ರಾಹುಲ್ ಗಾಂಧಿ ಪೌರತ್ವ ವಿವಾದ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಬಗ್ಗೆ ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಾನು ಸಲ್ಲಿಸಿದ್ದ ದೂರಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು … Continued

ರಾಜ್ಯದಲ್ಲಿ ಅಕ್ರಮ-ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆ ಕಾರ್ಯ ಶೀಘ್ರವೇ ಆರಂಭ…!

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಹಣ ಉಳಿತಾಯ ಮಾಡಲು ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದನ್ನು ಪತ್ತೆ ಹಚ್ಚಲು ಮುಂದಾಗಿದೆ. ಶೀಘ್ರವೇ ಅನರ್ಹರು ಹಾಗೂ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಅನ್ನು ರದ್ದುಗೊಳಿಸಲು ಪರಿಶೀಲನೆ ಕಾರ್ಯ ಆರಂಭಿಸಲು ಸರ್ಕಾರ ಮುಂದಾಗಲಿದೆ ಎಂದು ವರದಿಯಾಗಿದೆ. ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು … Continued

ಚನ್ನಪಟ್ಟಣದ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾನೇ ಎಂದ ಡಿ.ಕೆ.ಶಿವಕುಮಾರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗುರುವಾರ(ಆಗಸ್ಟ್ 15) ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ‘ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನಾನೇ ಅಭ್ಯರ್ಥಿ’ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಹೆಚ್ಚಿನ ವಿವರಣೆ ನೀಡಿಲ್ಲ. ಚನ್ನಪಟ್ಟಣದಲ್ಲಿ ಪ್ರಥಮ ಬಾರಿಗೆ … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ

ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪುಷ್ಪಾ ಅಮರನಾಥ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿದ್ದರು. ಅವರ ಬದಲಿಗೆ ಸೌಮ್ಯಾ ರೆಡ್ಡಿ ಅವರನ್ನು ನೇಮಕ … Continued

ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಎಎಪಿ ನಿರ್ಧಾರ

ನವದೆಹಲಿ :  ಇಂಡಿಯಾ (I.N.D.I.A) ಬ್ಲಾಕ್‌ಗೆ ಹಿನ್ನಡೆಯಲ್ಲಿ, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಘೋಷಿಸಿದೆ. ಮಹಾ ವಿಕಾಸ್ ಅಘಾಡಿ (MVA) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಊಹಾಪೋಹಗಳನ್ನು ಪಕ್ಷ ನಿರಾಕರಿಸಿದೆ. ಕೆಲವೇ ತಿಂಗಳುಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಪ್ರಾಥಮಿಕ ಸ್ಪರ್ಧೆಯು … Continued

ರಾಹುಲ್​ ಗಾಂಧಿ ಹೊಲಿಗೆ ಹಾಕಿದ್ದ ಚಪ್ಪಲಿಗೆ ಡಿಮಾಂಡಪ್ಪೋ ಡಿಮಾಂಡು : ಚಪ್ಪಲಿಗೆ ₹10 ಲಕ್ಷದ ಆಫರ್‌ ತಿರಸ್ಕರಿಸಿದ ಅಂಗಡಿಯಾತ..!

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ (Rahul Gandhi) ಸುಲ್ತಾನ್​ಪುರಕ್ಕೆ ಹೋಗಿದ್ದಾಗ ಚಪ್ಪಲಿ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ವೇಳೆ ಅವರು ಹೊಲಿಗೆ ಹಾಕಿದ್ದ ಚಪ್ಪಲಿಗಳಿಗೆ ಈಗ ಚಿನ್ನದ ಬೇಡಿಕೆ ಬಂದಿದೆ. ಆ ಚಪ್ಪಲಿಗಳನ್ನು ಲಕ್ಷ ಲಕ್ಷ ಹಣವನ್ನು ಕೊಟ್ಟು ಖರೀದಿ ಮಾಡಲು ಜನರು ಮುಂದೆ ಬಂದಿದ್ದಾರೆ. ರಾಹುಲ್ ಗಾಂಧಿ ಜುಲೈ 26ರಂದು ಮಾನನಷ್ಟ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ಆರ್‌ ಎಸ್‌ ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿಷೇಧ ವಾಪಸ್ : ಕಾಂಗ್ರೆಸ್ ಖಂಡನೆ

ನವದೆಹಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‍ಎಸ್‍ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಇದ್ದ ನಿಷೇಧ ಹಿಂಪಡೆಯಲಾಗಿದೆ ಎಂದು ಸರ್ಕಾರದ ಉನ್ನತ … Continued

ಕೆಲವರು ʼಸೂಪರ್‌ ಮ್ಯಾನ್‌ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್

ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued