ನಾಲ್ಕು ರಾಜ್ಯಗಳಲ್ಲಿ ಎಎಪಿ – ಕಾಂಗ್ರೆಸ್‌ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ದೆಹಲಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಎಎಪಿ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ 7 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಹಾಗೂ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಜೊತೆಗೆ ಗುಜರಾತ್‌, ಹರಿಯಾಣ, ಗೋವಾ ಹಾಗೂ ಚಂಡೀಗಢದಲ್ಲಿ ಸೀಟು … Continued

23 ಸಂಸದರ ಆಸ್ತಿ 15 ವರ್ಷಗಳಲ್ಲಿ ಸರಾಸರಿ 1,045%ರಷ್ಟು ಏರಿಕೆ : ಕರ್ನಾಟಕದ ಯಾವ ಸಂಸದರ ಆಸ್ತಿಯಲ್ಲಿ ಏರಿಕೆ ?

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ವರದಿಯೊಂದರ ಪ್ರಕಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು 35.18 ಕೋಟಿ ರೂ.ಗಳಿಂದ 402.79 ಕೋಟಿರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಅಸೋಸಿಯೇಷನ್‌ … Continued

ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್‌ನಲ್ಲಿ ತಿರಸ್ಕೃತ; ಸರ್ಕಾರಕ್ಕೆ ಭಾರೀ ಮುಖಭಂಗ

ಬೆಂಗಳೂರು : ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗವಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ವಿಧಾನ ಪರಿಷತ್‌ನಲ್ಲಿ … Continued

ಮತ್ತೆ ಕಾಂಗ್ರೆಸ್‌ ಸೇರ್ಪಡೆಯಾದ ಮುದ್ದಹನುಮೇಗೌಡ : ಅಸಮಾಧಾನ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ಪಕ್ಷ ತೊರೆದು ಮರಳಿ ಕಾಂಗ್ರೆಸ್ಸಿಗೆ ಸೇರ್ಪಡೆ ಆಗಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಗೃಹ ಸಚಿವ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು. ಸಚಿವರಾದ ಕೆ.ಎನ್‌. ರಾಜಣ್ಣ, ಶಾಸಕರಾದ ಗುಬ್ಬಿ ಶ್ರೀನಿವಾಸ್‌, ಡಾ.ರಂಗನಾಥ್‌, ಕೆ.ವೈ.ನಂಜೇಗೌಡ … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಝಡ್ ಪ್ಲಸ್ ಭದ್ರತೆ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಖರ್ಗೆಯವರ ಬೆದರಿಕೆ ಗ್ರಹಿಕೆಯನ್ನು ಆಧರಿಸಿ ಗೃಹ ಸಚಿವಾಲಯವು ಈ ತಿಂಗಳ ಆರಂಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅದು ಹೇಳಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ … Continued

ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ. ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ … Continued

ಲೋಕಸಭೆ ಚುನಾವಣೆ : ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಸಮಾಜವಾದಿ ಪಕ್ಷದ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ಲಕ್ನೋ : 2024ರ ಲೋಕಸಭೆ ಚುನಾವಣೆಗೆ ಅಖಿಲೇಶ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು,ಈ ಬಗ್ಗೆ ಸಮಾಜವಾದಿ ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ ಅವರು, ಉತ್ತರ ಪ್ರದೇಶದಲ್ಲಿ ಸ್ಥಾನ ಹೊಂದಾಣಿಕೆಯಲ್ಲಿ ಸಮಾಜವಾದಿ ಪಕ್ಷ 63 … Continued

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ಸಿನ ಪುಟ್ಟಣ್ಣಗೆ ಜಯ

ಬೆಂಗಳೂರು : ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರು ಜೆಡಿಎಸ್​​ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ​ ಅವರನ್ನು 1507 ಮತಗಳ ಅಂತರದಿಂದ ಸೋಲಿಸಿದರು. ಇಂದು, ಮಂಗಳವಾರ (ಫೆಬ್ರವರಿ 20) ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ … Continued

ಕಾಂಗ್ರೆಸ್ಸಿಗೆ ಸಡ್ಡು ಹೊಡೆದ ಅಖಿಲೇಶ ಯಾದವ್‌ : ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಷರತ್ತು : ಏನದು..?

ನವದೆಹಲಿ: ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿಯವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ ಯಾದವ್ ಭಾಗವಹಿಸುವ ಬಗ್ಗೆ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮ ಆಗುವವರೆಗೆ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ಸಮಾಜವಾದಿ ಪಕ್ಷವು ಭಾಗವಹಿಸುವುದಿಲ್ಲ ಎಂದು … Continued

ಕಾಂಗ್ರೆಸ್‌ ನಾಯಕ ಕಮಲನಾಥ ಬಿಜೆಪಿ ಸೇರ್ತಾರಾ..? ಸಾಮಾಜಿಕ ಮಾಧ್ಯಮ ಬಯೋದಿಂದ ಕಾಂಗ್ರೆಸ್‌ ಅನ್ನು ಕೈಬಿಟ್ಟ ಮಗ ನಕುಲ್‌..!

ನವದೆಹಲಿ : ಪಕ್ಷದ ನಾಯಕತ್ವದ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ. ಶರ್ಮಾ ಅವರು ಹೇಳಿಕೊಂಡ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ನಕುಲ ಕಮಲನಾಥ ಅವರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ತೆಗೆದುಹಾಕಿದ್ದು, ಸಂಭವನೀಯ ರಾಜಕೀಯ ಬದಲಾವಣೆಯ ಪ್ರಮುಖ ಸುಳಿವನ್ನು ನೀಡಿದ್ದಾರೆ … Continued