ಅನ್ನಭಾಗ್ಯ ಯೋಜನೆ ; ಇನ್ಮುಂದೆ 5 ಕೆಜಿ ಅಕ್ಕಿ ಬದಲಿಗೆ ʼಇಂದಿರಾ ಆಹಾರ ಕಿಟ್‌ʼ ವಿತರಣೆ ; ಅದರಲ್ಲಿ ಏನೇನು ಇರಲಿದೆ..?

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ (Anna Bhagya Scheme) ಇನ್ಮುಂದೆ ʼಇಂದಿರಾ ಆಹಾರ ಕಿಟ್‌ʼ ವಿತರಣೆ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಹಾಲಿ ಪಡಿತರ ಚೀಟಿದಾರರಿಗೆ ಅನ್ನಭಾಗ್ಯದಲ್ಲಿ ಕೇಂದ್ರದಿಂದ 5 ಕೆಜಿ ಅಕ್ಕಿ ಹಾಗೂ ರಾಜ್ಯದಿಂದ 5 ಕೆಜಿ ಅಕ್ಕಿ ಒಟ್ಟು 10 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ 5 ಕೆಜಿ … Continued

ಕರ್ನಾಟಕದ ಮಹಿಳಾ ಉದ್ಯೋಗಿಗಳಿಗೆ ಗುಡ್‌ನ್ಯೂಸ್‌ : ವೇತನ ಸಹಿತ ಮುಟ್ಟಿನ ರಜೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ ಒಂದು ವೇತನ ಸಹಿತ ಮುಟ್ಟಿನ ರಜೆ (Menstrual leave) ನೀಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಋತು ಚಕ್ರ ರಜೆ ನೀತಿ 2025 (Menstrual Leave Policy, 2025)ಗೆ ಇಂದು, ಗುರುವಾರಸಚಿವ ಸಂಪುಟ … Continued

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರ ಚುನಾವಣೆ (Bihar Assembly Election) ದಿನಾಂಕವನ್ನು ಇಂದು ಸೋಮವಾರ (ಅಕ್ಟೋಬರ್‌ 6) ಘೋಷಣೆ ಮಾಡಿದೆ. ಬಿಹಾರದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್‌ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ನವೆಂಬರ್‌ 14 ರಂದು ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ … Continued

ಬಿಹಾರ ಚುನಾವಣೆ | 4 ಒಪಿನಿಯನ್‌ ಪೋಲ್‌ ; ಎನ್‌ಡಿಎ, ಆರ್‌ಜೆಡಿ ಮಹಾಘಟಬಂಧನ ಮಧ್ಯೆ ಜಿದ್ದಾಜಿದ್ದಿ : ಯಾರಿಗೆ ಮುನ್ನಡೆ ?

2025 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ನಾಲ್ಕು ಪ್ರಮುಖ ಒಪಿನಿಯನ್‌ ಪೋಲ್‌ಗಳ ಫಲಿತಾಂಶಗಳು ರಾಜ್ಯದ ಮತದಾರರ ಟ್ರೆಂಡ್‌ ಬಗ್ಗೆ ಹೇಳಿವೆ. ಮ್ಯಾಟ್ರಿಕ್ಸ್, ಜೆವಿಸಿ, ಸ್ಪೀಕ್ ಮೀಡಿಯಾ ನೆಟ್‌ವರ್ಕ್ ಮತ್ತು ವೋಟ್ ವೈಬ್ ನಡೆಸಿದ ಸಮೀಕ್ಷೆಗಳು ಬಿಜೆಪಿ, ಜೆಡಿಯು, ಎಲ್‌ಜೆಪಿ (ರಾಮ ವಿಲಾಸ) ಮತ್ತು ಎಚ್‌ಎಎಂ ಒಳಗೊಂಡ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಮುನ್ನಡೆಯನ್ನು ತೋರಿಸಿವೆ. … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ; ಸಂಪೂರ್ಣ ಪಟ್ಟಿ…

ಬೆಂಗಳೂರು : ರಾಜ್ಯದ 34 ನಿಗಮ/ಮಂಡಳಿ, ಪ್ರಾಧಿಕಾರಗಳಿಗೆ (boards and corporations) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರನ್ನು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿ ವರೆಗೆ ನೇಮಿಸಲಾಗಿದೆ. ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ ಶಿವಲೀಲಾ ವಿನಯ ಕುಲಕರ್ಣಿ – … Continued

ಎಲ್ಲ ಮಾಹಿತಿಯನ್ನೂ 2 ವರ್ಷಗಳ ಹಿಂದೆಯೇ ನೀಡಲಾಗಿದೆ : ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಉತ್ತರ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಗುರುವಾರ ಮಾಡಿದ ಮತದಾರರ ಪಟ್ಟಿ ಅಳಿಸುವಿಕೆ ಆರೋಪಗಳಿಗೆ ಗುರುವಾರ ಪ್ರತಿಕ್ರಿಯಿಸಿರುವ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ರಾಹುಲ್ ಗಾಂಧಿ ಹೇಳಿದ ಅಳಿಸುವಿಕೆಯ ಮಾಹಿತಿಯನ್ನು ಚುನಾವಣಾ ಆಯೋಗವು ಎರಡು ವರ್ಷಗಳ ಹಿಂದೆಯೇ ರಾಜ್ಯ ಸಿಐಡಿಗೆ ನೀಡಿದೆ ಎಂದು ಹೇಳಿದ್ದಾರೆ. “ರಾಹುಲ್ ಗಾಂಧಿಗೆ ಅಗತ್ಯವಿರುವ ಮಾಹಿತಿಯನ್ನು ಕರ್ನಾಟಕ ಸಿಇಒ ಎರಡು ವರ್ಷಗಳ … Continued

ವೀಡಿಯೊ..| ಕರ್ನಾಟಕದ ಆಳಂದ ಮತಕ್ಷೇತ್ರದ 6,000ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲು ಯತ್ನ : ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ತಮ್ಮ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಭದ್ರಕೋಟೆಯಲ್ಲಿ ಮತದಾರರ ಪಟ್ಟಯಿಂದ ಮತದಾರರ ಹೆಸರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇಂದು ಗುರುವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಆಳಂದ ಕ್ಷೇತ್ರದಲ್ಲಿ … Continued

ಮಾಲೂರು ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡಗೆ ಬಿಗ್‌ ಶಾಕ್‌ ; ಆಯ್ಕೆ ಅಸಿಂಧು ಎಂದ ಹೈಕೋರ್ಟ್‌

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರು ಶಾಸಕ ಕಾಂಗ್ರೆಸ್‌ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್‌ ಮಂಗಳವಾರ ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ. ಮುಂದಿನ ನಾಲ್ಕು ವಾರಗಳಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ (ಸಿಇಸಿ) ಹೈಕೋರ್ಟ್‌ ನಿರ್ದೇಶಿಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ. ನಂಜೇಗೌಡ … Continued

ಕಾರವಾರ ಶಾಸಕ ಸತೀಶ ಸೈಲ್ ಬಂಧಿಸಿದ ಇ.ಡಿ.

ಕಾರವಾರ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬೆಂಗಳೂರಿನಲ್ಲಿ ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಚಾರಣೆಗಾಗಿ ಇ.ಡಿ. ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಶಾಸಕ ಸತೀಶ್ ಸೈಲ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬಳಿಕ ಇ.ಡಿ. ಅಧಿಕಾರಿಗಳು … Continued