ಲೋಕಸಭಾ ಚುನಾವಣೆ : ಕರ್ನಾಟಕದ 14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಕಣದಲ್ಲಿ ; ಕ್ಷೇತ್ರವಾರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು : ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಲೋಕಸಭೆಗೆ ನಡೆಯುವ ಮೊದಲ ಹಂತದಲ್ಲಿ ಚುನಾವಣೆಗೆ 14 ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಪಡೆಯುವ ಗಡುವು ಸೋಮವಾರ ಮುಕ್ತಾಯಗೊಂಡಿದ್ದು, 247 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಅಖಾಡ ಸಿದ್ಧವಾಗಿದೆ. ಏಪ್ರಿಲ್‌ 26ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರಗಳು … Continued

ಚುನಾವಣೆಯಲ್ಲಿ ತಮ್ಮ ಮಗ ಸೋಲಬೇಕು ಎಂದ ಹಿರಿಯ ಕಾಂಗ್ರೆಸ್ ನಾಯಕ…!

ತಿರುವನಂತಪುರಂ: ಕೇರಳದ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮ ಪುತ್ರ ಅನಿಲ ಕೆ. ಆಂಟನಿ ಚುನಾವಣೆಯಲ್ಲಿ ಗೆಲ್ಲಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ರಕ್ಷಣಾ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಸುದೀರ್ಘ ಸಮಯದ ನಂತರ ಮೌನ ಮುರಿದ ಎ.ಕೆ.ಆಂಟನಿ ತಮ್ಮ ಮಗ ಸೋಲಬೇಕು, ಅವರ ವಿರುದ್ಧ ಸ್ಪರ್ಧಿಸಿರುವ ದಕ್ಷಿಣ ಕೇರಳ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪಕ್ಷದ ಬ್ಯಾನರ್‌ನಲ್ಲಿ ಬಿಜೆಪಿ ಅಭ್ಯರ್ಥಿಯ ಚಿತ್ರ….!

ಭೋಪಾಲ್ : ಮಧ್ಯಪ್ರದೇಶದ ಮಂಡಲಾ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಅವರ ಚುನಾವಣಾ ಪ್ರಚಾರದ ವೇಳೆ ಕಟ್ಟಿದ್ದ ಕಾಂಗ್ರೆಸ್‌ ಪಕ್ಷದ ಬ್ಯಾನರ್‌ನಲ್ಲಿ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಫಗ್ಗನ್‌ ಸಿಂಗ್‌ ಕುಲಸ್ತೆ ಅವರ ಫೋಟೊ ರಾರಾಜಿಸಿದೆ. ಇದು ಕಾಂಗ್ರೆಸ್‌ ನಾಯಕರ ಮುಜುಗರಕ್ಕೆ ಕಾರಣವಾಗಿದೆ. ಈ ಘಟನೆ ಬಗ್ಗೆ ಕಾಂಗ್ರೆಸ್‌ ಅದನ್ನು ‘ಮಾನವ ದೋಷ’ ಎಂದು … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು

ಬೆಂಗಳೂರು: ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಚಿವ ದಿನೇಶ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಿರುವ ಶಾಸಕ ಯತ್ನಾಳ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೇಷಾದ್ರಿಪುರ ಪೊಲೀಸ್ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ, ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ ಸೇರಿ ಹಲವು ಭರವಸೆ

ನವದೆಹಲಿ : 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ರಾಷ್ಟ್ರೀಯ ಜಾತಿ ಗಣತಿ ಪ್ರಣಾಳಿಕೆಯ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. … Continued

“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ನಟಿ-ಸಂಸದೆ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಸುರ್ಜೆವಾಲಾ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗ

ನವದೆಹಲಿ : ಮಥುರಾ ಕ್ಷೇತ್ರದ ಹಾಲಿ ಬಿಜೆಪಿ ಸಂಸದೆ ಹಾಗೂ ನಟಿ ಹೇಮಮಾಲಿನಿ ವಿರುದ್ಧ ಕಾಂಗ್ರೆಸ್ ಸಂಸದ ರಣದೀಪ ಸಿಂಗ್ ಸುರ್ಜೆವಾಲ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ಇದೇ ವೇಳೆ ಪ್ರಕರಣ ಸಂಬಂಧ ಹರಿಯಾಣದ ರಾಜ್ಯ … Continued

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ಸಿಗೆ ಆಘಾತ : ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಗೌರವ ವಲ್ಲಭ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಇದನ್ನು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌರವ ವಲ್ಲಭ ಅವರು, ಪಕ್ಷವು ‘ದಿಕ್ಕಿಲ್ಲದೆ’ ಸಾಗುತ್ತಿದೆ ಎಂದು ಕರೆದಿದ್ದಾರೆ ಮತ್ತು ತಮ್ಮ ನಿರ್ಗಮನಕ್ಕೆ ಜಾತಿ ಗಣತಿಯಂತಹ … Continued

ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌

ನವದೆಹಲಿ: ‘ಅಶಿಸ್ತು’ ಮತ್ತು ‘ಪಕ್ಷ ವಿರೋಧಿ ಹೇಳಿಕೆ’ಗಾಗಿ ಹಿರಿಯ ನಾಯಕ ಸಂಜಯ ನಿರುಪಮ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ದೂರುಗಳನ್ನು ಗಮನಿಸಿ ಕಾಂಗ್ರೆಸ್ ಅಧ್ಯಕ್ಷರು ಸಂಜಯ ನಿರುಪಮ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು … Continued