ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ : ಲೋಕಸಭೆ ಚುನಾವಣೆಯಲ್ಲಿ 35 ಕೋಟಿ ಮತಗಳನ್ನು ಪಡೆಯುವ ಗುರಿ, ರಾಮಮಂದಿರ ಪ್ರಮುಖ ಚರ್ಚೆ

ನವದೆಹಲಿ : ಐದು ರಾಜ್ಯಗಳ ಚುನಾವಣೆಯ ಬೆನ್ನಲ್ಲೇ, ಭಾರತದ ಎರಡೂ ದೊಡ್ಡ ರಾಜಕೀಯ ಪಕ್ಷಗಳು ನಾಲ್ಕು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಯತ್ತ ತಮ್ಮ ಗಮನವನ್ನು ಹರಿಸಿವೆ. ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ಎರಡು ಪ್ರಮುಖ ಸಭೆಗಳು ಪಕ್ಷಗಳು ತಮ್ಮನ್ನು ತಾವು ಕಂಡುಕೊಳ್ಳುವ ವಿಭಿನ್ನ ಸ್ಥಾನಗಳನ್ನು ಪ್ರತಿಬಿಂಬಿಸುತ್ತದೆ. ಶನಿವಾರ ಕೊನೆಗೊಂಡ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ … Continued

2024ರ ಲೋಕಸಭೆ ಚುನಾವಣೆಗೆ 16 ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಿದ ಕಾಂಗ್ರೆಸ್‌

ನವದೆಹಲಿ: ಕಾಂಗ್ರೆಸ್ ಪಕ್ಷವು 2024 ರ ಲೋಕಸಭೆ ಚುನಾವಣೆಗೆ ಶುಕ್ರವಾರ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದು, ರಾಜ್ಯಸಭಾ ಸಂಸದ ಪಿ ಚಿದಂಬರಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಿತಿಯ ಸಂಚಾಲಕನ ಸ್ಥಾನವನ್ನು ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿ.ಎಸ್. ಸಿಂಗ್ ದೇವ್ ಅವರಿಗೆ ನೀಡಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ 16 ಸದಸ್ಯರು … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued

ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಯೋಜನೆ ಟೆಂಡರ್‌ ರದ್ದು : ಕಾಂಗ್ರೆಸ್‌ ಆಕ್ರೋಶ

 ಹುಬ್ಬಳ್ಳಿ: ಧಾರವಾಡ-ಕಿತ್ತೂರು, ಬೆಳಗಾವಿ ರೈಲು ಮಾರ್ಗದ ಕ್ಯಾರಕೊಪ್ಪ-ಮಮ್ಮಿಗಟ್ಟಿ ರೈಲು ಮಾರ್ಗ ಅಭಿವೃದ್ಧಿಪಡಿಸಲು ಮಂಜೂರಾದ ಟೆಂಡರ್‌ ಅನ್ನು ಕೇಂದ್ರ ಸರ್ಕಾರ ಯಾವುದೇ ಕಾರಣ ನೀಡದೆ ಏಕಾಏಕಿ ರದ್ದುಪಡಿಸಿದ್ದು ಇದು ಈ ಭಾಗಕ್ಕೆ ಭಾರೀ ಹಿನ್ನಡೆಯಾಗಿದೆ. ಆದರೆ ಈ ಭಾಗದ ಬಿಜೆಪಿ ನಾಯಕರು ಹಾಗೂ ಸಂಸದರು ನಿಷ್ಕ್ರಿಯರಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ … Continued

ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

  ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ … Continued

ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ. ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

ಕಾಂಗ್ರೆಸ್ ಸಂಸದರ ನಿವೇಶನದ ಮೇಲೆ ನಡೆದ ದಾಳಿಯಲ್ಲಿ 176 ಬ್ಯಾಗ್ ನಗದು ವಶ : ₹353 ಕೋಟಿ ಎಣಿಕೆ… ಎಣಿಕೆ ಮುಂದುವರೆದಿದೆ….!

ನವದೆಹಲಿ: ನವದೆಹಲಿ: ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ವಶಪಡಿಸಿಕೊಂಡ ಹಣದ ಎಣಿಕೆಯನ್ನು ಭಾನುವಾರದೊಳಗೆ ಮುಗಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಡಿಸೆಂಬರ್ 6 ರಂದು ದಾಳಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಒಟ್ಟು 176 ಬ್ಯಾಗ್‌ಗಳಲ್ಲಿ 140 ಬ್ಯಾಗ್‌ಗಳ ಎಣಿಕೆಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಸಂಬಂಧಿಸಿದ ನಿವೇಶನಗಳಲ್ಲಿ ಆದಾಯ ತೆರಿಗೆ … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಆಫರ್ ನೀಡಿದ ಡಿಕೆಶಿ : ಅದಕ್ಕೆ ಶಿವರಾಜಕುಮಾರ ಹೇಳಿದ್ದೇನೆಂದರೆ….

ಬೆಂಗಳೂರು: ನಟ ಶಿವರಾಜಕುಮಾರ (ShivaRajkumar) ಅವರಿಗೆ ಲೋಕಸಭೆಗೆ ಸ್ಪರ್ಧಿಸುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಹ್ವಾನ ನೀಡಿದ್ದಾರೆ. ಆದರೆ, ನಟ ಶಿವರಾಜಕುಮಾರ ಅವರು ಈ ಆಫರ್‌ ಅನ್ನು ನಯವಾಗಿಯೇ ತಿರಸ್ಕರಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಈಡಿಗ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ ಅವರು, ವೇದಿಕೆಯಲ್ಲಿ ಕುಳಿತಿದ್ದಾಗ ನಾನು ನಟ ಶಿವರಾಜಕುಮಾರ ಅವರಿಗೆ ನೀವು … Continued

ತೆರಿಗೆ ದಾಳಿಯಲ್ಲಿ ದಾಖಲೆ ಪ್ರಮಾಣದ ನಗದು ಹಣ ವಶ : ತನ್ನ ಪಕ್ಷದ ಸಂಸದರಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ; ಆದಾಯ ತೆರಿಗೆ ಇಲಾಖೆಯು ಸುಮಾರು 300 ಕೋಟಿ ರೂಪಾಯಿಗಳಷ್ಟು ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿರುವ ವರದಿಯ ನಂತರ ಸಂಸದ ಧೀರಜ್ ಸಾಹು ಅವರ ವ್ಯವಹಾರಗಳ ಜೊತೆ ಪಕ್ಷ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಶನಿವಾರ ಹೇಳಿದ್ದಾರೆ. “ಅವರ ವ್ಯವಹಾರಗಳ ಮೇಲೆ ದಾಳಿಯ ಮೇಲೆ ಆದಾಯ ತೆರಿಗೆ … Continued