ಉಪಚುನಾವಣೆ; ಕರ್ನಾಟಕದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್‌ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ … Continued

ವಯನಾಡು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಆಸ್ತಿ ಘೋಷಣೆ ; ಇವರಿಗಿಂತ ಪತಿಯ ಆಸ್ತಿ 5 ಪಟ್ಟು ಹೆಚ್ಚು

 ವಯನಾಡು : ವಯನಾಡು ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿರುವ ಪ್ರಿಯಾಂಕಾ ತಮ್ಮ ಬಳಿ ಇರುವ ಆಸ್ತಿಯ ಮೌಲ್ಯವನ್ನು ಘೋಷಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಅವರ ಪತಿ ರಾಬರ್ಟ್ ವಾದ್ರಾ ಅವರು ಸುಮಾರು 66 ಕೋಟಿ ರೂಪಾಯಿ ಮೌಲ್ಯದ ಆಸ್ತಿ … Continued

ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continued

ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ : ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೂ ಸೊಪ್ಪು ಹಾಕದ ಸಿ. ಪಿ. ಯೋಗೇಶ್ವರ ಬುಧವಾರ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಯೋಗೇಶ್ವಶ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ … Continued

ಚನ್ನಪಟ್ಟಣ ಉಪಚುನಾವಣೆ | ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದ ಯೋಗೇಶ್ವರ ; ಕಾಂಗ್ರೆಸ್‌ ಸೇರ್ಪಡೆ ಈಗ ಔಪಚಾರಿಕ

ಬೆಂಗಳೂರು: ಭಾರೀ ಕೂತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್‌ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್​ಆಯಪ್​ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. … Continued

ಜಾರ್ಖಂಡ ಚುನಾವಣೆ | ಸೀಟು ಹಂಚಿಕೆ ಬಗ್ಗೆ ‘ಇಂಡಿಯಾ ಬಣ’ದಲ್ಲಿ ಮೂಡದ ಒಮ್ಮತ ; ಏಕಾಂಗಿಯಾಗಿ ಸ್ಪರ್ಧಿಸಲು ಆರ್‌ಜೆಡಿ ನಿರ್ಧಾರ..!

ರಾಂಚಿ: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆ (Jharkhand Assembly Election) ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ತಾನು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಿತ್ರ ಪಕ್ಷ ರಾಷ್ಟ್ರೀಯ ಜನತಾ ದಳ (RJD) ಹೇಳಿದೆ. ಸೀಟು ಹಂಚಿಕೆಗೆ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಮಹಾ ವಿಕಾಸ್‌ ಅಘಾಡಿ’ ಭಿನ್ನಮತ ಬಹಿರಂಗ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ್‌ ಅಘಾಡಿಯಲ್ಲಿನ ಭಿನ್ನಮತ ಬಹಿರಂಗವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರೊಂದಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಶಿವಸೇನೆ ಹೇಳಿದೆ. ಇದರ … Continued

ದೇವೇಗೌಡರನ್ನೇ ಸೋಲಿಸಿದ ನನಗೇ ಟಿಕೆಟ್ ಕೊಡಿ : ಸಿದ್ದರಾಮಯ್ಯಗೆ ತೇಜಸ್ವಿನಿ ಗೌಡ ಪತ್ರ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ತೀವ್ರತೆ ಪಡೆದುಕೊಂಡಿದೆ. ಇದರ ಮಧ್ಯೆ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ತಾನೂ ಟಕೆಟ್‌ ಆಕಾಂಕ್ಷಿಯಾಗಿದ್ದು, ತಮ್ಮನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಪತ್ರ ಬರೆದಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued