ಮಹಾರಾಷ್ಟ್ರ: ಮಾಜಿ ಸಿಎಂ ಅಶೋಕ ಚವಾಣ ಪಕ್ಷ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರು ಗೈರು…!

ಮುಂಬೈ: ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಮಹಾರಾಷ್ಟ್ರದಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಶಾಸಕರ ಸಭೆಗೆ ಕನಿಷ್ಠ ಐವರು ಶಾಸಕರು ಹಾಜರಾಗಲಿಲ್ಲ ಎಂದು ವರದಿಯಾಗಿದೆ. ಇದು ಇನ್ನೂ ಅನೇಕ ಶಾಸಕರು ಬಿಜೆಪಿಗೆ ಪಕ್ಷಾಂತರವಾಗಬಹುದು ಎಂಬ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕರಾದ ಜೀಶನ್ ಸಿದ್ದಿಕ್ (ಬಾಂದ್ರಾ ಪೂರ್ವ), … Continued

2022ರ ವರೆಗೆ ₹ 16,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳು ಮಾರಾಟ : ಬಿಜೆಪಿಗೆ ಸಿಂಹ ಪಾಲು ; ಯಾವ ಪಕ್ಷಗಳು ಪಡೆದದ್ದೆಷ್ಟು ಎಂಬುದು ಇಲ್ಲಿದೆ…

ನವದೆಹಲಿ: ಚುನಾವಣಾ ಬಾಂಡ್‌ಗಳು ಇದುವರೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ₹ 16,437.63 ಕೋಟಿ ಮೌಲ್ಯದ 28,030 ಎಲೆಕ್ಟೋರಲ್ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರಲ್ಲಿ ಸಿಂಹ ಪಾಲು ಬಿಜೆಪಿ ಪಾಲಾಗಿದೆ ಎಂದು ಅಂದಾಜಿಸಲಾಗಿದೆ. ಈಗ ರದ್ದಾದ ಚುನಾವಣಾ ಬಾಂಡ್ ಯೋಜನೆಯನ್ನು 2018ರಲ್ಲಿ ಪರಿಚಯಿಸಿದ ನಂತರ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ₹ 12,000 ಕೋಟಿಗೂ ಹೆಚ್ಚು ಹಣವನ್ನು … Continued

ರಾಜ್ಯಸಭೆ ಚುನಾವಣೆ: ಐದನೇ ಅಭ್ಯರ್ಥಿಯಾಗಿ ಜೆಡಿಎಸ್- ಬಿಜೆಪಿ ಮೈತ್ರಿಯಿಂದ ಕುಪೇಂದ್ರ ರೆಡ್ಡಿ ಕಣಕ್ಕೆ ; ಇದರ ಹಿಂದಿನ ಲೆಕ್ಕಾಚಾರ ಏನು..?

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಎನ್​ಡಿಎ ಮೈತ್ರಿಯ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣಾ ಅಖಾಡ ಮತ್ತಷ್ಟು ರಂಗೇರಲಿದೆ. … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್‌ ಪಟ್ಟಿ ಬಿಡುಗಡೆ ; ಕರ್ನಾಟಕದಿಂದ ಮೂವರ ಹೆಸರು ಪ್ರಕಟ

ಬೆಂಗಳೂರು : ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ಬಿಡುಗಡೆಗೊಳಿಸಿದ್ದು, ಕರ್ನಾಟಕದಿಂದ ಮೂವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಜೊತೆಗೆ ತೆಲಂಗಾಣ ಹಾಗೂ ಮಧ್ಯಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆಗೊಳಿಸಲಾಗಿದ್ದು, ಅಜಯ್ ಮಾಕೇನ್, ಡಾ. ಸೈಯ್ಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಹಾಗೂ ಕಾಂಗ್ರೆಸ್‌ ನಾಯಕ ಹಾಗೂ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಲಾಲಬಹದ್ದೂರ ಶಾಸ್ತ್ರೀ ಮೊಮ್ಮಗ..

ನವದೆಹಲಿ: ಮಾಜಿ ಪ್ರಧಾನಿ ಲಾಲಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಶಾಸ್ತ್ರಿ ಇಂದು, ಬುಧವಾರ ಮುಂಜಾನೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ತೊರೆದ ಕೆಲವು ಗಂಟೆಗಳ ನಂತರ ಅವರು ಭಾರತೀಯ ಜನತಾ … Continued

ಕಾಂಗ್ರೆಸ್ ತೊರೆದ ಮರುದಿನವೇ ಬಿಜೆಪಿ ಸೇರಿದ ಅಶೋಕ ಚವಾಣ ; ನಾಳೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ..?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು, ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಚವಾಣ ಅವರು ಫೆಬ್ರವರಿ 14 ರಂದು ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ ಚವಾಣ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದ ಪ್ರಾಥಮಿಕ … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

ವೀಡಿಯೊ…| ಮೋದಿಪರ ಘೋಷಣೆ ಕೂಗುತ್ತಿದ್ದವರ ಜೊತೆ ಹಸ್ತಲಾಘವ ಮಾಡಿದ ರಾಹುಲ್ ಗಾಂಧಿ : ವೀಕ್ಷಿಸಿ

ಛತ್ತೀಸ್‌ಗಢ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರ ಕೈಕುಲುಕಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಪಕ್ಷವು “ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ” ಎಂದು ಹೇಳಿಕೆ ನೀಡಿದೆ. ಕಳೆದ ವಾರ ಒಡಿಶಾದ ಕೊರ್ಬಾದಿಂದ ಧೋಡಿಪಾರಾ ಮೂಲಕ ಕಟ್ಘೋರಾ ಮಾರ್ಗದಲ್ಲಿ ರಾಹುಲ್ ಗಾಂಧಿ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚವಾಣ ರಾಜೀನಾಮೆ ; 10-12 ಶಾಸಕರೊಂದಿಗೆ ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವನೆಗೆ ತಿಂಗಳುಗಳ ಮೊದಲು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಂಸದ ಅಶೋಕ ಚವಾಣ ಅವರು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಮೂಲಗಳ … Continued

ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued