ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್‌ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued

ನನ್ನ ಭೇಟಿಗೆ ಬರುವ ಜನರು ಆಧಾರ ಕಾರ್ಡ್‌ ತರಬೇಕು ಎಂದ ಸಂಸದೆ ಕಂಗನಾ ರಣಾವತ್‌ ; ಕಾಂಗ್ರೆಸ್‌ ಟೀಕೆ

ಶಿಮ್ಲಾ : ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ ರಣಾವತ್‌, ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಭೇಟಿಗೆ ಬರುವವರು ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು. … Continued

ತೆಲಂಗಾಣದಲ್ಲಿ ಬಿ ಆರ್​ ಎಸ್​ ಗೆ ಆಘಾತ; ಪಕ್ಷದ 6 ಎಂಎಲ್​ಸಿಗಳು ಕಾಂಗ್ರೆಸ್ಸಿ​ಗೆ ಸೇರ್ಪಡೆ

ಹೈದರಾಬಾದ್‌ : ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಂದು ಆGಆತ ಎದುರಾಗಿದ್ದು, ಬಿಆರ್‌ಎಸ್‌ ಪಕ್ಷದ ಆರು ವಿಧಾನ ಪರಿಷತ್‌ ಸದಸ್ಯರು ಶುಕ್ರವಾರ ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪರಿಷತ್‌ ಸದಸ್ಯರಲ್ಲಿ ದಂಡೆ ವಿಠ್ಠಲ, ಭಾನು ಪ್ರಸಾದ, ಬಿ ದಯಾನಂದ, ಪ್ರಭಾಕರ ರಾವ್, … Continued

ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ ; ಆಸ್ಪತ್ರೆಗೆ ದಾಖಲು

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್‌ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್‌ ಅವರನ್ನು ತಕ್ಷಣವೇ ಆಂಬುಲೆನ್ಸ್‌ ನಲ್ಲಿ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued

ಡಿಕೆ ಶಿವಕುಮಾರಗೆ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಬಿಟ್ಟುಕೊಡಲಿ : ಸಿಎಂ ಸಮ್ಮುಖದಲ್ಲೇ ಸ್ವಾಮೀಜಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗ ಮುಖ್ಯಮಂತ್ರಿ ಸಿದರಾಮಯ್ಯ ಅವರ ಮುಂದೆಯೇ ಡಿಕೆ ಶಿವಕುಮಾರ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಸ್ವಾಮೀಜಿಯೊಬ್ಬರು ನೇರವಾಗಿ ಒತ್ತಾಯಿಸಿದ ವಿದ್ಯಮಾನ ನಡೆದಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, … Continued

ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೊಡಾ ಮರುನೇಮಕ

ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನಿಡಿದ್ದ ಸ್ಯಾಮ್ ಪಿತ್ರೊಡಾ ಅವರನ್ನು ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮರು ನೇಮಕ ಮಾಡಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆದೇಶಿಸಿದ್ದಾರೆ. ಗಾಂಧಿ ಕುಟುಂಬದ ನಿಷ್ಠ ಸ್ಯಾಮ್ ಪಿತ್ರೋಡಾ ಅವರು ನೀಡಿದ್ದ ‘ಜನಾಂಗೀಯ’ ಹೇಳಿಕೆಗಳು ಮತ್ತು ಉತ್ತರಾಧಿಕಾರ ತೆರಿಗೆಯ … Continued

ಕಾಂಗ್ರೆಸ್‌ ವಿರುದ್ಧದ ಆಕ್ಷೇಪಾರ್ಹ ಅನಿಮೇಟೆಡ್‌ ವೀಡಿಯೊ : ನಡ್ಡಾ, ಮಾಳವಿಯಾಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಕುರಿತು ಬಿಜೆಪಿಯ ಅಧಿಕೃತ ಸಾಮಾಜಿಕ ಖಾತೆಯಲ್ಲಿ ಪ್ರಸಾರ ಮಾಡಲಾಗಿದ್ದ ಆಕ್ಷೇಪಾರ್ಹ ಅನಿಮೇಟೆಡ್ ವೀಡಿಯೊಕ್ಕೆ ಆಕ್ಷೇಪಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ ಮಾಳವಿಯಾ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ವೇಳೆ ಖುದ್ದು ಹಾಜರಾತಿಗೆ ಹೈಕೋರ್ಟ್‌ ವಿನಾಯಿತಿ ನೀಡಿದೆ. ಕಲಬುರ್ಗಿಯ ಸೈಬರ್‌ ಠಾಣೆಯಲ್ಲಿ ದಾಖಲಾಗಿರುವ … Continued

ಬಳ್ಳಾರಿ ನೂತನ ಮೇಯರ್ ಆಗಿ ನಂದೀಶಬಾಬು, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ಮೇಯರ್‌ ಆಗಿ ಕಾಂಗ್ರೆಸ್ಸಿನ ಮುಲ್ಲಂಗಿ ನಂದೀಶಬಾಬು ಶುಕ್ರವಾರ ಆಯ್ಕೆಯಾಗಿದ್ದಾರೆ. ಉಪ ಮೇಯರ್‌ ಆಗಿ ಕಾಂಗ್ರೆಸ್ಸಿನ ಡಿ. ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಳ್ಳಾರಿ ನಗರ ಪಾಲಿಕೆಯ 39 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 21 ಹಾಗೂ ಪಕ್ಷೇತರರಾಗಿ ಆರಿಸಿ ಬಂದು ಕಾಂಗ್ರೆಸ್ ಬೆಂಬಲಿಸಿರುವ 5 ಜನ ಸದಸ್ಯರು ಸೇರಿದಂತೆ 26 ಜನರ … Continued

ನೇಣು ಬಿಗಿದುಕೊಂಡು ಕಾಂಗ್ರೆಸ್‌ ಶಾಸಕನ ಪತ್ನಿ ಆತ್ಮಹತ್ಯೆ…!?

ಕರೀಂನಗರ: ಕಾಂಗ್ರೆಸ್ ಶಾಸಕ ಮೇಡಿಪಲ್ಲಿ ಸತ್ಯಂ ಅವರ ಪತ್ನಿ ರೂಪಾ ದೇವಿ ಅವರು ಜೂನ್ 20 ಶುಕ್ರವಾರ ತಡರಾತ್ರಿ ಅಲ್ವಾಲ್‌ನ ಪಂಚಶೀಲ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸತ್ಯಂ ಅವರು ಹಿಂದಿನ ಕರೀಂನಗರ ಜಿಲ್ಲೆಯ ಚೊಪ್ಪದಂಡಿ ಕ್ಷೇತ್ರದಲ್ಲಿದ್ದರು. ಮೂಲಗಳ ಪ್ರಕಾರ ರೂಪಾ ದೇವಿ … Continued

ವಿಪಕ್ಷ ನಾಯಕನಾಗಲು ಒಪ್ಪದ ರಾಹುಲ್ ಗಾಂಧಿ : ಕಾಂಗ್ರೆಸ್ಸಿನಲ್ಲಿ ಮುನ್ನೆಲೆಗೆ ಮೂವರ ಹೆಸರುಗಳು…!?

ನವದೆಹಲಿ : 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಬಲವಾದ ನಿರೀಕ್ಷೆಗಳ ಮಧ್ಯೆಯೇ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ತೆಗೆದುಕೊಳ್ಳಲು ರಾಹುಲ್ ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಮೂರು ಹೆಸರುಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ ಎನ್ನಲಾಗಿದೆ. … Continued