ಪ್ರಜಾಪ್ರಭುತ್ವವನ್ನು ಈ ರೀತಿ ಕಗ್ಗೊಲೆ ಮಾಡಲು ಬಿಡುವುದಿಲ್ಲ: ಚಂಡೀಗಢ ಮೇಯರ್ ಚುನಾವಣೆ ಬಗ್ಗೆ ಸುಪ್ರೀಂ ಕೋರ್ಟ್‌ ಸಿಡಿಮಿಡಿ

ನವದೆಹಲಿ: ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಮತಪತ್ರವನ್ನು ವಿರೂಪಗೊಳಿಸಿದ ಚುನಾವಣಾಧಿಕಾರಿಯನ್ನು ಕಾನೂನುರೀತ್ಯಾ ವಿಚಾರಣೆಗೆ ಒಳಪಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಚುನಾವಣಾಧಿಕಾರಿಯು ಮತಪತ್ರ ವಿರೂಪಗೊಳಿಸುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದಾಗಿದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ಹೇಳಿತು. ಮೇಯರ್ ಚುನಾವಣೆಯಲ್ಲಿ ಸೋತ ಆಮ್ ಆದ್ಮಿ ಪಕ್ಷದ (ಎಎಪಿ) … Continued

ಯುಪಿಎ ಸರ್ಕಾರ V/S ಮೋದಿ ಸರ್ಕಾರ : ಕೇಂದ್ರದ ಅನುದಾನದ ಲೆಕ್ಕ ನೀಡಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಹಣ ಸಂಗ್ರಹವಾದರೂ ಮೋದಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ ಹಣ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ಆರೋಪಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್‌ ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ ಎಂದು ರಾಜ್ಯ ಬಿಜೆಪಿ … Continued

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued

ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued

‘ಹಿಂದೂ’ ಪದದ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಂಗಳೂರು : ಹಿಂದು ಪದದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ‘ಹಿಂದೂ’ ಎಂಬ ಪದವು ಪರ್ಷಿಯನ್ ಪದವಾಗಿದ್ದು, ಅದಕ್ಕೆ ‘ಅಶ್ಲೀಲ’ ಎಂಬ ಅರ್ಥವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸತೀಶ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

ದೆಹಲಿಯಲ್ಲಿ ಫೆ.7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಪಾಲಿನ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ನಡೆಯುವ ಧರಣಿಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ. ಅಲ್ಲದೆ, ರಾಜ್ಯದ 138 … Continued

‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು. ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ … Continued

ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued