ಲೋಕಸಭೆ ಚುನಾವಣೆ ಎಕ್ಸಿಟ್‌ ಪೋಲ್‌ ಪ್ರಕಟ : ಕರ್ನಾಟಕದಲ್ಲಿಯೂ ಎನ್‌ಡಿಎ ಹೆಚ್ಚು ಸೀಟು ಗೆಲ್ಲುತ್ತದೆ ಎಂದ ಎಲ್ಲ ಸಮೀಕ್ಷೆಗಳು….

ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಅದೇರೀತಿ ಕರ್ನಾಟಕದಲ್ಲಿಯೂ ಬಹುತೇಕ ಎಲ್ಲ ಸಮೀಕ್ಷೆಗಳು ಎನ್‌ಡಿಎ (ಬಿಜೆಪಿ+ ಜೆಡಿಎಸ್‌ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ 28 ಸ್ಥಾನಗಳಿದ್ದು, ಇದರಲ್ಲಿ ಎನ್‌ಡಿಎ ಮೈತ್ರಿಕೂಟವು ಮುನ್ನಡೆ ಕಾಯ್ದುಕೊಂಡಿದೆ ಎಂದು ಸಮೀಕ್ಷೆ ಹೇಳುತ್ತಿದೆ. … Continued

ಲೋಕಸಭಾ ಚುನಾವಣೆ 2024: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ; ವಿವಿಧ ಸಮೀಕ್ಷೆಗಳು ಏನು ಹೇಳಿವೆ ಎಂಬುದು ಇಲ್ಲಿದೆ…

ದೇಶದ ಹಲವು ಸಮೀಕ್ಷಾ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಈವರೆಗೆ ಬಂದಿರುವ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ 3ನೇ ಬಾರಿಗೆ ಬಿಜೆಪಿ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕಾಗಿದ್ದು, ಪೋಲ್‌ ಆಫ್‌ ಪೋಲ್‌ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ 365 ಸ್ಥಾನಗಳನ್ನು … Continued

ಲೋಕಸಭಾ ಚುನಾವಣೆ : ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸಲ್ಲ ಎಂದ ಕಾಂಗ್ರೆಸ್ ; ಯಾಕೆಂದರೆ..

ನವದೆಹಲಿ: ಜೂನ್ 1 ರಂದು ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳ ಕುರಿತ ಸುದ್ದಿ ವಾಹಿನಿಗಳಲ್ಲಿ ನಡೆಯುವ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ. ಲೋಕಸಭೆಯ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಪಾಲ್ಗೊಳ್ಳದಿರುವ ಪಕ್ಷದ ನಿರ್ಧಾರವನ್ನು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ ಖೇರಾ ಅವರು ಪ್ರಕಟಿಸಿದ್ದು, ಮತದಾರರು ಮತ ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು … Continued

ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ಹಾಗೂ … Continued

ಲೋಕಸಭೆ ಚುನಾವಣೆ 2024 : ಸಟ್ಟಾ ಬಜಾರ್ ಬೆಟ್ಟಿಂಗ್‌ ಭವಿಷ್ಯ ; ಸೀಟು ಗೆಲ್ಲುವ ಲೆಕ್ಕಾಚಾರದಲ್ಲಿ ಬಿಜೆಪಿ ಮುಂದೆ ; ಆದರೆ….

ನವದೆಹಲಿ : ದೇಶದ ಏಳನೇ ಹಂತದ ಲೋಕಸಭಾ ಚುನಾವಣೆಗಿಂತ ಮೊದಲು ದೇಶದ ಅನಧಿಕೃತ ಎಕ್ಸಿಟ್‌ ಪೋಲ್‌ ಎನಿಸಿಕೊಂಡಿರುವ ಸಟ್ಟಾ ಬಜಾರದಲ್ಲಿ ಹೊಸ ಲೆಕ್ಕಾಚಾರಗಳು ಹೊರಬಿದ್ದಿದೆ. ದೇಶದಲ್ಲಿ 6 ಹಂತದ ಮತದಾನ ಮುಕ್ತಾಯವಾಗಿದ್ದು, ಜೂನ್‌ 1ರಂದು ಏಳನೇ ಹಂತದ ಮತದಾನ ನಡೆಯಲಿದೆ. 6ನೇ ಹಂತದ ಚುನಾವಣೆ ಮುಗಿದ ಬಳಿಕ ಸಟ್ಟಾ ಬಜಾರ್‌ ಬಿಜೆಪಿ 290 ಸೀಟ್‌ ಗೆಲ್ಲಬಹುದು … Continued

ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ಸಿನಲ್ಲಿ 300ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿದ್ದಾರೆ : ಡಿಕೆ ಶಿವಕುಮಾರ

ಬೆಂಗಳೂರು: “ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗಾಗಿ ಕಾಂಗ್ರೆಸ್ಸಿನಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಹಂಚಿಕೆ ಟಿಕೆಟ್‌ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದ್ದಾರೆ. ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಶಿವಕುಮಾರ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ … Continued

ವೀಡಿಯೊ..| ಇಂಡಿಯಾ ಬಣದ ಸಮಾವೇಶದಲ್ಲಿ ಕುಸಿದ ವೇದಿಕೆ : ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯ ಅಂತಿಮ ಹಂತದ ಚುನಾವಣಾ ಪ್ರಚಾರಕ್ಕಾಗಿ ಬಿಹಾರಕ್ಕೆ ಆಗಮಿಸಿದ್ದ ರಾಹುಲ್‌ ಗಾಂಧಿ ಕಾರ್ಯಕ್ರಮದ ವೇದಿಕೆ ಹಠಾತ್ ಕುಸಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇಂಡಿಯಾ ಮೈತ್ರಿಕೂಟದ ಇತರ ನಾಯಕರು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಮುನ್ನ ನಾಯಕರು ಒಗ್ಗಟ್ಟು ಪ್ರದರ್ಶಿಸಲು ವೇದಿಕೆ ಮೇಲೆ … Continued

ಪರಿಷತ್ ಚುನಾವಣೆ: ಕಾಂಗ್ರೆಸ್ಸಿನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ‌ರಾಜ್ಯದಲ್ಲಿ ಜೂನ್‌ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಒಟ್ಟು 6 ಕ್ಷೇತ್ರಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ಕೈತಪ್ಪಿದ … Continued

‘ಅಜ್ಞಾನ, ಸೋಮಾರಿತನ, ದುರಹಂಕಾರ’ ಇದುವೇ ಕಾಂಗ್ರೆಸ್‌ ಯಶಸ್ಸು ಪಡೆಯಲು ಇರುವ ಅಡ್ಡಿ : ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಅಭಿಪ್ರಾಯ

ನವದೆಹಲಿ : “ಅಜ್ಞಾನ, ಸೋಮಾರಿತನ, ದುರಹಂಕಾರ” ಇವುಗಳು ಚುನಾವಣೆಯಲ್ಲಿ ಯಶಸ್ಸು ಪಡೆಯಲು ಕಾಂಗ್ರೆಸ್ಸಿಗೆ ಅಡ್ಡಿಯಾಗುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಹೇಳಿದ್ದಾರೆ. ಹಾಗೂ ರಾಜಕೀಯದಿಂದ ಕೆಲಕಾಲ ವಿರಾಮ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಅದರಿಂದ … Continued

ವೀಡಿಯೊ..: ಮುಸ್ಲಿಂ ಮೀಸಲಾತಿ ಬಗ್ಗೆ ಕಾಂಗ್ರೆಸ್‌ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ ಮೋದಿ : ರಾಹುಲ್ ಗಾಂಧಿ ವೈರಲ್ ವೀಡಿಯೊ ಉಲ್ಲೇಖ

ಪಶ್ಚಿಮ ಬಂಗಾಳದ ಜಾರ್‌ಗ್ರಾಮದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಮರಿಗೆ ಮೀಸಲಾತಿ ನೀಡುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಸಿದುಕೊಳ್ಳಲು ಕಾಂಗ್ರೆಸ್ ಉದ್ದೇಶಿಸಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ಪಕ್ಷವು ಇನ್ನೂ ಮುಸ್ಲಿಂ ಲೀಗ್‌ನ ಚಿಂತನೆ ಹೊಂದಿರುವ ಕೋಮುವಾದಿ ಪಕ್ಷವಾಗಿದೆ ಎಂದು ಪ್ರಧಾನಿ ಆರೋಪಿಸಿದರು. “ನನ್ನ ಇತ್ತೀಚಿನ ಸಂದರ್ಶನಗಳಲ್ಲಿ … Continued