ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು … Continued

ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ನಡುವೆಯೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ ಪಕ್ಷದ ದೆಹಲಿ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ ಅವರು ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗೆ … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued

ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ “ರಾಬರ್ಟ್ ವಾದ್ರಾ ಅಬ್ ಕಿ ಬಾರ್” ಪೋಸ್ಟರ್…!

ಅಮೇಥಿ : ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್‌ ಅಭ್ಯರ್ಥಿಯ ಬಗ್ಗೆ ಸಸ್ಪೆನ್ಸ್ ನಡುವೆ, ಪಕ್ಷದ ಸ್ಥಳೀಯ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued