ಡಿಕೆ ಶಿವಕುಮಾರ ನಾಳೆಯೇ ಸಿಎಂ ಆಗೋದಾದ್ರೆ ಅವ್ರಿಗೆ 19 ಜೆಡಿಎಸ್ ಶಾಸಕರ ಬೆಂಬಲ: ಆಫರ್‌ ನೀಡಿದ ಕುಮಾರಸ್ವಾಮಿ..!

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ​ ನಾಳೆ ಈ ರಾಜ್ಯದ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಬೆಂಬಲ ಘೋಷಣೆ ಮಾಡಿದ್ದಾರೆ…. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ನಾಳೆ ಮುಖ್ಯಮಂತ್ರಿ ಆಗುವುದಾದರೆ ಆದರೆ ನಾವು ಬೆಂಬಲ ನೀಡುತ್ತೇವೆ ಎಂದರು. ಸುಮ್ಮನೆ ಜೆಡಿಎಸ್‌ನಿಂದ ಐದು ಜನ … Continued

ಲೋಕಸಭಾ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ತಲೆನೋವಾದ ಕರ್ನಾಟಕದ ನಾಯಕರ ʼಸಿಎಂ ಕುರ್ಚಿʼ ಜಗಳ

ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಧಾನವಿಲ್ಲ. ನಮ್ಮಲ್ಲಿ ಒಡಕಿಲ್ಲ, ನಾವೆಲ್ಲ ಒಂದೇ ಎಂದು ಎಷ್ಟೇ ಬಾರಿ ಪಕ್ಷದ ಮುಖಂಡರು ಮಾಧ್ಯಮಗಳ ಮುಂದೆ ಹೇಳಿಕೊಂಡರೂ ಒಡಕು ಹಾಗೂ ಅಸಮಾಧಾನ ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಈಗ ಎರಡು ಬಣಗಳ ನಡುವೆ ಈಗ ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಹೇಳಿಕೆಗಳ ಸಮರ ಜೋರಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನೇ ಐದು … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ಈಸಲ ಬಿಜೆಪಿಯೋ-ಕಾಂಗ್ರೆಸ್ಸೋ..? ಹೊರಬಿತ್ತು ಇಂಡಿಯಾ ಟಿವಿ-ಸಿಎನ್‌ಎಕ್ಸ್ ನ ಮತ್ತೊಂದು ಸಮೀಕ್ಷೆ

ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಒಟ್ಟು 230 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಹೇಳಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಐದು ವರ್ಷಗಳ ಹಿಂದೆ ಬಿಜೆಪಿ 109 ಸ್ಥಾನಗಳನ್ನು ಗೆದ್ದಿತ್ತು. ಇದಕ್ಕೆ ಹೋಲಿಸಿದರೆ … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued

ಕಾಂಗ್ರೆಸ್‌ ಜೊತೆ ಮೂಡದ ಒಮ್ಮತ: ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ಪ್ರಕಟಿಸಿದ ಸಿಪಿಎಂ

ಹೈದರಾಬಾದ್‌: ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸದಸ್ಯ ಪಕ್ಷವಾದ ಸಿಪಿಎಂ ಕಾಂಗ್ರೆಸ್‌ನೊಂದಿಗೆ ಮುನಿಸಿಕೊಂಡಿದ್ದು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಆದರೆ ಇಂಡಿಯಾ ಮೈತ್ರಿಕೂಟದ ಮತ್ತೊಂದು ಸದಸ್ಯ ಪಕ್ಷವಾದ ಸಿಪಿಐ, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವವರೆಗೆ ಎರಡು ದಿನ ಕಾದು ನೋಡಲು ತೀರ್ಮಾನಿಸಿದೆ. ಆಡಳಿತ ವಿರೋಧಿ ಮತಗಳು ಒಡೆದರೆ ಅದು ಬಿಆರ್‌ಎಸ್‌ಗೆ … Continued

ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ʼಇಂಡಿಯಾ ಮೈತ್ರಿಕೂಟʼದಲ್ಲಿ ಹೆಚ್ಚು ಪ್ರಗತಿಯಾಗಿಲ್ಲ, ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದೆ…”: ನಿತೀಶಕುಮಾರ

ಪಾಟ್ನಾ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ನ 2024 ರ ಲೋಕಸಭಾ ಚುನಾವಣೆಯ ತಯಾರಿಯಲ್ಲಿನ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ದೂಷಿಸಿದ ನಂತರ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭವಿಷ್ಯದ ಬಗ್ಗೆ ಗುರುವಾರ ಊಹಾಪೋಹಗಳು ಎದ್ದಿವೆ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಪ್ರಕಾರ ಕಾಂಗ್ರೆಸ್ – ಮೈತ್ರಿಕೂಟದ ದೊಡ್ಡ ಸದಸ್ಯ ಪಕ್ಷದಲ್ಲಿ ಒಂದು ಮತ್ತು … Continued

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲು

 ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಮೇಶ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. … Continued

‘ನಾನು ಒಳ್ಳೆಯ ಹಿಂದೂ, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 1.11 ಲಕ್ಷ ದೇಣಿಗೆ ನೀಡಿದ್ದೇನೆ’: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಭೋಪಾಲ್‌ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1.11 ಲಕ್ಷ ರೂಪಾಯಿ ದೇಣಿಗೆ ನೀಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಭಾನುವಾರ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ದಿಗಿಜಯ ಸಿಂಗ್‌ ರಾಜಧಾನಿ ಭೋಪಾಲ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್, “ನಾನು ಸನಾತನ ಧರ್ಮವನ್ನು ಅನುಸರಿಸುತ್ತೇನೆ ಮತ್ತು … Continued

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನ ಇಂದು, ಭಾನುವಾರ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕರ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿ ಗೌಡ ಬೆಂಗಳೂರು … Continued