

ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ಕೋರ್ಟ್‌ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ. ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ … Continued

ಉಪಚುನಾವಣೆ : ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್‌ ಘೋಷಣೆ ಮಾಡಿದ ಕಾಂಗ್ರೆಸ್‌

ನವದೆಹಲಿ : ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರಿಗೆ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ ಇಂದು ಗುರುವಾರ (ಅಕ್ಟೋಬರ್ 24) ಅಭ್ಯರ್ಥಿಯನ್ನು ಪ್ರಕಟಿಸಿದೆ. ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್, ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ … Continued

ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued