ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಚಿಕ್ಕಪ್ಪನ ಮಗ ಹಾಗೂ ಬಿಜೆಪಿ ನಾಯಕ ವರುಣ್ ಗಾಂಧಿ ಅವರು ಉತ್ತರ ಪ್ರದೇಶದ ಗಾಂಧಿ ಮನೆತನದ ಭದ್ರಕೋಟೆ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ತಮ್ಮ ಪಕ್ಷ ನೀಡಿದ್ದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯು ಪ್ರಸ್ತಾವನೆ ಮುಂದಿಟ್ಟ ನಂತರ ಒಂದು ವಾರದವರೆಗೆ … Continued

ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಬಿಜೆಪಿಯ ಪ್ರಕಾರ, ಏಪ್ರಿಲ್ 2009 … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ “ರಾಬರ್ಟ್ ವಾದ್ರಾ ಅಬ್ ಕಿ ಬಾರ್” ಪೋಸ್ಟರ್…!

ಅಮೇಥಿ : ಉತ್ತರ ಪ್ರದೇಶದ ಅಮೇಥಿಯ ಕಾಂಗ್ರೆಸ್‌ ಅಭ್ಯರ್ಥಿಯ ಬಗ್ಗೆ ಸಸ್ಪೆನ್ಸ್ ನಡುವೆ, ಪಕ್ಷದ ಸ್ಥಳೀಯ ಕಚೇರಿಯ ಹೊರಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುವ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪೋಸ್ಟರ್‌ಗಳಲ್ಲಿ “ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್”, ಅಂದರೆ “ಅಮೇಥಿಯ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

“ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ” : ಪ್ರಧಾನಿ ಮೋದಿ

ಟೋಂಕ್: ‘ಕಾಂಗ್ರೆಸ್ ಪಕ್ಷವು ಮಹಿಳೆಯರ ಮಂಗಳಸೂತ್ರ ಕಸಿಯಲು ಬಯಸಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಚರ್ಚೆಯ ನಡುವೆಯೇ, ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದರ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಬಲವಾದ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ದೇಶದ ಮುಂದೆ ಇಟ್ಟಿದ್ದೇನೆ ಎಂದು ಪ್ರಧಾನಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಮಂಗಳವಾರ ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ … Continued

ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ಹುಬ್ಬಳ್ಳಿ: ವಿಧಾನ ಪರಿಷತ್‌ ಬಿಜೆಪಿ‌ ಸದಸ್ಯ ಕೆ.ಪಿ.ನಂಜುಂಡಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿನ‌ ಸಭಾಪತಿಯವರ ಗೃಹ ಕಚೇರಿಗೆ ಆಗಮಿಸಿದ ಕೆ.ಪಿ.ನಂಜುಂಡಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌  24) ಬೆಳಿಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ … Continued

ವೀಡಿಯೊ..| ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರ್‍ಯಾಲಿಯಲ್ಲಿ ಕುರ್ಚಿಗಳಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್​-ಆರ್​ಜೆಡಿ ಕಾರ್ಯಕರ್ತರು…!

ನವದೆಹಲಿ : ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡರು ಮತ್ತು ಪರಸ್ಪರರ ಮೇಲೆ ಕುರ್ಚಿಗಳು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ … Continued

ವಯನಾಡಿನಲ್ಲಿ ರಾಹುಲ್‌ ಗಾಂಧಿಗೆ ಶಾಕ್‌ ನೀಡಿದ ಬಿಜೆಪಿ : ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಮುಂಚಿತವಾಗಿ ರಾಹುಲ್‌ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‌ನಲ್ಲಿ ಕಾಂಗ್ರೆಸ್ಸಿಗೆ ಬಿಜೆಪಿ ಬಿಗ್‌ ಶಾಕ್‌ ನೀಡಿದೆ. ನಿರ್ಣಾಯಕ ಲೋಕಸಭೆ ಸ್ಪರ್ಧೆಗೆ ಮುಂಚಿತವಾಗಿ ಹಿನ್ನಡೆಯಾಗಿ, ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಅವರು ಕಾಂಗ್ರೆಸ್‌ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ … Continued