‘ನಾನು ಸಿಎಂ ರೇಸಲ್ಲಿ ಇಲ್ಲವೇ ಇಲ್ಲ, ಸಿದ್ದರಾಮಯ್ಯ ಅವರೇ 5 ವರ್ಷದ ವರೆಗೆ ಸಿಎಂ ; ವರಸೆ ಬದಲಿಸಿದ ದೇಶಪಾಂಡೆ

ಧಾರವಾಡ : ಕೆಲವು ದಿನಗಳ ಹಿಂದೆ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಈಗ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿ ಮುಗಿಯುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ … Continued

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ: ಆರ್‌.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ, ಆದರೆ ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಅಚ್ಚರಿ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್​​ ನಾಯಕರು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್​ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued

ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ 5 ಎಕರೆ ಜಮೀನು ; ಇದು ಅಧಿಕಾರ ದುರುಪಯೋಗವಲ್ಲವೇ- ಲೆಹರ್‌ ಸಿಂಗ್ ಪ್ರಶ್ನೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಡಾ ಸೈಟ್ , ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈಗ ಬಿಜೆಪಿ ಸಂಸದ ಲಹರ್‌ ಸಿಂಗ್ (Lahar Singh)​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, … Continued

ಜಮ್ಮು- ಕಾಶ್ಮೀರ ಚುನಾವಣೆ: ಎನ್‌ಸಿ-ಕಾಂಗ್ರೆಸ್ ಸೀಟು ಹಂಚಿಕೆ ಬಹುತೇಕ ಫೈನಲ್

ನವದೆಹಲಿ : ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಬಬಣಗಳಾದ ಕಾಂಗ್ರೆಸ್‌ ಹಾಗೂ ನ್ಯಾಶನಲ್‌ ಕಾನ್ಫರೆನ್ಸ್‌ ಸಂಭಾವ್ಯ ಸೀಟು ಹಂಚಿಕೆ ಸೂತ್ರಕ್ಕೆ ಒಮ್ಮತಕ್ಕೆ ಬಂದಿವೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಸರಿಸುಮಾರು 40 ಸ್ಥಾನಗಳಲ್ಲಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (NC) ಸುಮಾರು 50 ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಈ ಪಕ್ಷಗಳು ಮೈತ್ರಿಯ … Continued

ಮುಡಾ ಹಗರಣ: ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಉತ್ತರ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಮುಡಾ ದಾಖಲೆ ಪೋಸ್ಟ್ ಮಾಡಿರುವ ಅವರು, ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮುಡಾ … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ ಪರಿಷತ್‌ ಸದಸ್ಯನ ವಿವಾದಾತ್ಮಕ ಹೇಳಿಕೆ

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯದಿದ್ದರೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು “ಬಾಂಗ್ಲಾದೇಶದಂತಹ ಸನ್ನಿವೇಶ” ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ರಾಜ್ಯಪಾಲರ ನಿರ್ಧಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ರಾಜ್ಯಪಾಲರು ತಮ್ಮ ಆದೇಶವನ್ನು ಹಿಂಪಡೆಯದಿದ್ದರೆ ಅಥವಾ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ … Continued