ಕರ್ನಾಟಕದ ಉಪಚುನಾವಣೆ : ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು, ಮತ್ತೆ ಸೋತ ನಿಖಿಲ ಕುಮಾರಸ್ವಾಮಿ

ಬೆಂಗಳೂರು : ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಎಲ್ಲ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಚನ್ನಪಟ್ಟಣದ ಜಿದ್ದಾಜಿದ್ದಿ ಕಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರು ಜೆಡಿಎಸ್‌ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ ಕುಮಾರಸ್ವಾಮಿ ವಿರುದ್ಧ 25,515 ಮತಗಳ ಅಂತರದಿಂದ ಭರ್ಜರಿ ಗೆಲುವು … Continued

ಉಪಚುನಾವಣೆ : ಕರ್ನಾಟಕದ 3 ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ ? ಎಕ್ಸಿಟ್‌ ಪೋಲ್‌ ಹೇಳಿದ್ದೇನು..?

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಪಿಮಾರ್ಕ್ ಎಕ್ಸಿಟ್‌ ಪೋಲ್‌ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಿದೆ. ಪಿಮಾರ್ಕ್ ಸಮೀಕ್ಷೆ ಪ್ರಕಾರ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ … Continued

ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಸಚಿವ ಜಮೀರ್ ಅಹ್ಮದ್‌ ವಿರುದ್ಧ ಕ್ರಮ: ಪರೋಕ್ಷ ಸುಳಿವು ನೀಡಿದರೇ ಗೃಹ ಸಚಿವ ಪರಮೇಶ್ವರ..?

ಮೈಸೂರು : ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪರೋಕ್ಷ ಸುಳಿವು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜಮೀರ್ ಹೇಳಿಕೆಯಿಂದ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ … Continued

ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಕಾಂಗ್ರೆಸ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಶನಿವಾರ ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಅವರು ಶನಿವಾರ ಮೈಸೂರಿನ ಲಕ್ಷ್ಮಿಪುರಂ … Continued

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇತ್ತೀಚಿಗೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇಳೆ … Continued

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ ಐ ಆರ್‌

ಮೈಸೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ನೀಡಿದ್ದ ದೂರಿನ ಆಧಾರದ ಮೇಲೆ. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued

ವೀಡಿಯೊ..| ಚನ್ನಪಟ್ಟಣ ಚುನಾವಣೆ : ಕುಮಾರಸ್ವಾಮಿಗೆ “ಕಾಲಾ ಕುಮಾರಸ್ವಾಮಿ” ಎಂದು ಕರೆದ ಸಚಿವ ಜಮೀರ್​ ಅಹ್ಮದ್‌ ; ಭುಗಿಲೆದ್ದ ವಿವಾದ

ರಾಮನಗರ: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿಕೆ ನೀಡಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಸಿಪಿ ಯೋಗೇಶ್ವರ ಹಾಗೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಹೈವೊಲ್ಜೇಜ್ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ ಅವರ ಪರವಾಗಿ ಮತಯಾಚಿಸುವಾಗ ವಸತಿ … Continued

ಕಾಂಗ್ರೆಸ್ಸಿನಿಂದ ಅಚ್ಚರಿಯ ನಡೆ ; ಪಕ್ಷದ ಹಿಮಾಚಲ ಪ್ರದೇಶ ರಾಜ್ಯ ಘಟಕ ವಿಸರ್ಜಿಸಿದ ಹೈಕಮಾಂಡ್‌…!

ನವದೆಹಲಿ: ಹಿಮಾಚಲ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕವನ್ನು ವಿಸರ್ಜಿಸಲಾಗಿದೆ. ಕಾಂಗ್ರೆಸ್‌ ತನ್ನದೇ ಪಕ್ಷದ ಮುಖ್ಯಮಂತ್ರಿಯನ್ನು ಹೊಂದಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶವೂ ಒಂದಾಗಿದೆ. ಬುಧವಾರ ಹೇಳಿಕೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು, ‘ಹಿಮಾಚಲದ ಸಂಪೂರ್ಣ ರಾಜ್ಯ ಘಟಕ, ಹಿಮಾಚಲ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರು ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಂಪೂರ್ಣ ವಿಸರ್ಜಿಸುವ … Continued